ಉತ್ತಮ ಸಮಾಜಕ್ಕಾಗಿ

ನೂರಾರು ಬೆಂಬಲಿಗರ ಮೇಲೆ ಕಾನೂನು ಕ್ರಮ ಆಗಬೇಕು. ಇಂದು ಪ್ರತಿಭಟನೆ

0

ನೂರಾರು ಬೆಂಬಲಿಗರ ಮೇಲೆ ಕಾನೂನು ಕ್ರಮ ಆಗಬೇಕು. ಇಂದು ಪ್ರತಿಭಟನೆ

ಬೆಳಗಾವಿ: ಗೂಂಡಾಗಿರಿ ರಾಜಕೀಯ ಹತ್ತಿಕ್ಕಿ, ಧಂಗೆಕೋರರನ್ನು ಪೊಲೀಸರು ಬಂಧಿಸಬೇಕೆಂದು ಆಗ್ರಹಿಸಿ ಯಮಕನಮರಡಿ ಕ್ಷೇತ್ರದ ಜನತೆ ಇಂದು ಪ್ರತಿಭಟನೆ ನಡೆಸಿದರು.

ಮಕನಮರಡಿ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಾರುತಿ ಅಷ್ಟಗಿ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಜ್ಯದ ದೊಡ್ಡ ವಿಶ್ವವಿದ್ಯಾಲಯಕ್ಕೆ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ನುಗ್ಗಿ ಅಲ್ಲಿನ ಕುಲಪತಿ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ಮಾಡಿದ್ದಾರೆ. ಸರಕಾರಿ ಆಸ್ತಿಪಾಸ್ತಿ ನಾಶ ಮಾಡಿದ್ದಾರೆ. ಜಿಪಂ. ಸದಸ್ಯ ಸಿದ್ದು ಸುಣಗಾರ ಹಾಗೂ ರಾಮಾಗುಳಿ ಮತ್ತು ಅವರ ನೂರಾರು ಬೆಂಬಲಿಗರ ಮೇಲೆ ಕಾನೂನು ಕ್ರಮ ಆಗಬೇಕು. ವಿದ್ಯಾರ್ಥಿಗಳು ಭಯಭೀತರಾಗಿ ಕಾಲೇಜಿಗೆ ಹೋಗುತ್ತಿಲ್ಲ ಎಂದು ಗಮನ ಸೆಳೆದಿದ್ದಾರೆ.‌ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಸಿದ್ದು ಸುಣಗಾರ ಮತ್ತಿತರರನ್ನು ಬಂಧಿಸಬೇಕೆಂದು ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ಸೃಷ್ಟಿಸಿದರು.

The post ನೂರಾರು ಬೆಂಬಲಿಗರ ಮೇಲೆ ಕಾನೂನು ಕ್ರಮ ಆಗಬೇಕು. ಇಂದು ಪ್ರತಿಭಟನೆ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.