ಉತ್ತಮ ಸಮಾಜಕ್ಕಾಗಿ

ಕೃಷಿಭಾಗ್ಯ ಯೋಜನೆ: ಅರ್ಜಿ ಆಹ್ವಾನ

Agriculture Plan: Application Invitation

0

ಬೆಳಗಾವಿ: (news belagavi) 2018-19ನೇ ಸಾಲಿಗೆ ಕೃಷಿಭಾಗ್ಯ ಯೋಜನೆಯಡಿ ತೋಟಗಾರಿಕೆ ಕಾರ್ಯಕ್ರಮಗಳಾದ ಪಾಲಿಮನೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪಾಲಿಮನೆ (ಹಸಿರುಮನೆ) ನಿರ್ಮಾಣ, ಕೃಷಿಹೊಂಡ, ಡಿಸೇಲ್/ಸೋಲಾರ್ ಮೊಟಾರ್ ಅಳವಡಿಕೆ, ಅಧಿಕ ಮೌಲ್ಯದ ಬೆಳೆ ಉತ್ಪಾದನೆ ಹಾಗೂ ಕೃಷಿಹೊಂಡ ಚಟುವಟಿಕೆ (ತೋಟಗಾರಿಕೆ ಬೆಳೆಗಳಿಗೆ ಮಾತ್ರ) ಯೋಜನೆಯನ್ನು ಜಿಲ್ಲೆಯ ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಹುಕ್ಕೇರಿ, ಗೋಕಾಕ, ರಾಯಬಾಗ, ರಾಮದುರ್ಗ ಹಾಗೂ ಸವದತ್ತಿ ತಾಲೂಕುಗಳಲ್ಲಿ (ಅಚ್ಚುಕಟ್ಟು ಪ್ರದೇಶ ಹೊರತುಪಡಿಸಿ) ಮಾತ್ರ
ಅನುಷ್ಠಾನಗೊಳಿಸಲಾಗುತ್ತಿದೆ.
ಯೋಜನೆಯ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನವನ್ನು ಇಲಾಖೆ ಮಾರ್ಗಸೂಚಿಯಂತೆ ಹಾಗೂ ಜಿಲ್ಲೆಗೆ ನೀಡಿರುವ ಗುರಿಗಳನ್ವಯ
ನೀಡಲಾಗುವುದು.
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ರೈತರು ಸ್ವಂತ ಜಮೀನು ಮತ್ತು ನೀರಾವರಿ ಸೌಲಭ್ಯ ಹೊಂದಿರಬೇಕು. ಆಧಾರಕಾರ್ಡ, ಗುರುತಿನ
ಚೀಟಿ, ರಾಷ್ಟ್ರೀಕೃತ ಬ್ಯಾಂಕುಗಳ ಪಾಸ್‍ಬುಕ್ಕಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಕೈಬರಹದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಿದ್ದು, ಮೊಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಬೇಕು.
ಆಸಕ್ತಿಯುಳ್ಳ ರೈತರು ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.