ಉತ್ತಮ ಸಮಾಜಕ್ಕಾಗಿ

ಉಸ್ತುವಾರಿ ಸಚಿವರ ಜನತಾದರ್ಶನ ಜ.28ಕ್ಕೆ ಮುಂದೂಡಿಕೆ

0

ಬೆಳಗಾವಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆಯಬೇಕಿದ್ದ ಸಾರ್ವಜನಿಕ ಜನಸ್ಪಂದನ(ಜನತಾದರ್ಶನ) ಸಭೆಯನ್ನು ಜ. 28ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ(ಜ.24) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.
ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಜ.28ರಂದು ಬೆಳಿಗ್ಗೆ 9.30 ಗಂಟೆಯಿಂದ ಜನಸ್ಪಂದನ(ಜನತಾದರ್ಶನ) ಸಭೆ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರ ಅಹವಾಲುಗಳನ್ನು ಖುದ್ದಾಗಿ ಕೇಳಲಿದ್ದು, ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಒಂದು ವೇಳೆ ತಾಂತ್ರಿಕ ಕಾರಣಗಳಿಂದ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಸಾಧ್ಯವಾಗದಿದ್ದರೆ ನಿಗದಿತ ಕಾಲಾವಧಿಯೊಳಗೆ ಅದನ್ನು ಬಗೆಹರಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಜನತಾದರ್ಶನದಲ್ಲಿ ಎಲ್ಲ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.
ಸರ್ಕಾರಿ ಕೆಲಸಗಳಲ್ಲಿ ಅನಗತ್ಯ ವಿಳಂಬ ಸೇರಿದಂತೆ ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಸಚಿವರಿಗೆ ತಿಳಿಸಬಹುದು. ದೂರುಗಳನ್ನು ಕೂಡ ಸಲ್ಲಿಸಬಹುದು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜನತಾದರ್ಶನದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: