ಉತ್ತಮ ಸಮಾಜಕ್ಕಾಗಿ

ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಅದ್ಧೂರಿಯಾಗಿ ಜರುಗಲಿದೆ.

newsbelagavi

0

ಬೆಳಗಾವಿ:(news belgaum) ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಅದ್ಧೂರಿಯಾಗಿ ಜರುಗಲಿದೆ.
ಪೌರಾಡಳಿತ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶವನ್ನು ನೀಡುವರು.
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರು ಹಾಗೂ ಡೇಂಘೀ: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಸೂಚನೆ- Tarun kranti 2ಶಾಸಕರಾದ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲೆಯ ಎಲ್ಲ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಮಹಾಪೌರರು, ಜಿಲ್ಲಾ ಪಂಚಾಯತ ಅಧ್ಯಕ್ಷರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಕಾರ್ಯಕ್ರಮದ ವಿವರ:
ಬೆಳಿಗ್ಗೆ 8:55 ಗಂಟೆಗೆ ಮುಖ್ಯ ಅತಿಥಿಗಳ ಆಗಮನ, 9 ಗಂಟೆಗೆ ಧ್ವಜಾರೋಹಣ, 9:02 ಗಂಟೆಗೆ ಮುಖ್ಯ ಅತಿಥಿಗಳಿಂದ ಕವಾಯತು ಪರಿವೀಕ್ಷಣೆ, ಸಶಸ್ತ್ರ ಪಡೆಗಳ ಪಥಸಂಚಲನ ಹಾಗೂ ಮುಖ್ಯ ಅತಿಥಿಗಳಿಂದ ಸಂದೇಶ, 10 ಗಂಟೆಗೆ ಸ್ವಾತಂತ್ರ್ಯ ಯೋಧರಿಗೆ ಸತ್ಕಾರ ಕಾರ್ಯಕ್ರಮ ಜರುಗಲಿದೆ.
ಸಂಜೆ 4 ಗಂಟೆಯಿಂದ 8 ಗಂಟೆಯವರೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ವಿಶೇಷ ಸೂಚನೆ:
ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಲು ಬೆಳಿಗ್ಗೆ 8:45 ಗಂಟೆಯೊಳಗೆ ಬಂದು ತಮ್ಮ ಆಸನದಲ್ಲಿ ಆಸೀನರಾಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.