ಉತ್ತಮ ಸಮಾಜಕ್ಕಾಗಿ

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ

0

ಬೆಳಗಾವಿ, ಜನವರಿ 19 ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ರಮೇಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಜನಸ್ಪಂದನಾ ಸಭೆಯನ್ನು ಇದೇ ಜನವರಿ 27 ರಂದು ಮುಂಜಾನೆ 10 ಗಂಟೆಗೆ ನಗರದ ಸರ್ಕೀಟ್ ಹೌಸ್‍ನಲ್ಲಿ ಆಯೋಜಿಸಲಾಗಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾನೂನುಬದ್ಧ ಕೆಲಸಗಳೆನಾದರು ಬಾಕಿ ಇದ್ದಲ್ಲಿ ಸಾರ್ವಜನಿಕರು ಸಂಕ್ಷಿಪ್ತವಾಗಿ ಲಿಖಿತ ರೂಪದಲ್ಲಿ ಅಹವಾಲನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಲ್ಲಿಸಬಹುದಾಗಿರುತ್ತದೆ. ಸದರಿ ದಿನದಂದು ಜಿಲ್ಲಾ ಹಾಗೂ ತಾಲೂಕ ಮಟ್ಟದ ಎಲ್ಲ ಇಲಾಖೆಗಳ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಹ ಉಪಸ್ಥಿತರಿರುವರು. ಸಾರ್ವಜನಿಕರಿಂದ ಸ್ವೀಕರಿಸಲ್ಪಟ್ಟ ಅಹವಾಲನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಸಾಧ್ಯವಾದಷ್ಟು ಮಟ್ಟಿಗೆ ಇತ್ಯರ್ಥಪಡಿಸಲಾಗುವುದು. ಆದಕಾರಣ ಸಾರ್ವಜನಿಕರು ಈ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: