ಉತ್ತಮ ಸಮಾಜಕ್ಕಾಗಿ

ವಿಶ್ವ ಹಿರಿಯ ನಾಗರೀಕರ ದಿನಾಚರಣೆ

0

ವಿಶ್ವ ಹಿರಿಯ ನಾಗರೀಕರ ದಿನಾಚರಣೆ

ಬೆಳಗಾವಿ: ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವಂತೆ ಹಾಗೂ ಅವರಿಗಾಗಿರುವ ಸಹಾಯ ಸವಲತ್ತುಗಳನ್ನು ಒದಗಿಸಿಕೊಟ್ಟು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ವಿಧಾನ ಪರಿಷತ್ ವಿರೋಧಪಕ್ಷದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಕರೆ ಕೊಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಹಿರಿಯ ನಾಗರಿಕರಿಗಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸ್ವಯಂ-ಸೇವಾ ಸಂಸ್ಥೆಗಳ ಸಂಯುಕ್ತಾಶ್ರದಲ್ಲಿ ನೆಹರು ನಗರದಲ್ಲಿರುವ ಮಾಹೇಶ್ವರಿ ಅಂಧ ಮಕ್ಕಳ ಶಾಲೆ, ಇಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಆಶಾ ಐಹೊಳೆ ಅವರು ಮಾತನಾಡಿ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಬಗ್ಗೆ ಕಳಕಳಿಯನ್ನು ವ್ಯಕ್ತಪಡಿಸಿದರು. ಹಿರಿಯ ನಾಗರಿಕರ ಬಗ್ಗೆ ಪಾಲನೆ ಪೋಷಣೆ ಯಾವುದೇ ಕಂಪ್ಯೂಟರ್ ಅಥವಾ ಗೂಗಲ್‍ನಲ್ಲಿ ಸಿಗುವುದಿಲ್ಲ, ಅದು ನಮ್ಮ ಮನೆಯಲ್ಲೆ ಇರುತ್ತದೆ.

ವೃದ್ದಾಶ್ರಮದಲ್ಲಿ ತಂದೆ ತಾಯಂದಿರನ್ನು ಬಿಡುವುದು ನಮ್ಮ ಸಂಸ್ಕøತಿಯಲ್ಲವೆಂದು ತಿಳಿಸಿದರು. ಹಾಗೂ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವೃದ್ಧಾಶ್ರಮದ ಫಲಾನುಭವಿಗಳಿಗೆ ಬ್ಲಾಂಕೆಟ್‍ಗಳನ್ನು ವಿತರಿಸಿದರು. ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯನಾಗರಿಕರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಕಾರ್ಯಕ್ರಮಕ್ಕೆ ಆಗಮಿಸಿ ಡಾ|| ಬಿ. ವಿ. ಜಯಸಿಂಹ ಇವರು ಹಿರಿಯ ನಾಗರಿಕರಿಗಾಗಿರುವ ಕಾನೂನುಗಳ ಬಗ್ಗೆ ತಿಳಿವಳಿಕೆ ನೀಡಿದರು. ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ಶ್ರೀಮತಿ ಸರಳಾ ಹೇರೆಕರ, ಹಿರಿಯ ನಾಗರಿಕರ ಸಂಘದ ಕುಲಕರ್ಣಿ, ಮುದಕವಿ, ಬೆಂಡಿಗೇರಿ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಮಾಳಿಗೇರ ಅವರು ಪ್ರಸ್ತಾವಿಕ ಭಾóಷಣ ಮಾಡಿದರು. ಕಿವುಡ ಮಕ್ಕಳ ಸರ್ಕಾರಿ ಶಾಲೆಯ ಅಧೀಕ್ಷಕರಾದ ಆರ್. ಬಿ. ಬನಶಂಕರಿ ಹಾಗೂ ಎ. ಎಸ್. ಮರಿಕಟ್ಟಿ, ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಖಾನಾಪೂರ ಇವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ನಾಮದೇವ ಬಿಲ್ಕರ್‍ರವರು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ವಂದನಾರ್ಪಣೆ ಸಲ್ಲಿಸಿದರು.

The post ವಿಶ್ವ ಹಿರಿಯ ನಾಗರೀಕರ ದಿನಾಚರಣೆ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.