ಉತ್ತಮ ಸಮಾಜಕ್ಕಾಗಿ

ಸೆ.22 ರಂದು ನೂಲ್ವಿಯಲ್ಲಿ ಜಿಲ್ಲಾಮಟ್ಟದ ಜನಸಂಪರ್ಕ ಸಭೆ ಮತ್ತು ಶ್ರಮದಾನ

0

ಸೆ.22 ರಂದು ನೂಲ್ವಿಯಲ್ಲಿ ಜಿಲ್ಲಾಮಟ್ಟದ ಜನಸಂಪರ್ಕ ಸಭೆ ಮತ್ತು ಶ್ರಮದಾನ

ಧಾರವಾಡ : ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ಸೆಪ್ಟೆಂಬರ್ ೨೨ ರಂದು ಜಿಲ್ಲಾಡಳಿತದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ ಮತ್ತು ಅಂದು ಬೆಳಿಗ್ಗೆ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಅವರು ಇಂದು ಮಧ್ಯಾಹ್ನ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಜನಸಂಪರ್ಕ ಸಭೆ ಆಯೋಜಿಸುವ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು.

ಸೆಪ್ಟೆಂಬರ್ ೨೨ರ ಬೆಳಿಗ್ಗೆ ೭ ಗಂಟೆಯಿಂದ ೯ ಗಂಟೆಯವರೆಗೆ ಗ್ರಾಮದ ಸ್ವಚ್ಛತಾ ಕಾರ್ಯಕ್ರಮವನ್ನು ಶ್ರಮದಾನದ ಮೂಲಕ ನಿರ್ವಹಿಸಲಾಗುವುದು.

ಇದರಲ್ಲಿ ಎಲ್ಲ ಅಧಿಕಾರಿಗಳು, ಕಾಲೇಜ್ ವಿದ್ಯಾರ್ಥಿಗಳು ಪಾಲ್ಗೊಳ್ಳುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪಶು ವೈದ್ಯಕೀಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ವಿವಿಧ ಜನಜಾಗೃತಿ ಮತ್ತು ಆರೋಗ್ಯ ಚಿಕಿತ್ಸಾ ಶಿಬಿರಗಳನ್ನು ಆಯೋಜಿಸಲಾಗುವುದು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ರಿಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುವುದು. ನಂತರ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನದವರೆಗೆ ಜನಸಂಪರ್ಕ ಸಭೆಯನ್ನು ಜರುಗಿಸಿ ಸಾರ್ವಜನಿಕರ ಕುಂದುಕೊರತೆ, ಅಹವಾಲುಗಳನ್ನು ಸ್ವಿಕರಿಸಲಾಗುವುದು.

ಮತ್ತು ಸ್ಥಳೀಯವಾಗಿ ಅವುಗಳನ್ನು ಪರಿಹರಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಆದ್ದರಿಂದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅಹವಾಲುಗಳ ಕುರಿತು ಪರಿಶೀಲಿಸಿ ಅಂದು ವಿಲೇವಾರಿಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಮತ್ತು ಈ ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕರಾದ ಸಿ.ಎಸ್. ಶಿವಳ್ಳಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಜಿ. ಕೊರವರ, ಉಪವಿಭಾಗಾಧಿಕಾರಿ ಮಹಮ್ಮದ್ ಝುಬೇರ್, ಕೃಷಿ ಇಲಾಖೆಯ ಜಂಟಿನಿರ್ದೆಶಕ ಟಿ.ಎಸ್. ರುದ್ರೆಶಪ್ಪ, ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೆಶಕ ಮುನಿರಾಜು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಹಿರಿಯ ಉಪನಿರ್ದೆಶಕ ಸದಾಶಿವ ಮರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ಎಂ. ದೊಡ್ಡಮನಿ, ಹುಬ್ಬಳ್ಳಿ ತಹಶೀಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ////

The post ಸೆ.22 ರಂದು ನೂಲ್ವಿಯಲ್ಲಿ ಜಿಲ್ಲಾಮಟ್ಟದ ಜನಸಂಪರ್ಕ ಸಭೆ ಮತ್ತು ಶ್ರಮದಾನ appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.