ಉತ್ತಮ ಸಮಾಜಕ್ಕಾಗಿ

ಸಿದ್ದರಾಮೇಶ್ವರ ಜಯಂತಿ ಆಚರಣೆ

0

ಬೆಳಗಾವಿ, tarunkranti (ಕರ್ನಾಟಕ ವಾರ್ತೆ): ಸಮಾಜದ ಅಭಿವೃದ್ದಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅಪಾರವಾಗಿದ್ದು, ಯುವಕರು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಸುರೇಶ ಅಂಗಡಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಲ್ಲಿನ ಕುಮಾರಗಂಧರ್ವ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತೋತ್ಸವದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಿವಯೋಗಿ ಸಿದ್ದರಾಮೇಶ್ವರರು ಮಹಿಳೆಯರಿಗೆ ಸ್ವಾತಂತ್ರ್ಯ ಕಲ್ಪಿಸಲು ಹೋರಾಡಿದ ಮಹನೀಯರು ಅವರ ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ ಕಾರ್ಯ ನಿಜಕ್ಕೂ ಶ್ಲಾಘನೀಯ.
ಭೋವಿ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ತೀರಾ ಹಿಂದುಳಿದಿದ್ದು, ಸರ್ಕಾರ ಸಮಾಜದ ಅಭಿವೃದ್ದಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದೆ ಯುವಕರು ಇದರ ಸದುಪಯೋಗ ಪಡೆದುಕೊಂಡು ಉನ್ನತ ಸ್ಥಾನಕ್ಕೆ ಏರುವಂತೆ ಕರೆ ನೀಡಿದರು.
ದರೂರು ಸಂಶೋಧನಾ ಕೇಂದ್ರ ನಿರ್ದೇಶಕರಾದ ಡಾ, ವ್ಹಿ.ಎಸ್. ಮಾಳಿ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡಿದರು.
ಅಪರ ಜಿಲ್ಲಾಧಿಕಾರಿಗಳಾದ ಸುರೇಶ ಇಟ್ನಾಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಶ್ರೀಶೈಲ್ ಕರಿಶಂಕರಿ, ಭೋವಿ ಸಮಾಜದ ಮುಖಂಡರಾದ ಕೆ.ಎಸ್. ಮಮದಾಪೂರ, ಎ.ಎಮ್. ಪಾಟೀಲ್ ಇತರರು ವೇದಿಕೆ ಮೇಲಿದ್ದರು. ಜಮಾದಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಯಾದವೇಂದ್ರ ಪೂಜಾರಿ ಸಂಘಡಿಗರು ಗಾಯನ ಪ್ರಸ್ತುತಪಡಿಸಿದರು.
ಮೆರವಣಿಗೆಗೆ ಚಾಲನೆ:
ಇದಕ್ಕೂ ಮುನ್ನ ಅಶೋಕ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಶಿವಯೋಗಿ ಸಿದ್ದರಾಮೇಶ್ವರರ ಭಾವ ಚಿತ್ರ ಮೆರವಣಿಗೆಗೆ ಚಾಲನೆ ನೀಡಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆ ಚನ್ನಮ್ಮ ವೃತ್ತದ ಮೂಲಕ ಕೊಲ್ಹಾಪೂರ್ ಸರ್ಕಲ್ ಮಾರ್ಗವಾಗಿ ಕುಮಾರ ಗಂಧರ್ವ ರಂಗ ಮಂದಿರಕ್ಕೆ ಬಂದು ತಲುಪಿತು. ಮೆರವಣಿಗೆಯುದ್ದಕ್ಕೂ ಡೊಳ್ಳು ಕುಣಿತ, ಛದ್ಮವೇಷಗಳು ಗಮನ ಸೆಳೆದವು.

Leave A Reply

 Click this button or press Ctrl+G to toggle between Kannada and English

Your email address will not be published.