ಉತ್ತಮ ಸಮಾಜಕ್ಕಾಗಿ

ಅ.15 ರಂದು 64ನೇ ವನ್ಯಜೀವಿ ಸಪ್ತಾಹ ಸಮಾರಂಭ

0

  ಅ.15 ರಂದು 64ನೇ ವನ್ಯಜೀವಿ ಸಪ್ತಾಹ ಸಮಾರಂಭ

ಬೆಳಗಾವಿ: ಬೆಳಗಾವಿ ವಿಭಾಗದ ಅರಣ್ಯ ಇಲಾಖೆಯ ವತಿಯಿಂದ “64ನೇ ವನ್ಯಜೀವಿ ಸಪ್ತಾಹ ಸಮಾರೋಪ” ಸಮಾರಂಭವನ್ನು ಅಕ್ಟೋಬರ್ 15 ರಂದು ಬೆಳಿಗ್ಗೆ 11-30 ಗಂಟೆಗೆ ಭೂತರಾಮನಹಟ್ಟಿ ಕಿತ್ತೂರು ರಾಣಿ ಚನ್ನಮ್ಮಾ ಕಿರು ಮೃಗಾಲಯದಲ್ಲಿ ಆಯೋಜಿಸಲಾಗಿದೆ.

ರಾಜ್ಯ ಪೌರಾಡಳಿತ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೇಂದ್ರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರು ಹಾಗೂ ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರ. ಯಮಕನಮರಡಿ ಶಾಸಕರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು.
ಜಿಲ್ಲೆಯ ಸಂಸದರು, ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾಸಭಾ ಸದಸ್ಯರು ಹಾಗೂ ಗಣ್ಯರು ಸೇರಿದಂತೆ ಮೈಸೂರು ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಿ.ಪಿ. ರವಿ, ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಪಿ.ಎ. ಮೇಘಣ್ಣವರ, ಬೆಳಗಾವಿ ವೃತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪಿ.ಬಿ. ಕರುಣಾಕರ, ಜಿಲ್ಲಾಧಿಕಾರಿಗಳಾದ ಡಾ. ಎಸ್.ಬಿ. ಬೊಮ್ಮನಹಳ್ಳಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿ.ಎಚ್. ಸುಧೀರಕುಮಾರ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ ಹಾಗೂ ವನ್ಯ ಜೀವಿ ಪರಿಪಾಲಕರಾದ ಸಚೀನ ಪಾಟೀಲ ಅವರು ಉಪಸ್ಥಿತರಿರುವರು.

The post ಅ.15 ರಂದು 64ನೇ ವನ್ಯಜೀವಿ ಸಪ್ತಾಹ ಸಮಾರಂಭ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.