ಉತ್ತಮ ಸಮಾಜಕ್ಕಾಗಿ

ಸಮಗ್ರ ಬೇಸಾಯ ತಾಂತ್ರಿಕತೆ ಕಾರ್ಯಾಗಾರ-ಸಾವಯವ ಕೃಷಿಗೆ ಕರೆ ರೈತರ ಆದಾಯ ದ್ವಿಗುಣಕ್ಕೆ ಪೈಲಟ್ ಯೋಜನೆ: ರಾಮಚಂದ್ರನ್

0

ಸಮಗ್ರ ಬೇಸಾಯ ತಾಂತ್ರಿಕತೆ ಕಾರ್ಯಾಗಾರ

ಬೆಳಗಾವಿ: ರೈತರ ಆದಾಯ ಸುಸ್ಥಿರಗೊಳಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಎಲ್ಲ ಹತ್ತೂ ತಾಲ್ಲೂಕುಗಳಿಂದ ಒಟ್ಟಾರೆ ನೂರು ಪ್ರಗತಿಪರ ರೈತರನ್ನು ಆಯ್ಕೆ ಮಾಡಿಕೊಂಡು ಅವರಿಗೆ ಸಮಗ್ರ ಬೇಸಾಯ ಪದ್ಧತಿಗೆ ಅಗತ್ಯವಿರುವ ಸೌಕರ್ಯಗಳನ್ನು ನರೇಗಾ ಯೋಜನೆಯಡಿ ಒದಗಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಹಾಗೂ ಕೃಷಿ ಇಲಾಖೆ ವತಿಯಿಂದ ಜಿಪಂ ಸಭಾಂಗಣದಲ್ಲಿ ಮಂಗಳವಾರ(ಸೆ.25) ಏರ್ಪಡಿಸಲಾಗಿದ್ದ ಸಮಗ್ರ ಬೇಸಾಯ ತಾಂತ್ರಿಕ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೃಷಿ ಇಲಾಖೆಯಿಂದ ಆಯ್ಕೆ ಮಾಡಲಾಗುವ ನೂರುಜನ ಪ್ರಗತಿಪರ ರೈತರಿಗೆ ದನದ ಕೊಟ್ಟಿಗೆ, ಸಾವಯವ ಗೊಬ್ಬರದ ಪಿಟ್‍ಗಳ ನಿರ್ಮಾಣ ಸೇರಿದಂತೆ ವಿವಿಧ ಸೌಕರ್ಯಗಳನ್ನು ನರೇಗಾ ಯೋಜನೆಯಡಿ ಕಲ್ಪಿಸಲಾಗುವುದು. ಇದಲ್ಲದೇ ಆಯ್ಕೆ ಮಾಡಲಾಗಿರುವ ರೈತರಿಗೆ ಕೃಷಿ, ರೇಷ್ಮೆ, ತೋಟಗಾರಿಕೆ, ಸಾಮಾಜಿಕ ಅರಣ್ಯ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಂದ ನಿರಂತರ ಮಾರ್ಗದರ್ಶನ ನೀಡುವ ಮೂಲಕ ಅವರ ಆದಾಯವನ್ನು ದ್ವಿಗುಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.

News Belgaum-ಸಮಗ್ರ ಬೇಸಾಯ ತಾಂತ್ರಿಕತೆ ಕಾರ್ಯಾಗಾರ-ಸಾವಯವ ಕೃಷಿಗೆ ಕರೆ ರೈತರ ಆದಾಯ ದ್ವಿಗುಣಕ್ಕೆ ಪೈಲಟ್ ಯೋಜನೆ: ರಾಮಚಂದ್ರನ್ಅನ್ನದಾತರಾದ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿಗೆ ತಲುಪಿರುವುದು ವಿಷಾದಕರ. ಬೆಳಗಾವಿ ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸ್ಥಿತಿ ಬರಬಾರದು ಎಂಬುದು ನಮ್ಮೆಲ್ಲರ ಆಶಯವಾಗಿದ್ದು, ಆ ನಿಟ್ಟಿನಲ್ಲಿ ಇಂತಹ ಮಾದರಿ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಸಾಯನಿಕ ಗೊಬ್ಬರವನ್ನು ತ್ಯಜಿಸಿ ಸಾವಯವ ಗೊಬ್ಬರ ಬಳಕೆ ಮಾಡುವುದರ ಜತೆಗೆ ಸಮಗ್ರ ಬೇಸಾಯ ಪದ್ಧತಿ ಅಳವಡಿಸಿಕೊಂಡರೆ ಆದಾಯ ದ್ವಿಗುಣಗೊಳಿಸುವ ಅವಕಾಶಗಳಿದ್ದು, ಈ ಬಗ್ಗೆ ರೈತರಿಗೆ ತಿಳಿವಳಿಕೆ ನೀಡಲಾಗುವುದು. ಸದ್ಯಕ್ಕೆ ನೂರು ರೈತರನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ಇದರ ಯಶಸ್ಸಿನ ಬಳಿಕ ಐದು ನೂರು, ನಂತರ ಸಾವಿರ ಹೀಗೆ ಮಾದರಿ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ರಾಮಚಂದ್ರನ್ ಹೇಳಿದರು.

ಉಷ್ಣ ವಿದ್ಯುತ್ ಉತ್ಪಾದನೆಯಿಂದ ಪರಿಸರಕ್ಕೆ ತೀವ್ರ ಹಾನಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ಸೌರ ವಿದ್ಯುತ್ ಫಲಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬೆಳಗಾವಿ ಜಿಲ್ಲಾ ಪಂಚಾಯ್ತಿ ಕಟ್ಟಡದ ಮೇಲೆ ಸೌರ ಫಲಕಗಳನ್ನು ಅಳವಡಿಸಿ ಈಗಾಗಲೇ 10 ಕಿಲೋ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದ್ದು, ಹೆಚ್ಚುವರಿಯಾಗಿ ಮತ್ತೆ ಹತ್ತು ಕೆವಿ ವಿದ್ಯುತ್ ಉತ್ಪಾದನೆಗೆ ಮಂಜೂರಾತಿ ಪಡೆದುಕೊಳ್ಳಲಾಗಿದೆ. ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲಾ ಪಂಚಾಯ್ತಿಯು ಸಂಪೂರ್ಣವಾಗಿ ಸೌರ ವಿದ್ಯುತ್ ಪಡೆಯುವ ಮೂಲಕ ಸ್ವಾವಲಂಬಿಯಾಗಲಿದೆ ಎಂದು ಹೇಳಿದರು.

ಸಾವಯವ ಕೃಷಿ ಮದ್ದು:
ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಆಹಾರ ಉತ್ಪಾದನೆ ಹೆಚ್ಚಿಸುವುದು ಅನಿವಾರ್ಯ. ಆದರೆ ಉತ್ಪಾದನೆ ಹೆಚ್ಚಳದ ಜತೆಗೆ ಮಣ್ಣಿನ ಫಲವತ್ತತೆ ಕಾಯ್ದುಕೊಂಡು ಮುಂದಿನ ಪೀಳಿಗೆಗೆ ಅದನ್ನು ಮುಂದುವರಿಸುವುದು ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಮಚಂದ್ರನ್ ಹೇಳಿದರು. ಮಿತಿ ಮೀರಿದ ಬಳಕೆಯಿಂದ ಪರಿಸರದಲ್ಲಿ ಅಸಮತೋಲನ ಉಂಟಾಗುತ್ತಿದ್ದು, ಇಂತಹ ಸನ್ನಿವೇಶÀದಲ್ಲಿ ಸಾವಯವ ಗೊಬ್ಬರ ಬಳಕೆ ಮಾತ್ರ ನಮ್ಮ ಮುಂದಿರುವ ಮಾರ್ಗವಾಗಿದೆ ಎಂದು ಹೇಳಿದರು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ ಅವರು, ಪಾರಂಪರಿಕ ಕೃಷಿ ಜತೆಗೆ ಕಾಲಕ್ಕೆ ತಕ್ಕಂತೆ ಆಧುನಿಕ ಬೇಸಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ ಮಾತನಾಡಿ, ರೈತರ ಅನುಕೂಲಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ಗ್ರಾಮ ಮಟ್ಟದಲ್ಲಿಯೇ ಸಭೆಗಳನ್ನು ನಡೆಸಿ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಬೇಕು ಎಂದು ಮನವಿ ಮಾಡಿಕೊಂಡರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಲಾನಿ ಮೊಖಾಶಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಪಾಟೀಲ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ ಉಪಸ್ಥಿತರಿದ್ದರು.
ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಎಚ್.ಡಿ.ಕೋಳೇಕರ ಅವರು ಸ್ವಾಗತಿಸಿದರು. ಕೃಷಿ, ತೋಟಗಾರಿಕೆ, ಸಾಮಾಜಿಕ ಅರಣ್ಯ, ಪಶು ಸಂಗೋಪನೆ, ರೇಷ್ಮೆ ಇಲಾಖೆಗಳ ವಿವಿಧ ಹಂತದ ನೂರಾರು ಅಧಿಕಾರಿಗಳು ಮತ್ತು ಪ್ರಗತಿಪರ ರೈತರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

The post ಸಮಗ್ರ ಬೇಸಾಯ ತಾಂತ್ರಿಕತೆ ಕಾರ್ಯಾಗಾರ-ಸಾವಯವ ಕೃಷಿಗೆ ಕರೆ ರೈತರ ಆದಾಯ ದ್ವಿಗುಣಕ್ಕೆ ಪೈಲಟ್ ಯೋಜನೆ: ರಾಮಚಂದ್ರನ್ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.