ಉತ್ತಮ ಸಮಾಜಕ್ಕಾಗಿ

ನಾಳೆ ಖಾನಾಪುರಕ್ಕೆ ಸಿಎಂ ಸಿದ್ದರಾಮಯ್ಯ: ಕಾರ್ಯಕರ್ತರ ಹರ್ಷ

0

ಬೆಳಗಾವಿ (Tarun Kranti): ಜಿಲ್ಲೆಯ ಖಾನಾಪುರ ತಾಲೂಕಿನ ನಾಳೆ ಶನಿವಾರ ಐತಿಹಾಸಿಕ ದಿನವೇ ಸರಿ. 1996-99 ರಲ್ಲಿ ಅಂದಿನ ಮುಖ್ಯ ಮಂತ್ರಿ ಜೆ.ಎಚ್ ಪಟೇಲ್ ಸಕ್ಕರೆ ಕಾರ್ಖಾನೆಯೊಂದರ ಉದ್ಘಾಟನೆಗೆ ಆಗಮಿಸಿದ್ದನ್ನು ಹೊರತು ಪಡಿಸಿದರೆ, ಖಾನಾಪುರ ತಾಲೂಕಿಗೆ ಇಲ್ಲಿಯವರೆಗೆ ಯಾವೊಬ್ಬ ಕಾಂಗ್ರೆಸ್ ಮುಖ್ಯ ಮಂತ್ರಿಗಳು ಭೇಟಿ ಕೊಟ್ಟಿಲ್ಲ. ಹೀಗಾಗಿ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳಕರ ಪರವಾಗಿ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಭೇಟಿ ತಾಲೂಕಿನ ಮಟ್ಟಿಗೆ ವಿಶೇಷವೆನಿಸಿದೆ.

ಶನಿವಾರ ಮುಂಜಾನೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು ಹಲವು ವಿಧಾನಸಭಾ ಮತಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದು, ಸಂಜೆ 7ಕ್ಕೆ ಖಾನಾಪುರ ಮತಕ್ಷೇತ್ರದಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ಮತ್ತು ಪ್ರಚಾರ ನಡೆಸಲಿದ್ದಾರೆ. ಹಲವು ವರ್ಷಗಳ ನಂತರ ತಮ್ಮ ಪಕ್ಷದ ಮುಖ್ಯಮಂತ್ರಿಗಳು ತಾಲೂಕಿಗೆ ಆಗಮಿಸುತ್ತಿರುವುದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ. ನಗರದ ಜಾಂಬೊಟಿ ರಸ್ತೆಯ ಮಲಪ್ರಭಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಗಳ ಸ್ವಾಗತಕ್ಕಾಗಿ ಸಿದ್ಧತೆಗಳು ಆರಂಭವಾಗಿವೆ. ತಮ್ಮ ಮನೆ ಮನೆ ಪ್ರಚಾರದ ಮಧ್ಯೆ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳಕರ ಕ್ರೀಡಾಂಗಣಕ್ಕೆ ತೆರಳಿ ಸಿದ್ಧತಾ ಕಾರ್ಯ ಪರಿಶೀಲಿಸಿದರು.

ದುರ್ಗಾದೇವಿ ಜಾತ್ರಾ ಮಹೋತ್ಸವ, ಕ್ರೀಡಾಂಗಣ ಪರಿಶೀಲನೆ ನಂತರ ಪ್ರಭುನಗರಕ್ಕೆ ತೆರಳಿದ ಡಾ.ಅಂಜಲಿ ಹೇಮಂತ್ ನಿಂಬಾಳಕರ ಅಲ್ಲಿ ದುರ್ಗಾದೇವಿ ದೇವಸ್ಥಾನದ ಚೌಕಟ್ಟು ಪೂಜೆ ನಡೆಸಿ ದೇವಸ್ಥಾನದ ಹೊಸ ಕಟ್ಟಡ ಉದ್ಘಾಟಿಸಿದರು.

ಪ್ರಭುನಗರ ಹಾಗೂ ಅವರೋಳಿ ಗ್ರಾಮಗಳಲ್ಲಿ ದುರ್ಗಾದೇವಿ ಜಾತ್ರೆ ಆಯೋಜಿಸಲಾಗಿದ್ದು ಸಹಸ್ರಾರು ಸಂಖ್ಯೆಯಲ್ಲಿ ಜನ ನೇರೆದಿದ್ದರು. ಡಾ.ಅಂಜಲಿ ಹೇಮಂತ್ ನಿಂಬಾಳಕರ ರೊಂದಿಗೆ ಕುಶಲೋಪಚಾರ ನಡೆಸಿದ ಸಾರ್ವಜನಿಕರು ತಮ್ಮ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ರಾಜು ನಾಯಕ, ಅನಿತಾ ದಂಡಗಲ್, ರಾಮಚಂದ್ರ ಪಾಟೀಲ, ಪ್ರಶಾಂತ ಜೋರಾಪುರ, ಚಂದ್ರಕಾಂತ ತಳವಾರ ಹಾಗೂ ಬಸಪ್ಪ ಕೊಣ್ಣುರಿ ಮುಂತಾದವರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.