ಉತ್ತಮ ಸಮಾಜಕ್ಕಾಗಿ

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

0

ಬೆಳಗಾವಿ, ಜನವರಿ 18 2015-16ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವು ಶಿವಮೊಗ್ಗ ಜಿಲ್ಲೆಯ ನೆಹರು ಕ್ರೀಡಾಂಗಣದಲ್ಲಿ ಜನವರಿ 20ರಿಂದ 22 ರವರೆಗೆ ಜರುಗಲಿದ್ದು, ಬೆಳಗಾವಿಯಲ್ಲಿ ನಡೆಸಲಾದ 2015-16ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಈ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಅರ್ಹ ಕ್ರೀಡಾಪಟುಗಳು ಜನವರಿ 19 ರಂದು ಸಂಜೆ 5 ಗಂಟೆಯೊಳಗಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಂದರ್ಭದಲ್ಲಿ ನೀಡಲಾದ ಗುರುತಿನ ಚೀಟಿಯೊಂದಿಗೆ ಕಡ್ಡಾಯವಾಗಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08182-223328 ಅಥವಾ ಈ ಕಚೇರಿಯ ದೂರವಾಣಿ ಸಂಖ್ಯೆ. 0831-2470757 ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.