ಉತ್ತಮ ಸಮಾಜಕ್ಕಾಗಿ

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ: ನೂತನ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

0

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ: ನೂತನ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ: ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸುತ್ತೇನೆ ಎಂದು ನೂತನ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರು ಹೇಳಿದರು.

ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗುರುವಾರ (ಸೆ.20) ಅಧಿಕಾರ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮಸ್ತ ಜಿಲ್ಲೆಯ ಅಭಿವೃದ್ಧಿ ಕಾರ್ಯಕೈಗೊಳ್ಳಲು ಸರ್ಕಾರವು ತಮಗೆ ಅವಕಾಶ ನೀಡಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡು ಕಾರ್ಯನಿರ್ವಹಿಸುತ್ತೇನೆ.ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಎಲ್ಲ ಹಂತದ ಜನರ ಸಹಕಾರದಿಂದ ಉತ್ತಮವಾಗಿ ಕೆಲಸ ಮಾಡುತ್ತೇನೆ.

News Belgaum-ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ: ನೂತನ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ 1ಅದೇ ರೀತಿ ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದು ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.

ನಿಕಟಪೂರ್ವ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು, ನೂತನ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಬಳಿಕ ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು.

ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಈ ಮುಂಚೆ ಬಾಗಲಕೋಟೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ (ಭೂಸ್ವಾಧೀನ ಹಾಗೂ ಪುನರ್ವಸತಿ ಮತ್ತು ಪುನರ್‍ನಿರ್ಮಾಣ) ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

The post ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ: ನೂತನ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.