ಉತ್ತಮ ಸಮಾಜಕ್ಕಾಗಿ

ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯ, ಬೆಳಗಾವಿ 72 ನೇ ಸ್ವಾತಂತ್ರ್ಯ ದಿನಾಚರಣೆ

news

0

72 ನೇ ಸ್ವಾತಂತ್ರ್ಯ ದಿನಾಚರಣೆ
News Belgaum-ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯ, ಬೆಳಗಾವಿ 72 ನೇ ಸ್ವಾತಂತ್ರ್ಯ ದಿನಾಚರಣೆಬೆಳಗಾವಿ:(news belgaum) ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ 72 ನೇಯ ಸ್ವಾತಂತ್ರ್ಯ ದಿವಸದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ. ಸ್ಪೂರ್ತಿ ಪಾಟೀಲ, ಭಾರತ ದೇಶವು ಸ್ವಾತಂತ್ರ್ಯ ನಂತರ ಶೈಕ್ಷಣಿಕ, ತಾಂತ್ರಿಕ, ಕ್ರೀಡಾ ಹಾಗೂ ಸಾಂಸ್ಕøತಿಕ ಕಲೆಗಳಿಂದ ಶ್ರೇಷ್ಟವಾಗಿದೆ. ಭಾರತದಲ್ಲಿನ ಯುವಶಕ್ತಿ ಜಗತ್ತಿನಲ್ಲೇ ಪ್ರಸಿದ್ಧಿಯಾಗಿದ್ದು, ಯುವಕರು ದೇಶವನ್ನು ಉನ್ನತ ಮಟ್ಟಕ್ಕೆ ಒಯ್ಯುವಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳು ಕೌಶಲ್ಯ ಕಲೆಗಳನ್ನು ಕಲಿತು ದೇಶ ಸೇವೆ ಮಾಡಬೇಕೆಂದು ಕರೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಪೂಜಾರಿ ಕಾಲೇಜಿನ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಮತ್ತು ಎಲ್ಲ ನಾಗರಿಕರು ತಮ್ಮ ಕರ್ತವ್ಯಗಳ ನಿರ್ವಹಣೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಶೈಕ್ಷಣಿಕ ಮತ್ತು ಪಠ್ಯೇತರ ಕೌಶಲ್ಯಗಳ ತರಬೇತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಅರಿವು ಮೂಡಿಸುವಂತೆ ಶಿಕ್ಷಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಂಗಡಿ ಇಂಟರ್‍ನ್ಯಾಷನಲ್ ಸ್ಕೂಲಿನ ಮುಖ್ಯಾಧ್ಯಾಪಕಿ ಆಶಾ ರಜಪೂತ, ಅಂಗಡಿ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಪ್ರೊ. ಸಂಗೀತಾ ದೇಸಾಯಿ ಹಾಗೂ ವಿದ್ಯಾರ್ಥಿಗಳಾದ ಸ್ವಪ್ನಾ ಹಾಗೂ ಪ್ರೀತಿಯವರು ಸ್ವಾತಂತ್ಯ್ರೋತ್ಸವದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಅಂಗಡಿ ತಾಂತ್ರಿಕ ಕಾಲೇಜು, ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ಇಂಟರ್‍ನ್ಯಾಷನಲ್ ಸ್ಕೂಲಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಗಳು ಜರುಗಿದವು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ರಾಜು ಜೋಶಿ, ಡಾ. ಸುರೇಶ ಬಾಬು, ಪ್ರೊ. ಅನಿಲಕುಮಾರ ಕೋರಿಶೆಟ್ಟಿ, ಪ್ರೊ. ಎಂ.ವಿ. ಕಂಠಿ, ದೈಹಿಕ ನಿರ್ದೇಶಕರಾದ ವಿಶಾಂತ ದಮೋಣೆ, ದೈಹಿಕ ಶಿಕ್ಷ ಮಹಾದೇವ ಶಿರಗಾಂವಕರ ಸೇರಿದಂತೆ ಎಲ್ಲ ವಿಭಾಗಗಳ ಮುಖ್ಯಸ್ಥರು, ಶಿಕ್ಷಕ ಹಾಗೂ ಶಿಕ್ಷೇತರ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹರ್ಷೋಲ್ಲಾಸದಿಂದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡರು.
ಪ್ರೊ. ಪ್ರಿಯಾಂಕಾ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.