ಉತ್ತಮ ಸಮಾಜಕ್ಕಾಗಿ

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಸಚಿವ ಸಂಪುಟ

0

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಸಚಿವ ಸಂಪುಟ

ಹುಬ್ಬಳ್ಳಿ: ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಸಚಿವ ಸಂಪುಟ ವಿಸ್ತರಣೆ ಮಾಡುವದಾಗಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಹೇಳಿದ್ದಾರೆ.

ಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವ ಮೂಲಕ ಸಮತೋಲನ ಕಾಯ್ದುಕೊಳ್ಳಲಾಗುತ್ತದೆ ಎಂದರು.

ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಎಸ್ ಐ ಟಿ ಅಧಿಕಾರಿಗಳು ರಾಷ್ಟ್ರ ಮೆಚ್ಚುವಂತಹ ಕೆಲಸ ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದು, ಇನ್ನೆನ್ನೂ ಪ್ರಕರಣ ತನಿಖೆ ಮುಕ್ತಾಯದ ಹಂತ ತಲುಪಿದೆ. ಆರೋಪಿಗಳು ಮಾಡುತ್ತಿರುವ ಆಮೀಷದ ಆರೋಪ ಸತ್ಯಕ್ಕೆ ದೂರವಾದವು ಎಂದು ಸ್ಪಷ್ಟ ಪಡಿಸಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬಿಜೆಪಿ ಆಮಿಷ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ. ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸಬೇಕೊ ಬೇಡವೇ ಎಂಬುದನ್ನು ಅಧ್ಯಕ್ಷರು ನಿರ್ಧರಿಸಲಿದ್ದಾರೆ ಎಂದರು.

The post ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಸಚಿವ ಸಂಪುಟ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.