ಉತ್ತಮ ಸಮಾಜಕ್ಕಾಗಿ

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಡಾ. ರಾಜೇಂದ್ರಕುಮಾರ ಕಟ್ಟೆ

0

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ: ಕಾರ್ಯಾಗಾರ
ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಡಾ. ರಾಜೇಂದ್ರಕುಮಾರ ಕಟ್ಟೆ

ಬೆಳಗಾವಿ: ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಆತನ ಕುಟುಂಬಸ್ಥರ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ ಎಂದು ಬಿಮ್ಸ್‍ನ ಮಾನಸಿಕ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಂದ್ರಕುಮಾರ ಕಟ್ಟೆ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿನ ಮಚ್ಚೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಬುಧವಾರ (ಸೆ.19) ಹಮ್ಮಿಕೊಂಡಿದ್ದ ತಿಳುವಳಿಕೆ ಕಾರ್ಯಾಗಾರದಲ್ಲಿ ಅವರು ಉಪನ್ಯಾಸ ನೀಡಿದರು.

ಪ್ರಸ್ತುತ ದಿನಮಾನಗಳಲ್ಲಿ ಯುವಜನತೆ ಸಣ್ಣಪುಟ್ಟ ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯಾವಂತರಲ್ಲೇ ಆತ್ಮಹತ್ಯೆ ಹೆಚ್ಚಾಗಿದೆ. ಖ್ಯಾತ ಸಿನಿಮಾ ತಾರೆಯರು, ಪ್ರಸಿದ್ಧ ವ್ಯಕ್ತಿಗಳು ಕೂಡ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿಯೇ ಆತ್ಮಹತ್ಯೆಯ ಪ್ರಮಾಣ ಹೆಚ್ಚಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಮಾನಸಿಕ ಖಾಯಿಲೆ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ. ಕುಡಿತ, ಒತ್ತಡ, ಪ್ರೀತಿ ಪಾತ್ರರ ಅಗಲಿಕೆ, ನಿರುದ್ಯೋಗ ಹಾಗೂ ಉದ್ಯೋಗದಲ್ಲಿ ಒತ್ತಡವೂ ಸಹ ಆತ್ಮತ್ಯಗೆ ಕಾರಣವಾಗಿವೆ ಎಂದು ಹೇಳಿದರು.

News Belgaum-ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಡಾ. ರಾಜೇಂದ್ರಕುಮಾರ ಕಟ್ಟೆ 1ಕೆಲವೊಮ್ಮೆ ಸಮಯಪ್ರಜ್ಞೆಯಿಂದ ಆತ್ಮಹತ್ಯೆಗಳನ್ನು ತಡೆಗಟ್ಟಬಹುದು. ಖಿನ್ನತೆಗೆ ಒಳಗಾದ ಮಕ್ಕಳ ಬಗ್ಗೆ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು. ಅವರನ್ನು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ ಹೊರತು ಆತ್ಮಹತ್ಯೆಯ ಹಕ್ಕಿಲ್ಲ. ಆತ್ಮಹತ್ಯೆಗೆ ಯತ್ನಿಸಿ ವಿಫಲವಾಗುವ ವ್ಯಕ್ತಿ ಹಾಗೂ ಅದಕ್ಕೆ ಪ್ರಚೋದನೆ ನೀಡುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳ ಶಿಕ್ಷೆಗೆ ಅವಕಾಶವಿದೆ ಎಂದು ಎಂದು ತಿಳಿಸಿದರು.

ವಿಫಲತೆ, ಮಾದಕ ವಸ್ತುಗಳ ವ್ಯಸನ, ನೋವು ಮತ್ತು ದೇಹದ ನ್ಯೂನತೆಗಳು ಆತ್ಮಹತ್ಯೆಗೆ ಪ್ರಚೋದಿಸುತ್ತವೆ. ಆದರೆ ಅವುಗಳನ್ನು ಎದುರಿಸಲಾಗದೇ ಆತ್ಮಹತ್ಯೆಗೆ ಒಳಗಾಗುವುದು ಸರಿಯಲ್ಲಿ. ಸಮಸ್ಯೆಗಳನ್ನು ಮೆಟ್ಟಿ ನಿಂತು ಎದುರಿಸಬೇಕೆಂದು ಹೇಳಿದರು.

ಪ್ರಭಾರ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಬಿ.ಎನ್. ತುಕ್ಕಾರ ಪ್ರಾಸ್ತಾವಿಕ ಮಾತನಾಡಿದರು. ಡಾ. ಸರಸ್ವತಿ ಪ್ರತಿಜ್ಞಾವಿಧಿ ಬೋಧಿಸಿದರು. ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ನ್ಯಾಯಾಧೀಶರಾದ ಶಿವಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಪ್ಪಾಸಾಹೇಬ ನರಟ್ಟಿ, ತಾಲೂಕು ಹಿಂದುಳಿದ ವರ್ಗಗಳ ಅಧಿಕಾರಿಗಳಾದ ಕೆಂಪಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

The post ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಡಾ. ರಾಜೇಂದ್ರಕುಮಾರ ಕಟ್ಟೆ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.