ಉತ್ತಮ ಸಮಾಜಕ್ಕಾಗಿ

ಮಡಿಕೇರಿ : ವಿಕಲಚೇತನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ : ವಿ.ಎಸ್.ಬಸವರಾಜು

0

ವಿಕಲಚೇತನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ : ವಿ.ಎಸ್.ಬಸವರಾಜು

ಮಡಿಕೇರಿ : ವಿಕಲಚೇತನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ವಿಕಲಚೇತನರ ಅಧಿನಿಯಮ ರಾಜ್ಯ ಆಯುಕ್ತರಾದ ವಿ.ಎಸ್.ಬಸವರಾಜು ಅವರು ತಿಳಿಸಿದ್ದಾರೆ.
ಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪುನರ್ವಸತಿ ಕಾರ್ಯಕರ್ತರ ಜೊತೆ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂಕಷ್ಟಕ್ಕೆ ತುತ್ತಾದ ವಿಕಲಚೇತನರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ವಿಕಲಚೇತನ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಕಲ್ಪಿಸಬೇಕು, ಜೊತೆಗೆ ವಿಕಲಚೇತನರಿಗೆ ಸ್ವ ಉದ್ಯೋಗ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿ.ಎಸ್.ಬಸವರಾಜು ಅವರು ಹೇಳಿದರು.

ಸರ್ಕಾರ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯವನ್ನು ನೀಡುತ್ತಿದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪ್ರಮಾಣ ಪತ್ರಗಳನ್ನು ಪಡೆಯುವಂತಾಗಲು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡುವಂತಾಗಬೇಕು ಎಂದು ವಿಕಲಚೇತನರ ಅಧಿನಿಯಮದ ಆಯುಕ್ತರು ನುಡಿದರು.

ವಿಕಲಚೇತನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಎಸ್‍ಎಸ್‍ಎಲ್‍ಸಿ ಮೇಲ್ಪಟ್ಟು ಉನ್ನತ ವ್ಯಾಸಂಗ ಮಾಡುವಂತಾಗಲು ಸಲಹೆ ಮಾರ್ಗದರ್ಶನ ಮಾಡುವಂತಾಗಬೇಕು ಎಂದರು.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಧಿಕಾರಿ ದೇವರಾಜು ಅವರು ಪರಿಹಾರ ಕೇಂದ್ರಗಳಲ್ಲಿ ಸುಮಾರು 69 ವಿಕಲಚೇತನರು ಇದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ರಾಜೇಶ್ ಅವರು ಮಾತನಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಸೇವೆ ಕಲ್ಪಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಇಲ್ಲದಿದ್ದಲ್ಲಿ ಬೇರೆ ಕಡೆಯಿಂದ ತರಿಸಿ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಸ್ವಸ್ಥ ಸಂಸ್ಥೆಯ ಮುರಿಗೇಶ್ ಅವರು ವಿಕಲಚೇತನರು ಆಸ್ಪತ್ರೆಗೆ ತೆರಳಿ ಗುರುತಿನ ಚೀಟಿ ಪಡೆಯುವುದು ಕಷ್ಟ ಸಾಧ್ಯವಾಗುತ್ತದೆ. ಆದ್ದರಿಂದ ಹೋಬಳಿ ಮಟ್ಟದಲ್ಲಿ ವಿಕಲಚೇತನರಿಗೆ ಪ್ರಮಾಣ ಪತ್ರ ನೀಡುವ ಶಿಬಿರ ಏರ್ಪಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ವಿಕಲಚೇತನರಿಗೆ ಆದಾಯ ಪ್ರಮಾಣ ಪತ್ರದಲ್ಲಿ ವಿನಾಯಿತಿ ನೀಡುವಂತಾಗಬೇಕು ಎಂದು ವಿಕಲಚೇತನರೊಬ್ಬರು ಮನವಿ ಮಾಡಿದರು. ಸ್ವಸ್ಥ ಸಂಸ್ಥೆಯ ಆರತಿ ಸೋಮಯ್ಯ ಅವರು ಹಲವು ಸಲಹೆ ನೀಡಿದರು.

ವಿಕಲಚೇತನರ ಅಧಿನಿಯಮದ ಉಪ ಆಯುಕ್ತರಾದ ಪದ್ಮನಾಭ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಲ್ಲೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಾಲ್ಟರ್ ಡಿಮೆಲ್ಲೊ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿದ್ದೋದ್ಧೇಶ ಪುನರ್ವಸತಿ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು. ////

The post ಮಡಿಕೇರಿ : ವಿಕಲಚೇತನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ : ವಿ.ಎಸ್.ಬಸವರಾಜು appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.