ಉತ್ತಮ ಸಮಾಜಕ್ಕಾಗಿ

ನಾಳೆ ಖುದ್ದು ನಾನೆ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

news belagavi

0

ಬೆಂಗಳೂರು: (news belgaum)ಜಾರಕಿಹೊಳಿ ಸಹೋದರರು ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾಳೆ ಖುದ್ದು ನಾನೆ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಡಿಸಿಎಂ ಡಾ.ಜಿ.ಪರಮೇಶ್ವರ್ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಅವರ ಜತೆ ತಮ್ಮ ನಿವಾಸದಲ್ಲಿ ಚರ್ಚೆ ನಡೆಸಿ ನಂತರ ಮಾತನಾಡಿದ ಅವರು, ಜಾರಕಿಹೊಳಿ ಸಹೋದರರು ನನ್ನ ಸ್ನೇಹಿತರು. ಅವರು ಸದ್ಯ ಬ್ಯುಸಿಯಾಗಿದ್ದು, ರಾಷ್ಟ್ರಪತಿಯವರ ಕಾರ್ಯಕ್ರಮಕ್ಕಾಗಿ ನಾನು ಬೆಳಗಾವಿಗೆ ಹೋಗುತ್ತಿದ್ದೇನೆ. ಆಗ ಜಾರಕಿಹೊಳಿ ಸಹೋದರರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸುತ್ತೇನೆ ಎಂದರು.
ಜಾರಕಿಹೊಳಿ ಸಹೋದರರ ನಡುವಿನ ಸಂಬಂಧ ಭಗವಂತ ಮತ್ತು ಭಕ್ತರ ಸಂಬಂಧದಂತೆ ಅದನ್ನು ಬಿಡಿಸಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ನಾಯಕರು ಕಾಂಗ್ರೆಸಿಗರನ್ನು ಸಂಪರ್ಕಿಸುತ್ತಿರುವ ಬಗ್ಗೆ ಡಿಸಿಎಂ ಅವರ ಬಳಿ ಮಾಹಿತಿ ಇದೆ. ಅದನ್ನು ಆಧರಿಸಿ ಅವರು ಆದಾಯ ತೆರಿಗೆ ಇಲಾಖೆ ಮತ್ತು ಎಸಿಬಿಗೆ ದೂರು ಕೊಡುವುದಾಗಿ ಹೇಳಿದ್ದಾರೆ. ಸದ್ಯಕ್ಕೆ ಎಲ್ಲವನ್ನೂ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸಮಯ ಬಂದಾಗ ಹೇಳುತ್ತೇನೆ ಎಂದು ತಿಳಿಸಿದರು.
ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಲವಾರು ಮಂತ್ರಿಗಳು ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ಶಾಸಕರಾದ ರಂಗನಾಥ್, ಮುನಿರತ್ನ ಅವರು ನಮ್ಮನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್‍ನ 78ಮಂದಿ ಶಾಸಕರು ಒಂದು ಕುಟುಂಬ ಇದ್ದಂತೆ ಎಲ್ಲರೂ ಒಟ್ಟಾಗಿದ್ದೇವೆ. ಕೆಲವರ ಮೇಲೆ ರಾಜಕೀಯ ಒತ್ತಡಗಳು ಬರುತ್ತಿವೆ ಎಂದು ಹೇಳಿದರು.
ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಜತೆ ಸಂಪರ್ಕದಲ್ಲಿರುವ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಲು ನಿರಾಕರಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.