ಉತ್ತಮ ಸಮಾಜಕ್ಕಾಗಿ

ಎಂಎಸ್ ಕಾಯ್ದೆ-2013 ಅರಿವು ಕಾರ್ಯಾಗಾರ ಪೌರಕಾರ್ಮಿಕರು ಸ್ವಚ್ಛ ಭಾರತ ಯೋಜನೆಯ ರಾಯಭಾರಿಗಳು: – ಸಂಸದ ಸುರೇಶ ಅಂಗಡಿ

0

ಎಂಎಸ್ ಕಾಯ್ದೆ-2013 ಅರಿವು ಕಾರ್ಯಾಗಾರ
ಪೌರಕಾರ್ಮಿಕರು ಸ್ವಚ್ಛ ಭಾರತ ಯೋಜನೆಯ ರಾಯಭಾರಿಗಳು:
– ಸಂಸದ ಸುರೇಶ ಅಂಗಡಿ

ಬೆಳಗಾವಿ: ಪೌರಕಾರ್ಮಿಕರು ಸ್ವಚ್ಛ ಭಾರತ ಯೋಜನೆಯ ನಿಜವಾದ ರಾಯಭಾರಿಗಳಾಗಿದ್ದು, ದೇಶದ ಸ್ವಚ್ಛತೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಂಸದ ಸುರೇಶó ಅಂಗಡಿ ಅವರು ಹೇಳಿದರು.

ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಶುಕ್ರವಾರ (ಸೆ.28) ಹಮ್ಮಿಕೊಂಡಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ಮ್ಯಾನುವಲ್ ಸ್ಕಾವೆಂಜರ್ ಕಾಯ್ದೆ-2013 ಅರಿವು ಕಾರ್ಯಾಗಾರವನ್ಮು ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ನಗರಗಳನ್ನು ಪ್ರತಿದಿನ ಸ್ವಚ್ಛಗೊಳಿಸಿ, ಸುಂದರ ನಗರ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಪೌರಕಾರ್ಮಿಕರಿಗೆ ವೇತನವನ್ನು ನೇರವಾಗಿ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಶೀಘ್ರದಲ್ಲೇ ಆಗಬೇಕು ಎಂದರು.

ಪೌರಕಾರ್ಮಿಕರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳನ್ನು ಒದಗಿಸಲಾಗುತ್ತಿದ್ದು, ಪೌರಕಾರ್ಮಿಕರು ಇವುಗಳನ್ನು ಸದುಪಯೋಗಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕೆಂದು ಸಲಹೆ ನೀಡಿದರು.

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಅವರು ಪ್ರಾಸ್ತಾವಿಕ ಮಾತನಾಡಿ, ನಗರಗಳ ಸ್ವಾಸ್ಥ್ಯ ಕಾಪಾಡಲು ಪೌರಕಾರ್ಮಿಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ದೇಶದಲ್ಲಿ ಎಲ್ಲರೂ ಆರೋಗ್ಯವಾಗಿರಲು ಪೌರಕಾರ್ಮಿಕರು ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹೊಸ ಕಾಯ್ದೆ, ಕಾನೂನು ಹಾಗೂ ಯೋಜನೆಗಳನ್ನು ರೂಪಿಸುವ ಮೂಲಕ ಪೌರಕಾರ್ಮಿಕರು ಉತ್ತಮ ಜೀವನ ರೂಪಿಸಿಕೊಳ್ಳಲು ಅನುಕೂಲ ಮಾಡಿಕೊಡಲಾಗುತ್ತಿದೆ. ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗ ಪೌರಕಾರ್ಮಿಕರಿಗೆ ತಮ್ಮ ಹಕ್ಕು, ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪೌರ ಕಾರ್ಮಿಕರ ಖಾತೆಗೆ ನೇರವಾಗಿ ವೇತನವನ್ನು ಜಮಾ ಮಾಡಲಾಗುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲೂ ಪೌರಕಾರ್ಮಿಕರಿಗೆ ವೇತನವನ್ನು ನೇರವಾಗಿ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಮುಂದಿನ 15 ದಿನಗಳಲ್ಲಿ ಆಗಬೇಕು. ಖಾಲಿ ಇರುವ ಹುದ್ದೆಗಳಿಗೆ ಪೌರಕಾರ್ಮಿಕರನ್ನು ನೇಮಕ ಮಾಡಬೇಕಿಕೊಳ್ಳಬೇಕು. ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅರ್ಹ ಪೌರಕಾರ್ಮಿರನ್ನು ಖಾಯಂಗೊಳಿಸಬೇಕೆಂದು ಸೂಚಿಸಿದರು.

ಶಾಸಕ ಅಭಯ ಪಾಟೀಲ ಮಾತನಾಡಿ, ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಜಿಲ್ಲೆಯ ಪೌರಕಾರ್ಮಿಕರಿಗೆ ವಸತಿ ಹಾಗೂ ಮೂಲಭೂತ ಸೌಲಭ್ಯ ಒದಗಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದರು.
ಶಾಸಕ ಅನಿಲ ಬೆನಕೆ ಮಾತನಾಡಿ, ತಮ್ಮ ಮತಕ್ಷೇತ್ರದ ವ್ಯಾಪ್ತಿಯ ಪೌರಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಲು ಬದ್ಧ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅವರು, ಪೌರಕಾರ್ಮಿಕರು ದುಶ್ಚಟಗಳಿಂದ ದೂರವಿರಬೇಕು. ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಸಲಹೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ, ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಉಮಾ ಸಾಲಿಗೌಡರ ಸೇರಿದಂತೆ ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ನೂರಾರು ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಾದ ಪ್ರವೀಣ ಬಾಗೇವಾಡಿ ಅವರು ಸ್ವಾಗತಿಸಿದರು.

ಪೌರಕಾರ್ಮಿಕರಿಗೆ ಸನ್ಮಾನ:News Belgaum-ಎಂಎಸ್ ಕಾಯ್ದೆ-2013 ಅರಿವು ಕಾರ್ಯಾಗಾರ ಪೌರಕಾರ್ಮಿಕರು ಸ್ವಚ್ಛ ಭಾರತ ಯೋಜನೆಯ ರಾಯಭಾರಿಗಳು:  - ಸಂಸದ ಸುರೇಶ ಅಂಗಡಿ
ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆ ಮಾಡಿದ ಅತ್ಯುತ್ತಮ ಪೌರಕಾರ್ಮಿಕರನ್ನು ಸನ್ಮಾನಿಸಿ, ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.
ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಜಗದೀಶ ಹಿರೇಮನಿ ಹಾಗೂ ಇನ್ನಿತರ ಗಣ್ಯರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿ, ಸ್ಮರಣಿಕೆ ನೀಡಲಾಯಿತು.

The post ಎಂಎಸ್ ಕಾಯ್ದೆ-2013 ಅರಿವು ಕಾರ್ಯಾಗಾರ ಪೌರಕಾರ್ಮಿಕರು ಸ್ವಚ್ಛ ಭಾರತ ಯೋಜನೆಯ ರಾಯಭಾರಿಗಳು: – ಸಂಸದ ಸುರೇಶ ಅಂಗಡಿ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.