ಉತ್ತಮ ಸಮಾಜಕ್ಕಾಗಿ

ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ

0

ಬೆಳಗಾವಿ: ಜಿಲ್ಲಾಡಳಿತ ವತಿಯಿಂದ ಇದೇ ಜನೇವರಿ 26 ರಂದು ಗಣರಾಜ್ಯೋತ್ಸವವನ್ನು ನಗರದ ಜಿಲ್ಲಾ ಕ್ರೀಡಾಂಗಣ (ಕೆ.ಎಲ್.ಇ.ಕ್ಯಾಂಪಸ್)ದಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣ ನಂತರ ಸಚಿವರು ಸಂಯುಕ್ತ ಪರೇಡ್ ನಿರೀಕ್ಷಣೆ ಮಾಡಿ ಭಾಷಣ ಮಾಡುವರು. ಬೆಳಿಗ್ಗೆ 9-15 ಗಂಟೆಗೆ ಕವಾಯತು ಪ್ರದರ್ಶನ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತರಿಗೆ ಹಾಗೂ ಸ್ವಾತಂತ್ರ್ಯ ಯೋಧರಿಗೆ ಸತ್ಕಾರ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರಾದ ಶ್ರೀ ಅಶೋಕ ಪಟ್ಟಣ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಫಿರೋಜ್ ಶೇಠ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಶ್ರೀ ಗಣೇಶ ಹುಕ್ಕೇರಿ ಅವರು ಗೌರವಾನ್ವಿತ ಅತಿಥಿಗಳಾಗಿ, ಜಿಲ್ಲೆಯ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು.
ನಂತರ ಅಂದು ಸಂಜೆ 6 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಶ್ರೀ ಎನ್ ಜಯರಾಮ ಅವರು ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.