ಉತ್ತಮ ಸಮಾಜಕ್ಕಾಗಿ

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

0

ಬೆಳಗಾವಿ, ಜನವರಿ 23 ಬೆಳಗಾವಿ ವಿಭಾಗದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇದೇ ಜನವರಿ 24 ರಿಂದ 31 ರವರೆಗೆ ಬೆಳಗಾವಿ ಜಿಲ್ಲೆಯ ಈ ಕೆಳಕಂಡ ತಾಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜನವರಿ 24 ರಂದು ಬೆಳಿಗ್ಗೆ 12 ರಿಂದ ಮಧ್ಯಾಹ್ನ 2 ಗಂಟೆಯವರೆಗೆÀ ರಾಯಬಾಗ ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜನವರಿ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆÀ ಸವದತ್ತಿ ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಬೈಲಹೊಂಗಲ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜನವರಿ 27 ರಂದು ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ಗಂಟೆಯವರೆಗೆÀ ಕಿತ್ತೂರು (ಡೊಂಬರಕೊಪ್ಪ) ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ 3-30 ರಿಂದ ಸಂಜೆ 5-30 ಗಂಟೆಯವರೆಗೆ ಖಾನಾಪೂರ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜನವರಿ 30 ರಂದು ಬೆಳಿಗ್ಗೆ 11-30 ರಿಂದ ಮಧ್ಯಾಹ್ನ 1-30 ಗಂಟೆಯವರೆಗೆÀ ಹುಕ್ಕೇರಿ ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ 3-30 ರಿಂದ ಸಂಜೆ 5-30 ಗಂಟೆಯವರೆಗೆ ಅಥಣಿ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಜನವರಿ 31 ರಂದು ಬೆಳಿಗ್ಗೆ 12-30 ರಿಂದ ಮಧ್ಯಾಹ್ನ 2-30 ಗಂಟೆಯವರೆಗೆÀ ರಾಮದುರ್ಗ ಪ್ರವಾಸಿ ಮಂದಿರದಲ್ಲಿ, ಅಂದು ಮಧ್ಯಾಹ್ನ 3-30 ರಿಂದ ಸಂಜೆ 5-30 ಗಂಟೆಯವರೆಗೆ ಗೋಕಾಕ ಪ್ರವಾಸಿ ಮಂದಿರದಲ್ಲಿ ಅಹವಾಲು ಸ್ವೀಕರಿಸುವರು.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಉಪಾಧೀಕ್ಷಕರು (ಪ್ರಭಾರಿ), ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಬೆಳಗಾವಿ ವಿಭಾಗ, ದೂರವಾಣಿ ಸಂಖ್ಯೆ: 0831-2422999, ಮೊ.ನಂ. 9448136123 ಹಾಗೂ ಪೊಲೀಸ್ ಇನ್ಸಪೆಕ್ಟರ್ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಬೆಳಗಾವಿ ವಿಭಾಗ, ಮೊ.ನಂ 9480806299, ಭ್ರಷ್ಟಾಚಾರ ನಿಗ್ರಹ ದಳ ಸಹಾಯವಾಣಿ ದೂರವಾಣಿ ಸಂಖ್ಯೆ 080-22342100, 9480806300 ನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಎಸಿಬಿ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.