ಉತ್ತಮ ಸಮಾಜಕ್ಕಾಗಿ

ಹಣ ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದ್ದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಾಕ್ಷಾದಾರಗಳನ್ನು ಪ್ರದರ್ಶನ ಮಾಡಲಿ : ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಸವಾಲು

0

ಹಣ ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದ್ದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಾಕ್ಷಾದಾರಗಳನ್ನು ಪ್ರದರ್ಶನ ಮಾಡಲಿ : ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಸವಾಲು

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಹಣ ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದ್ದ ಬಗ್ಗೆ ಮಾಧ್ಯಮಗಳ ಮುಂದೆ ಸಾಕ್ಷಾದಾರಗಳನ್ನು ಪ್ರದರ್ಶನ ಮಾಡಲಿ ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಸವಾಲು ಹಾಕಿದ್ದಾರೆ.

ಅವರು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಎರಡು ಸಮ್ಮಿಶ್ರ ಪಕ್ಷಗಳಿಗೆ ಸರ್ಕಾರ ನಡೆಸಲು ಆಗುತ್ತಿಲ್ಲವೆಂದ ಮಾತ್ರಕ್ಕೆ ಈ ರೀತಿಯ ಜನರ ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ ಎಂದರು. ಸರ್ಕಾರವನ್ನು ಬಿಜೆಪಿ ಕೆಡವುದಿಲ್ಲ, ತಾನಾಗಿಯೇ ಉರಳುತ್ತದೆ. ಮುಂದೆ ಸರ್ಕಾರ ರಚನೆ ಬಿಜೆಪಿ ಮಾಡುತ್ತದೆ ಎಂದು ಪ್ರಭಾಕರ ಕೋರೆ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ತುಂಬಿದ ಮನೆ, ವಿಶ್ವದಲ್ಲಿಯೇ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಯಾರಿಗಾದರೂ ಸ್ವಾಗತವಿದೆ. ನಾವು ಯಾರಿಗೆ ಹಣ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳುವ ಅವಶ್ಯಕತೆಯಿಲ್ಲ ಎಂದರು.

The post ಹಣ ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದ್ದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಾಕ್ಷಾದಾರಗಳನ್ನು ಪ್ರದರ್ಶನ ಮಾಡಲಿ : ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಸವಾಲು appeared first on News Belgaum.

Source link

Leave A Reply

 Click this button or press Ctrl+G to toggle between Kannada and English

Your email address will not be published.