ಉತ್ತಮ ಸಮಾಜಕ್ಕಾಗಿ

ಜಿಲ್ಲೆ ಯ ಅಭಿವೃದ್ಧಿಗೆ ಯೊಜನೆ: ಸಚಿವ

0

ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಮಾಸ್ಟರ್ ಪ್ಲಾನ್: ಸಚಿವ ಹೆಚ್.ಡಿ. ರೇವಣ್ಣ
ಹಾಸನ: ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪೂರಕವಾಗಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಅದಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಸಾಮಾಜಿಕ ಅರಣ್ಯ, ರೇಷ್ಮೆ,ಮೀನುಗಾರಿಕೆ, ನಗರಾಭಿವೃದ್ದಿ, ಕುಡಿಯುವ ನೀರು ಸರಬರಾಜು ಸೇರಿದಂತೆ ಎಲ್ಲಾ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ದಿ ಯೋಜನೆಗೆ ಜಾರಿಯಾಗಬೇಕು ಅ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದರು.

ಜಿಲ್ಲೆಯಲ್ಲಿ ಕೃಷಿಕರು, ಜನಸಾಮಾನ್ಯರು ಎಲ್ಲಾರ ವೈಯುಕ್ತಿಕ ಜೀವನಮಾನ ಸುಧಾರಣೆಯಾಗುವುದರ ಜೊತೆಗೆ ಎಲ್ಲೆಡೆ ಕುಡಿಯುವ ನೀರು, ವಿದ್ಯುತ್ ಪೂರೈಕೆ, ರಸ್ತೆ ಅಭಿವೃದ್ದಿಗಳು ನಡೆಯಬೇಕು ಅದಕ್ಕೆ ಇಲಾಖಾವಾರು ಯೋಜನೆ ರೂಪುಗೊಳ್ಳಬೇಕು ಎಂದು ಸಚಿವರು ಹೇಳಿದರು.

ಹಾಸನ ನಗರವನ್ನು ನಗರ ಪಾಲಿಕೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೆ ಹಾಸನ ನಗರದ ಎಲ್ಲಾ ತಾಲ್ಲೂಕುಗಳಲ್ಲಿ ಬಾಕಿ ಇರುವ ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸಚಿವರು ಹೇಳಿದರು.

ನಗರಾಭಿವೃದಿ ಇಲಾಖೆಯ ವ್ಯವಸ್ಥಪಕ ನಿರ್ದೇಶಕರಾದ ಜಯರಾಂ ಅವರು ಮಾತನಾಡಿ ಹಾಸನ ನಗರದಲ್ಲಿ 117 ಕೋಟಿ ರೂಪಾಯಿ ವೆಚ್ಚದಲ್ಲಿ ಅಮೃತ ಯೋಜನೆ ಜಾರಿಯಲ್ಲಿದೆ. ಹಾಸನ ನಗರ ಹಾಗೂ ಅದಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ 24×7 ರಂತೆ ಕುಡಿಯುವ ನೀರು ಪೂರೈಕೆ ಯೋಜನೆಗೆ 300 ಕೋಟಿ ರೂಪಾಯಿ ಅಗತ್ಯವಿದೆ. ಈಗಾಗಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಬಾಕಿ ಉಳಿದಿರುವ 70 ಕೋಟಿ ರೂಪಾಯಿ ಅನುದಾನದಲ್ಲಿ ಈ ಯೋಜನೆಗೆ ಬಳಸಲು ನಿರ್ಧರಿಸಲಾಗಿದೆ ಉಳಿದ 230 ಕೋಟಿ ರೂಪಾಯಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಈಗಾಗಲೇ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕುಡಿಯುವ ನೀರು ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಹಾಸನ ಕ್ಷೇತ್ರದ ಶಾಸಕರಾದ ಪ್ರೀತಂ ಜೆ. ಗೌಡ ಅವರು ಮಹಾ ನಗರ ಪಾಲಿಕೆಯಾದರೆ ಸ್ವಾಗತಾರ್ಹ ಅದರೆ ರಸ್ತೆ ಕಾಮಗಾರಿಗಳನ್ನು ನಡೆಸಿದ ನಂತರ ಮತ್ತೆ ಅಗೆದು ಪೈಪ್ ಲೈನ್ ಅಳವಡಿಸುವ ಬದಲು ಮೊದಲು ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಗೆ ಪೈಪ್ ಲೈನ್ ಅಳವಡಿಸಿ ನಂತರ ರಸ್ತೆ ಕಾಮಗಾರಿಗಳನ್ನು ನಡೆಸುವುದು ಸೂಕ್ತ ಹಾಗೇ ಅಮೃತ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಈಗಲೇ ಮುಕ್ತಾಯಗೊಳ್ಳಿಸಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮುಂದೆ ರಸ್ತೆಗಳನ್ನು ಅಗೆಯದಂತೆ ಕಾಮಗಾರಿ ಪೂರ್ವದಲ್ಲೆ ಪೈಪ್ ಲೈನ್‍ಗಳನ್ನು ಅಳವಡಿಸುವ ಕುರಿತಂತೆ ನೀಲಿನಕ್ಷೆ ಸಿದ್ದಪಡಿಸಿ ಸಲ್ಲಿಸುವಂತೆ ಲೋಕೋಪಯೋಗಿ ಇಂಜಿನಿಯರ್‍ಗೆ ಸೂಚಿಸಿದರು.

ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಹೆಚ್.ಕೆ. ಕುಮಾರಸ್ವಾಮಿ, ಕೆ. ಎಸ್. ಲಿಂಗೇಶ್ ಅವರು ತಮ್ಮ ಕ್ಷೇತ್ರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.

ಸಭೆಯಲ್ಲಿ ಜಿಲ್ಲೆಯಲ್ಲಿ ಭಾರತ ಸಂಚಾರ ನಿಗಮದ ವತಿಯಿಂದ ನೀಡಲಾಗಿರುವ ದೂರವಾಣಿ ಸಂಪರ್ಕ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ, ಬಿ.ಎಸ್.ಎನ್.ಎಲ್. ನೆಟ್‍ವರ್ಕ್‍ಗಳು ಸರಿಯಾಗಿಸಿಗುತ್ತಿಲ್ಲ, ಅದರೂ ಸಕಲೇಶಪುರ ತಾಲ್ಲೂಕಿನಲ್ಲಿ ಬಹುತೇಕ ಊರುಗಳಲ್ಲಿ ಇನ್ನು ದೂರವಾಣಿ ಸಂಪರ್ಕ ಸಾಧ್ಯವಾಗಿಲ್ಲ ಎಂದು ಶಾಸಕರುಗಳು ಗಮನ ಸೆಳೆದರು. ಕೂಡಲೇ ಈ ಸಮಸ್ಯೆ ಬಗ್ಗೆ ಹರಿಸಿ ಅಗತ್ಯವಿರುವ ಅನುದಾನದ ಬಗ್ಗೆ ಹಾಗೂ ಯೋಜನೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಬಿ.ಎಸ್.ಎನ್.ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತ ಮಧ್ಯಮಾರಾಟ ಹಾಗೂ ಬೆಟ್ಟಿಂಗ್ ದಂದೆ ಬಗ್ಗೆ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು. ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟದ ಬಗ್ಗೆ ಮತ್ತು ಬೆಳಿಗ್ಗೆ 7 ಗಂಟೆಗೆ ತೆರೆಯುತ್ತಿರುವ ಬಾರುಗಳ ಮೇಲೆ ನಿರ್ಬಂಧ ಹೇರುವ ಬಗ್ಗೆ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಕೆ.ಎಸ್ ಲಿಂಗೇಶ್, ಹೆಚ್.ಕೆ. ಕುಮಾರಸ್ವಾಮಿ, ಪ್ರೀತಂ ಜೆ ಗೌಡ ಅವರು ಗಮನಸೆಳೆದರು. ಇಂತಹ ಅಕ್ರಮ ಮಧ್ಯ ಮಾರಾಟದಿಂದ ಹಳ್ಳಿಗಳಲ್ಲಿ ಜನ ಸಾಲದ ಕೂಪಕ್ಕೆ ಬೀಳುತ್ತಿದ್ದಾರೆ, ಆರ್ಥಿಕ, ಆರೋಗ್ಯದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರಾದ ಹೆಚ್.ಡಿ. ರೇವಣ್ಣ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮಾಡುವ ಮೂಲಕ ಅಕ್ರಮ ಮಧ್ಯ ಮಾರಾಟ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.

ಕೃಷಿ ಕಾಲೇಜಿಗೆ ನೀರು ಒದಗಿಸಲು ನಿರ್ಮಿಸಲು ಕ್ರಮ ವಹಿಸಲು ಹಾಗೂ ಪ್ರತಿ ತಾಲೂಕುಗಳಿಗೂ ಕೃಷಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಶಿಬಿರ ಏರ್ಪಡಿಸಿ ರೈತರಿಗೆ ಅರಿವು ಮೂಡಿಸುವಂತೆ ಸಚಿವರು ಸೂಚಿಸಿದರು. ಸೋಮನಹಳ್ಳಿ ಕಾಮಲಿನಲ್ಲಿ ಲಭ್ಯವಿರುವ 300 ಎಕರೆ ಜಾಗದಲ್ಲಿ ಫಾರಂ ಅಭಿವೃದ್ದಿ ಪಡಿಸಲಾಗುವುದು ಎಂದ ಸಚಿವರು ತೋಟಗಾರಿಕೆ ಇಲಾಖೆ ವತಿಯಿಂದ ಹಾಲಿ ಇರುವ ಫಾರಂಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಫಾರಂಗಳಲ್ಲಿ ಮಾವು ಸಪೋಟ ಮತ್ತಿತರೆ ಹಣ್ಣಿನ ಗಿಡಗಳನ್ನು ಬೆಳೆಸುವಂತೆ, ಪ್ರತಿ ತಾಲೂಕಿನಲ್ಲಿ 5 ಎ-ಗ್ರೇಡ್ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನುಸಿ ರೋಗ ದಿಂದ ಹಾಳಾಗಿರುವ ತೆಂಗಿನ ಮರಗಳನ್ನು ಕಿತ್ತು ಬದಲಾಗಿ ಹೊಸ ಗಿಡಗಳನ್ನು ನೆಡಲು ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಸಭೆಯ ಗಮನಕ್ಕೆ ತಂದರು ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಹಸಿಲ್ದಾರ್, ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಿ ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚಿಸುವಂತೆ ತಿಳಿಸಿದರು.
ಪಶುವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು ಪಶುಪಾಲನಾ ಹಾಗೂ ಹಾಸನ ಡೈರಿ ಸಹಯೋಗದೊಂದಿಗೆ ಉತ್ತಮ ತಳಿಯ ಹಸು ಹಾಗೂ ಕುರಿ ಸಾಕಾಣಿಕೆಗೆ ಶೇಡ್ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

108 ವಾಹನದಲ್ಲಿ ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಬೇಕು ಖಾಸಗಿ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಿಸಿದಲ್ಲಿ ಕಾರಣವನ್ನು ಲಿಖಿತವಾಗಿ ನೀಡಬೇಕು ಎಂದು ಸಚಿವರು ಸೂಚಿಸಿದರು ಆಸ್ಪತ್ರೆ ಕಟ್ಟಡ ದುರಸ್ತಿ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು ಎಂದರು.

ಸಭೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭೂಮಾಫಿಯಾಕ್ಕೆ ಕಡಿವಾಣ ಹಾಕುವಂತೆ ಶಾಸಕರು ಒತ್ತಾಯಿಸಿದರು. ಅಕ್ರಮವಾಗಿ ಲೇಔಟ್ ಹಾಗೂ ಮನೆ ಕಟ್ಟಡಗಳ ನಿರ್ಮಾಣಕ್ಕೆ ಯೋಜನಾ ನಕ್ಷೆ ನೀಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ವೇಳೆ ಸಭೆಗೆ ಗೈರು ಹಾಜರಾಗಿದ್ದ ನಗರ ಯೋಜನಾಧಿಕಾರಿಯವರ ಅಮಾನತ್ತಿಗೆ ಶಿಫರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಇದೇ ರೀತಿ ಜಲಶಯ ಯೋಜನೆಗಳ ನಿರಾಶ್ರಿತರ ಭೂಮಿ ಉಳ್ಳವರ ಪಾಲಾಗುತ್ತಿರುವ ಬಗ್ಗೆಯೂ ಜಿಲ್ಲಾಧಿಕಾರಿಯವರು ನಿಗಾ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಗ್ರಾಮ ಲೆಕ್ಕಗರು ಸಾರ್ವಜನಿಕರ ಸೇವೆಯಲ್ಲಿ ತೋರುತ್ತಿರುವ ನಿರ್ಲಕ್ಷ, ಪಡಿತರ ಅಕ್ಕಿ ವಿತರಣೆಯಲ್ಲಿ ನಡೆಯುತ್ತಿರುವ ಅಕ್ರಮ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಶಾಸಕರಾದ ಎ.ಟಿ. ರಾಮಸ್ವಾಮಿ, ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಶ್ವೇತ ದೇವರಾಜ್ ಉಪಾಧ್ಯಕ್ಷರಾದ ಸುಪ್ರದೀಪ್ ಯಜಮಾನ ಜಿಲ್ಲಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಗೌಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಟ್ಟಸ್ವಾಮಿ ಸ್ಥಾಯಿ ಸಮಿತಿ ಸಮಿತಿ ಅಧ್ಯಕ್ಷರಾದ ಲೋಕೇಶ್ ಉಪಸ್ಥಿತರಿದ್ದರು.[  category  hassan news ]

The post ಜಿಲ್ಲೆ ಯ ಅಭಿವೃದ್ಧಿಗೆ ಯೊಜನೆ: ಸಚಿವ appeared first on Prajaa News.

Source link

ಜಿಲ್ಲೆ ಯ ಅಭಿವೃದ್ಧಿಗೆ ಯೊಜನೆ: ಸಚಿವ

Leave A Reply

 Click this button or press Ctrl+G to toggle between Kannada and English

Your email address will not be published.