ಉತ್ತಮ ಸಮಾಜಕ್ಕಾಗಿ

ವಿಮಾನ ನಿಲ್ದಾಣ ಅಭಿವೃದ್ಧಿಗೆ 37.40 ಎಕರೆ ಜಮೀನು ಬೇಡಿಕೆ ಸಮಗ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ

37.40 acres for airport development District Commissioner to file a comprehensive report on land demand

0

ಬೆಳಗಾವಿ:  (news belagavi“ಬೆಳಗಾವಿ ವಿಮಾನ ನಿಲ್ದಾಣದ ಒಟ್ಟಾರೆ ಅಭಿವೃದ್ಧಿಗಾಗಿ ಇನ್ನೂ 37.40 ಎಕರೆ ಭೂಮಿ ಒದಗಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರವು ಬೇಡಿಕೆ ಸಲ್ಲಿಸಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ(ಜುಲೈ 25) ಸಭೆ ನಡೆಸಿದ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕಾಗಿ ಇದುವರೆಗೆ ಒಟ್ಟು ಎಷ್ಟು ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಹಾಗೂ ಎಷ್ಟು ಪರಿಹಾರ ವಿತರಣೆ ಮಾಡಲಾಗಿದೆ ಎಂಬುದರ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಉಪ ವಿಭಾಗಾಧಿಕಾರಿಗಳಿಗೆ ಸೂಚನೆ
ನೀಡಿದ್ದಾರೆ.

ವಿಮಾನ ನಿಲ್ದಾಣ ಅಭಿವೃದ್ಧಿಗೆ 37.40 ಎಕರೆ ಜಮೀನು ಬೇಡಿಕೆ ಸಮಗ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಸೂಚನೆ- Tarun kranti
ಭೂಸ್ವಾಧೀನ ಹಾಗೂ ಪರಿಹಾರ ವಿತರಣೆಯ ಬಗ್ಗೆ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸರ್ವೆ ನಂಬರ್ ಪ್ರಕಾರ ಸಮಗ್ರ ವರದಿ ನೀಡಬೇಕು ಎಂದರು.
ವಿಮಾನ ನಿಲ್ದಾಣ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 370 ಎಕರೆ ಜಮೀನು ನೀಡಿದೆ. ಇದರಲ್ಲಿ ವಿಮಾನ ನಿಲ್ದಾಣದ ಪಶ್ಚಿಮ ಭಾಗದಲ್ಲಿರುವ ಜಮೀನು ಇನ್ನೂ ಹಸ್ತಾಂತರಿಸಿಲ್ಲ; 14 ಎಕರೆ ಜಮೀನು ವಾಯುಸೇನೆಯ ಕಬ್ಜಾದಲ್ಲಿದೆ. ಇದಲ್ಲದೇ ಸ್ಮಶಾನಭೂಮಿ ಹಾಗೂ ಗ್ರಾಮಸ್ಥರಿಗೆ ರಸ್ತೆಗಾಗಿ ಜಮೀನು ಬಿಟ್ಟುಕೊಟ್ಟಿರುವುದರಿಂದ ವಿಮಾನ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಭೂಮಿಯ ಕೊರತೆಯಾಗಿದೆ ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ್ ಮೌರ್ಯ ಸಭೆಯಲ್ಲಿ ವಿವರಿಸಿದರು.

ಆಸ್ತಿ ಕರ ಭರಿಸಲು ಒಪ್ಪಿಗೆ:
ಸರ್ಕಾರವು ವಿಮಾನ ನಿಲ್ದಾಣದ ಕಾರ್ಯಾರಂಭದ ನಂತರ ಐದು ವರ್ಷಗಳ ಕಾಲ ತೆರಿಗೆ ವಿನಾಯಿತಿ ನೀಡಿತ್ತು. ಇದೀಗ ವಿನಾಯಿತಿ ಅವಧಿ ಮುಗಿದಿರುವುದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಆಸ್ತಿ ಕರ ಪಾವತಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಅವರು ತಿಳಿಸಿದರು.
ಇದಕ್ಕೆ ಒಪ್ಪಿಗೆ ಸೂಚಿಸಿದ ವಿಮಾನ ನಿಲ್ದಾಣದ ನಿರ್ದೇಶಕರು, ಆಸ್ತಿ ತೆರಿಗೆ ನಿರ್ಧರಿಸುವ ಮಾನದಂಡ ಹಾಗೂ ಭರಿಸಬೇಕಾದ ತೆರಿಗೆ ವಿವರ ಒದಗಿಸಿದರೆ ತೆರಿಗೆ ಭರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 2017ರ ಫೆಬ್ರುವರಿ ತಿಂಗಳಿನಿಂದ ಅನ್ವಯಿಸಿ ಆಸ್ತಿತೆರಿಗೆ ಸಂಗ್ರಹಿಸುವಂತೆ ರಾಮಚಂದ್ರನ್ ನಿರ್ದೇಶನ ನೀಡಿದರು.

ನೀರಿನ ಬಾಕಿ- ಪ್ರಸ್ತಾವ ಸಲ್ಲಿಸಲು ಸೂಚನೆ:                                                                                                      ರಾಜ್ಯ ಸರ್ಕಾರವು ಬೆಳಗಾವಿ ವಿಮಾನ ನಿಲ್ದಾಣದ ನೀರಿನ ಬಿಲ್‍ಗೆ ಐದು ವರ್ಷಗಳ ವಿನಾಯಿತಿ ನೀಡಿತ್ತು. ಆದರೆ ಈ ಅವಧಿಯಲ್ಲಿ ಬಾಕಿ ಉಳಿದಿರುವ ನೀರಿನ ಬಿಲ್‍ಗೆ ಸಂಬಂಧಿಸಿದ ಬಡ್ಡಿಯನ್ನು ಕಟ್ಟುವುದು ಬಾಕಿ ಇದೆ ಎಂದು ನೀರು ಸರಬರಾಜು ಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎನ್.ಕರಿಯಪ್ಪ ತಿಳಿಸಿದರು.
ಸರ್ಕಾರ ನೀರಿನ ಬಿಲ್‍ಗೆ ಐದು ವರ್ಷಗಳ ವಿನಾಯಿತಿ ನೀಡಿರುವುದರಿಂದ ಆ ಅವಧಿಯಲ್ಲಿ ಬಾಕಿ ಉಳಿದಿರುವ 9.87 ಲಕ್ಷ ರೂಪಾಯಿ ಬಡ್ಡಿ ಹಣ ಪಾವತಿಗೆ ಸಂಬಂಧಿಸಿದಂತೆ ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು ಸೂಚನೆ ನೀಡಿದರು.
ಬೆಳಗಾವಿ ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ತಹಶೀಲ್ದಾರ ಮಂಜುಳಾ ನಾಯಕ, ಹೆಸ್ಕಾಂ, ಜಲಮಂಡಳಿ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.