ಉತ್ತಮ ಸಮಾಜಕ್ಕಾಗಿ

ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ: ಛಾಯಾಚಿತ್ರ ಪ್ರದರ್ಶನ ಗಾಂಧೀಜಿಗೆ ನಮನ ವಿಶೇಷ ಕಾರ್ಯಕ್ರಮ ಅ.2 ರಂದು

0

ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ: ಛಾಯಾಚಿತ್ರ ಪ್ರದರ್ಶನ
ಗಾಂಧೀಜಿಗೆ ನಮನ ವಿಶೇಷ ಕಾರ್ಯಕ್ರಮ ಅ.2 ರಂದು

ಬೆಳಗಾವಿ, ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಮಂಗಳವಾರ(ಅಕ್ಟೋಬರ್ 2) ಬೆಳಿಗ್ಗೆ 10 ಗಂಟೆಗೆ ಟಿಳಕವಾಡಿಯ ವೀರಸೌಧದಲ್ಲಿ ಗಾಂಧೀಜಿಗೆ ನಮನ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಅಪರೂಪದ ಛಾಯಾಚಿತ್ರ ಪ್ರದರ್ಶನ, ಗಾಂಧೀಜಿಯವರ ಜೀವನ ಚರಿತ್ರೆ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ, ಗಾಂಧೀಪ್ರಿಯ ಭಜನ್‍ಗಳು ಮತ್ತು ವಿಶೇಷ ಉಪನ್ಯಾಸ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಅಭಯ್ ಪಾಟೀಲ ಅವರು ಅಧ್ಯಕ್ಷತೆ ವಹಿಸುವರು.

ಖ್ಯಾತ ನಾಟಕಕಾರ ಹಾಗೂ ಸಾಹಿತಿ ಡಿ.ಎಸ್.ಚೌಗಲೆ ಅವರು ಗಾಂಧೀಜಿ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು ಗಾಂಧೀಜಿಗೆ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಪರೂಪದ ಛಾಯಾಚಿತ್ರ ಪ್ರದರ್ಶನ:

ಕರ್ನಾಟಕದಲ್ಲಿ ಗಾಂಧೀಜಿ ಎಂಬ ಶೀರ್ಷಿಕೆಯಡಿಯಲ್ಲಿ ಮಹಾತ್ಮಾ ಗಾಂಧೀಜಿ ಅವರು ಕರ್ನಾಟಕದಲ್ಲಿ ವಿವಿಧ ಕಡೆ ಬೇಟಿ ನೀಡಿದ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದೆ.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧೀಜಿ ಭಾಗವಹಿಸಿದ ಚಿತ್ರಗಳು, 1915ರಲ್ಲಿ ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಚಿತ್ರಗಳು, ಯಶವಂತಪುರದಲ್ಲಿ ಪ್ರಾರ್ಥನಾ ಸಭೆ ನಡೆಸುತ್ತಿರುವುದು; ಶಿರಸಿ, ಕಾರವಾರ ಹಾಗೂ ಮಂಗಳೂರಿನಲ್ಲಿ ಹರಿಜನ ಪ್ರವಾಸ ನಡೆಸಿದ ಛಾಯಾಚಿತ್ರಗಳು; 1937ರಲ್ಲಿ ಬೆಳಗಾವಿ ಜಿಲ್ಲೆಯ ಹುದಲಿಯಲ್ಲಿ ನಡೆದ ಗಾಂಧೀ ಸೇವಾ ಸಂಘದ ಸಮ್ಮೇಳನದಲ್ಲಿ ಭಾಗವಹಿಸಿರುವುದು;

ದಕ್ಷಿಣ ಆಫ್ರಿಕಾದಲ್ಲಿ ಗಾಂಧೀಜಿ ವೃತ್ತಿಜೀವನ ಹಾಗೂ ಲಂಡನ್‍ನಲ್ಲಿ ನಡೆದ ದುಂಡು ಮೇಜಿನ ಸಭೆಯ ಚಿತ್ರಗಳು ಸೇರಿದಂತೆ ಅವರ ಬದುಕಿನ ವಿವಿಧ ಮಜಲುಗಳನ್ನು ಒಳಗೊಂಡ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ.
ಟಿಳಕವಾಡಿಯ ವೀರಸೌಧ ಉದ್ಯಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

The post ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ: ಛಾಯಾಚಿತ್ರ ಪ್ರದರ್ಶನ ಗಾಂಧೀಜಿಗೆ ನಮನ ವಿಶೇಷ ಕಾರ್ಯಕ್ರಮ ಅ.2 ರಂದು appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.