ಉತ್ತಮ ಸಮಾಜಕ್ಕಾಗಿ

ಅದ್ಧೂರಿ ಜಯಂತಿ ಆಚರಣೆಗೆ ನಿರ್ಧಾರ

news

0

ಬ್ರಹ್ಮಶ್ರೀ ನಾರಾಯಣಗುರು ಜಯಂತಿ: ಪೂರ್ವಭಾವಿ ಸಭೆ
ಅದ್ಧೂರಿ ಜಯಂತಿ ಆಚರಣೆಗೆ ನಿರ್ಧಾರ
ಬೆಳಗಾವಿ:(news belgaum) ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 27 ರಂದು ಅದ್ಧೂರಿಯಾಗಿ ಆಚರಿಸಲು ಎಲ್ಲ ವ್ಯವಸ್ಥೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
News Belgaum-ಅದ್ಧೂರಿಯಾಗಿ ಆಚರಿಸಲು ಎಲ್ಲ ವ್ಯವಸ್ಥೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ. ಬೂದೆಪ್ಪ ಅವರು ಅಧಿಕಾರಿಗಳಿಗೆ ಸೂಚನೆಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ (ಆ.18) ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ನಿಮಿತ್ಯ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆ.27 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಕುಮಾರ ಗಂಧರ್ವ ರಂಗಮಂದಿರದವರೆಗೆ ನಾರಾಯಣಗುರು ಭಾವಚಿತ್ರ ಮೆರವಣಿಗೆ ಜರುಗಲಿದೆ. ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೆ ಎಲ್ಲ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು, ಉಪನ್ಯಾಸ ನೀಡಲು ವಿಶೇಷ ಉಪನ್ಯಾಸಕರನ್ನು ಆಹ್ವಾನಿಸಬೇಕು, ಮೆರವಣಿಗೆಗೆ ಕಲಾತಂಡಗಳನ್ನು ಕರೆಸಬೇಕೆಂದು ಸೂಚಿಸಿದರು. ಎಲ್ಲ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು.
ಮೆರವಣಿಗೆ ಮಾರ್ಗದಲ್ಲಿ ಸ್ವಚ್ಛತೆ ಕೈಗೊಳ್ಳಬೇಕು, ನಗರದ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಮಾಡಬೇಕು, ರಂಗಮಂದಿರದ ವೇದಿಕೆಯನ್ನು ಅಲಂಕರಿಸಬೇಕು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು, ಊಟದ ವ್ಯವಸ್ಥೆ ಮಾಡಬೇಕು, ಊಟದ ವ್ಯವಸ್ಥೆ ಇರುವ ಸ್ಥಳದಲ್ಲಿ ಶಾಮಿಯಾನ ಹಾಕಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರ ಸ್ಥಳೀಯ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮದಲ್ಲಿ ಸರ್ಕಾರಿ ಯೋಜನೆ, ಕಾರ್ಯಕ್ರಮಗಳ ಪ್ರಚಾರ ಮಾಡಬಾರದು, ಈ ಬಗ್ಗೆ ಭಾಷಣದಲ್ಲಿ ಮಾತನಾಡಬಾರದೆಂದು ತಿಳಿಸಿದರು.
ಕನ್ಮಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಶೈಲ್ ಕರಿಶಂಕರಿ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ತಹಶೀಲ್ದಾರ ಮಂಜುಳಾ ನಾಯಕ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.