ಉತ್ತಮ ಸಮಾಜಕ್ಕಾಗಿ

ಡಿಕೆಶಿ ಹಸ್ತಕ್ಷೇಪಕ್ಕೆ ಬ್ರೇಕ್ ಆಕಲು ಬೇಡಿಕೆಯಿಟ್ಟ ಜಾರಕಿಹೊಳಿ ಬ್ರದರ್ಸ್

0

ಡಿಕೆಶಿ ಹಸ್ತಕ್ಷೇಪಕ್ಕೆ ಬ್ರೇಕ್ ಆಕಲು ಬೇಡಿಕೆಯಿಟ್ಟ ಜಾರಕಿಹೊಳಿ ಬ್ರದರ್ಸ್

ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಯಶಸ್ವಿಯಾಗದ ಹಿನ್ನೆಲೆ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಜಾರಕಿಹೊಳಿ ಸಹೋದರರನ್ನು ನಗರದ ಖಾಸಗಿ ಹೋಟೆಲ್​ನಲ್ಲಿ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ.

ತಾಜ್​ವೆಸ್ಟ್​ ಎಂಡ್ ಹೋಟೆಲ್​ನಲ್ಲಿ ಜಾರಕಿಹೊಳಿ ಸಹೋದರರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ ಅವರಿಗೆ ಜಾರಕಿಹೊಳಿ ಸಹೋದರರು ಹಲವು ಬೇಡಿಕೆ ಮುಂದಿಟ್ಟಿದ್ದಾರೆ.

ಬೆಳಗಾವಿಯಲ್ಲಿ ಡಿಕೆಶಿ ಹಸ್ತಕ್ಷೇಪಕ್ಕೆ ಬ್ರೇಕ್ ಹಾಕಬೇಕು ಹಾಗೂ ಬಳ್ಳಾರಿಯ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ‌ ನೀಡುವ ಬಗ್ಗೆ ಜಾರಕಿಹೊಳಿ ಸಹೋದರರು ಸಿಎಂ ಮುಂದೆ ಬೇಡಿಕೆಯಿಟ್ಟಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ ಕುಮಾರಸ್ವಾಮಿ ಅವರು, ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದು ಬೇಡ, ನಿಮ್ಮ ಅಸಮಾಧಾನಗಳು ಏನೇ ಇದ್ದರೂ ಬಗೆಹರಿಸೋಣ ಎಂದು ತಿಳಿಸಿದ್ದಾರೆ. ಈ ವೇಳೆ ಶಾಸಕ ಬಿ.ನಾಗೇಂದ್ರ ಮತ್ತು ಸಚಿವ ಎಚ್​.ಡಿ.ರೇವಣ್ಣ ಕೂಡ ಸ್ಥಳದಲ್ಲಿ ಹಾಜರಿದ್ದರು.

ಇದರ ನಡುವೆ ಕಾಂಗ್ರೆಸ್ ಅತೃಪ್ತ ಎಂಟಕ್ಕೂ ಹೆಚ್ಚು ಜನ ಶಾಸಕರು ಮುಂಬೈ ರೆಸಾರ್ಟ್​ಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ////

The post ಡಿಕೆಶಿ ಹಸ್ತಕ್ಷೇಪಕ್ಕೆ ಬ್ರೇಕ್ ಆಕಲು ಬೇಡಿಕೆಯಿಟ್ಟ ಜಾರಕಿಹೊಳಿ ಬ್ರದರ್ಸ್ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.