ಉತ್ತಮ ಸಮಾಜಕ್ಕಾಗಿ

ಗಣರಾಜ್ಯೋತ್ಸವ, ಜನತಾ ದರ್ಶನಕ್ಕೆ ಅಧಿಕಾರಿಗಳ ಕಡ್ಡಾಯ ಹಾಜರಾತಿಗೆ ಜಿಲ್ಲಾಧಿಕಾರಿ ಆದೇಶ

0

ಬೆಳಗಾವಿ, ಜನವರಿ 20 ಜನವರಿ 26 ರಂದು ಜರಗುವ ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವಕ್ಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ 27 ರಂದು ಬೆಳಿಗ್ಗೆ 9-30ಕ್ಕೆ ಲೋಕೋಪಯೋಗಿ ಇಲಾಖೆ ಸಕೀರ್ಟ ಹೌಸ್‍ದಲ್ಲಿ ಜರಗುವ ಜನತಾದರ್ಶನ ಕಾರ್ಯಕ್ರಮಕ್ಕೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಜಿಲ್ಲಾಧಿಕಾರಿಗಳಾದ ಶ್ರೀ ಎನ ಜಯರಾಮ ಅವರು ಆದೇಶಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ, ಮಾತನಾಡಿದರು.
ಈ ವರ್ಷ ಗಣರಾಜ್ಯೋತ್ಸವವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಅಚರಿಸಲಾಗುತ್ತಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.

ಸರ್ಕಾರದ ಎಲ್ಲ ಇಲಾಖೆ, ನಿಗಮ ಹಾಗೂ ಸ್ವಾಯುತ ಸಂಸ್ಥೆಗಳ ಕೇಂದ್ರ ಸ್ಥಾನದಲ್ಲಿರುವ ಅಧಿಕಾರಿಗಳು ತಮ್ಮ ಸಿಬ್ಬಂಯೊಂದಿಗೆ ಬೆಳಿಗ್ಗೆ 8-30ರೊಳಗೆಸ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಪ್ರತಿ ಇಲಾಖೆಗೆ ಪ್ರತ್ಯಕ ಸ್ಥಳ ಹಾಗೂ ನೋಡಲ್ ಅಧಿಕಾರಿಯನ್ನುನೇಮಿಸಲಾಗುತ್ತಿದ್ದು, ಎಲ್ಲ ವರ್ಗದ ಸಿಬ್ಬಂದಿ ಕಾರ್ಯಕ್ರಮಕ್ಕೆ ಹಾಜರಿರಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಜಿಲ್ಲಾ ಮಟ್ಟದ ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಾತಿ ಪಡೆದು ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕು.
ಜನವರಿ 26 ರ ಸಂಜೆ ಕೋಟೆ ಕೆರೆ ಆವರಣದ ಬುಡಾ ಕಚೇರಿ ಹತ್ತಿರ ಗಣರಾಜ್ಯೋತ್ಸವದ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾದರ್ಶನ:
ಸರ್ಕಾರದ ನಿರ್ದೇಶನದಂತೆ ಜನವರಿ 27 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9-30ಕ್ಕೆ ಲೋಕೋಪಯೋಗಿ ಇಲಾಖೆ ಸಕೀರ್ಟ ಹೌಸ್‍ದಲ್ಲಿ ಜರಗುವ ಜನತಾದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಎಲ್ಲ ಅಧಿಕಾರಿಗಳು ಖುದ್ದು ಹಾಜರಿರಬೇಕು. ಮುಂದಿನ ಮೂರು ದಿನಗಳಲ್ಲಿ ತಮ್ಮ ಕಚೇರಿಗಳಲ್ಲಿ ಬಾಕಿ ಇರುವ ಸಾರ್ವಜನಿಕರ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು. ಕಾಟಾಚಾರಕ್ಕೆ ಅರ್ಜಿ ವಿಲೇವಾರಿ ಮಾಡದೆ ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ತಕ್ಷಣ ಬಾಕಿ ಮತ್ತು ಇತ್ಯರ್ಥಪಡಿಸಿದ ಅರ್ಜಿಗಳನ್ನು ವಿಷಯವಾರು ನಮೂನೆಯಲ್ಲಿ ನಮೂದಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಅವರು ಸೂಚಿಸಿದರು.

ಬರಗಾಲ ಪರಿಹಾರ ಕಾರ್ಯಕ್ಕೆ ಚುರುಕು:
ಜಿಲ್ಲೆಯಲ್ಲಿ ಭೀಕರ ಬರಗಾಲದ ಚಾಯೆ ಕುಂಡು ಬರುತ್ತಿದ್ದು, ಪರಿಹಾರ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ವಿವಿಧ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಜಿಲ್ಲೆಯ 117 ಗ್ರಾಮಗಳನ್ನು ಒಳಗೊಂಡಿರುವ 170 ಗ್ರಾಮ ಪಂಚಾಯತಿಗಳಿಗೆ ತಾಲೂಕಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗುತ್ತಿದೆ. ಅದರಂತೆ ಪ್ರತಿ ತಾಲೂಕಿಗೆ ಒರ್ವ ಜಿಲ್ಲಾಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವಂತೆ ಕ್ರಮಕೈಗೊಳ್ಳಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳು ಸರ್ಕಾರಿ ಸಭೆ ಹಾಗು ಇತರೆ ಕಾರ್ಯಗಳಿಗಾಗಿ ಜಿಲ್ಲೆಯಿಂದ ಹೊರಹೋಗಬೇಕಾದ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಲಿಖಿತವಾಗಿ ಅನುಮತಿ ಪಡೆದು ಹೋಗಬೇಕು. ಅದೆರೀತಿ ಜಿಲ್ಲಾ ಪಂಚಾಯತ ಅಧೀನದಲ್ಲಿ ಬರುವ ಇಲಾಖೆಗಳನ್ನು ಹೊರತುಪಡಿಸಿ ಇತರೆ ಇಲಾಖೆಯ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಇದಕ್ಕೆ ವ್ಯತರಿಕ್ತವಾಗಿ ವರ್ತಿಸುವ ಮತ್ತು ಅನುಮತಿ ಇಲ್ಲದೆ ತೆರಳುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.
ಎಲ್ಲ ಸರ್ಕಾರಿ ನೌಕರರು ಜಿಲ್ಲೆಯ ಬರದ ಹಿನ್ನಲೆಯಲ್ಲಿ ಕರ್ತವ್ಯದಿಂದ ವಿಮುಖರಾಗದೆ ಸಾರ್ವಜನಿಕ ಕಾಳಜಿ ಹಾಗೂ ಕಳಕಳಿಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳನ್ನು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಮಚಂದ್ರನ್ ಆರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.