ಉತ್ತಮ ಸಮಾಜಕ್ಕಾಗಿ

ಶೌಚಾಲಯಗಳ ನಿರ್ಮಿಸಲು ಅ.5 ಕೊನೆಯ ದಿನ: ಸಿಇಓ

0

ಶೌಚಾಲಯಗಳ ನಿರ್ಮಿಸಲು ಅ.5 ಕೊನೆಯ ದಿನ: ಸಿಇಓ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯನ್ನು ಸಮರೋಪಾದಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕುರಿತಾಗಿ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಬೇಸಲೈನ್ ಸರ್ವೇ ಹೊರತುಪಡಿಸಿ, ಹೆಚ್ಚುವರಿಯಾಗಿ ಇನ್ನೂ ಶೌಚಾಲಯ ಹೊಂದದೇ ಇರುವ ಕುಟುಂಬಗಳಿಗೂ ಸಹ ಶೌಚಾಲಯ ನಿರ್ಮಾಣ ಮಾಡಿಸಿಕೊಡಲು ಈಗಾಗಲೇ ಸೂಚಿಸಲಾಗಿದೆ.

ಒಟ್ಟಾರೆ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿಯ ಎಲ್ಲ ಕುಟುಂಬಗಳಿಗೂ ಶೌಚಾಲಯ ನಿರ್ಮಿಸಿಕೊಡುವುದು ಕಡ್ಡಾಯವಾಗಿದೆ. ಈ ಕುರಿತಾಗಿ ಎಲ್ಲ ಗ್ರಾಮ ಪಂಚಾಯತಿಗಳಿಗೆ ಪತ್ರ, ವಿಡಿಯೋ ಸಂವಾದ ಹಾಗೂ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.

ಕಾರಣ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಅಂತಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಶೌಚಾಲಯಗಳನ್ನು ನಿರ್ಮಿಸಿ ಕೊಡಲು ಇದೇ ಅಕ್ಟೋಬರ 5ನೇ ತಾರೀಖಿನವರೆಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The post ಶೌಚಾಲಯಗಳ ನಿರ್ಮಿಸಲು ಅ.5 ಕೊನೆಯ ದಿನ: ಸಿಇಓ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.