ಉತ್ತಮ ಸಮಾಜಕ್ಕಾಗಿ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ:ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು 

0

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಭಕ್ತಿಯಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಮಹಿಳೆಯರ ಹಕ್ಕನ್ನ ಕಸಿದುಕೊಳ್ಳುವುದು ಸಮಂಜಸವಲ್ಲ. ಪ್ರವೇಶಾವಕಾಶ:ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು

ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶವನ್ನು ಕಲ್ಪಿಸಿ ಇಂದು ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದೆ. ಮುಟ್ಟಾದ ಮಹಿಳೆಯರಿಗೆ ದೇವಸ್ತಾನ ಪ್ರವೇಶದ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ವರ್ಷದ ಅಕ್ಟೋಬರ್ 13ರಂದು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.

ಇಂದು ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ಸದಸ್ಯರ ಪೀಠ ಸುಮಾರು 800 ವರ್ಷಗಳ ಪದ್ಧತಿಗೆ ತೆರೆ ಎಳೆದಿದ್ದು, ಶಬರಿ ಮಲೆ ದೇಗುಲವನ್ನು ಮಹಿಳೆಯರೂ ಸಹ ಪ್ರವೇಶಿಸಬಹುದು ಎಂದು ಹೇಳಿದೆ.

ಮಹಿಳೆಯರು ಸಹ ಪುರಷರಷ್ಟೇ ಸಮಾನರು. ಭಕ್ತಿಯಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಮಹಿಳೆಯರ ಹಕ್ಕನ್ನ ಕಸಿದುಕೊಳ್ಳುವುದು ಸಮಂಜಸವಲ್ಲ. ಅಯ್ಯಪ್ಪ ಸ್ವಾಮಿ ಪ್ರತ್ಯೇಕ ಪಂಗಡವನ್ನ ಸ್ಥಾಪಿಸಿಲ್ಲ. ಯಾಕಂದ್ರೆ ಅವರು ಹಿಂದೂಗಳು ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ.

ಪ್ರಾರ್ಥಿಸುವ ಹಕ್ಕನ್ನು ಸಂವಿಧಾನ ಎಲ್ಲರಿಗೂ ನೀಡಿದೆ. ಎಲ್ಲಾ ವಯೋಮಾನದರೂ ಕೂಡ ಶಬರಿಮಲೆ ದೇಗುಲ ಪ್ರವೇಶ ಮಾಡಬಹುದು 10 ರಿಂದ 50 ವರ್ಷದ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದು ಸಂವಿಧಾನದ ಆಶಯಗಳಿಗೆ ವಿರೋಧ ಎಂದು ಸಾಂವಿಧಾನಿಕ ಪೀಠ ಹೇಳಿದೆ.

The post ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ:ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು  appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.