ಉತ್ತಮ ಸಮಾಜಕ್ಕಾಗಿ

ಪ್ರಕಟಣೆಗಳ

0

ಪ್ರಾಣಿ ಕಲ್ಯಾಣ: 13ರಂದು ಜನಸಂಪರ್ಕ ಸಭೆ
ಬೆಳಗಾವಿ, ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರಾದ ಶಿವಯ್ಯಾ ಸ್ವಾಮಿ ಅವರು ಸೋಮವಾರ(ಫೆ.13) ಸಂಜೆ 6 ಗಂಟೆಗೆ ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಪ್ರಾಣಿ ದಯಾ ಸಂಘಗಳು ಹಾಗೂ ಪ್ರಾಣಿ ಕಲ್ಯಾಣ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಪ್ರಾಣಿಪ್ರಿಯರ ಸಮಸ್ಯೆಗಳನ್ನು ಆಲಿಸಲು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ.
ಪ್ರಾಣಿಪ್ರಿಯರು ಹಾಗೂ ಪ್ರಾಣಿ ಕಲ್ಯಾಣ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಳ ಬಗ್ಗೆ ಮುಕ್ತ ಚರ್ಚೆ ನಡೆಸಬಹುದು ಎಂದು ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ಎ.ಕೆ.ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಾಹಿತಿ ಆಯುಕ್ತರ ಜಿಲ್ಲಾ ಪ್ರವಾಸ
ಬೆಳಗಾವಿ, ರಾಜ್ಯ ಮಾಹಿತಿ ಆಯುಕ್ತರಾದ ಶ್ರೀ ಶಂಕರ ಆರ್.ಪಾಟೀಲ ಅವರು ಫೆಬ್ರುವರಿ 13 ಮತ್ತು 14 ರಂದು ಬೆಳಗಾವಿ ಜಿಲ್ಲೆಯ ಪ್ರವಾಸವನ್ನು ಕೈಗೊಳ್ಳುವರು.
ಫೆಬ್ರುವರಿ 13ರಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರ್.ಟಿ.ಐ ಪ್ರಕರಣಗಳ ಬಗ್ಗೆ ವಿಚಾರಣೆಯನ್ನು ನಡೆಸಲಿದ್ದಾರೆ.
ಫೆಬ್ರುವರಿ 14 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಮಧ್ಯಾಹ್ನ 1 ಗಂಟೆಗೆ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಸಂಜೆ 6 ಗಂಟೆಗೆ ಬೆಳಗಾವಿಯಿಂದ ಧಾರವಾಡಕ್ಕೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಾಹಿತಿ ಆಯುಕ್ತರಿಂದ ಆರ್.ಟಿ.ಐ ಪ್ರಕರಣಗಳ ವಿಚಾರಣೆ
ಬೆಳಗಾವಿ, ರಾಜ್ಯ ಮಾಹಿತಿ ಆಯುಕ್ತರಾದ ಶ್ರೀ ಶಂಕರ್ ಆರ್.ಪಾಟೀಲ ಅವರು ಮಾಹಿತಿ ಆಯೋಗದಲ್ಲಿ ದಾಖಲಾಗಿರುವ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ಫೆಬ್ರುವರಿ 13 ರಂದು ಮಧ್ಯಾಹ್ನ 3 ಗಂಟೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆಯನ್ನು ಕೈಗೊಳ್ಳಲಿದ್ದಾರೆ.
ಪ್ರಕರಣಗಳಲ್ಲಿ ಅರ್ಜಿದಾರರು ಕೋರಿರುವ ಮಾಹಿತಿಗೆ ಸಂಬಂಧಿಸಿದಂತೆ, ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಕೋರಲಾದ ಮಾಹಿತಿಯನ್ನು ಅರ್ಜಿದಾರರಿಗೆ ನೀಡಿ ಹಾಗೂ ವಿಚಾರಣೆಯ ಸಮಯದಲ್ಲಿ ಖುದ್ದಾಗಿ ಹಾಜರಾಗಿ ನ್ಯಾಯಾಲಯಕ್ಕೆ ಅನುಸರಣಾ ವರದಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Leave A Reply

 Click this button or press Ctrl+G to toggle between Kannada and English

Your email address will not be published.