ಉತ್ತಮ ಸಮಾಜಕ್ಕಾಗಿ

ಮಾನವ ಸಾಗಾಣಿಕೆ ತಡೆ ಕುರಿತು ಬೃಹತ್ ಕಾಲ್ನಡಿಗೆ

A huge walkway on human trafficking barriers

0

ಬೆಳಗಾವಿ: (news belgaum) 8/3/2018 ರಂದು ಮಹಿಳೆಯರು ಇಂದಿನ ಆಧುನಿಕ ಯುಗದಲ್ಲಿ ಹಲವಾರು  ಕ್ಷೇತ್ರದಲ್ಲಿ ತಮ್ಮದೇಯಾದ ಸಾಧನೆ ಮಾಡಿ ಸಬಲರಾಗಿದ್ದರೂ ಕೂಡಾ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ, ಮಾರಾಟ, ಇಂತಹ ಸಮಸ್ಯೆಗಳಿಗೆ ಬಲಿಯಾಗುತ್ತಿರುವುದು ಖೇದನಿಯ ಸಮಸ್ಯೆಗಳ ವಿರುದ್ದ ಹೋರಾಡಿ ಮಹಿಳೆಯರು ಸಬಲರಾಗಬೇಕೆಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಆರ್.ಜೆ. ಸತೀಶ ಸಿಂಗ್ ಅಭಿಪ್ರಾಯಪಟ್ಟರು.

ಮಾನವ ಸಾಗಾಣಿಕೆ ತಡೆ ಕುರಿತು ಬೃಹತ್ ಕಾಲ್ನಡಿಗೆ- Tarun kranti 2ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾನವ ಸಾಗಾಣಿಕೆ ತಡೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜಸ್ಟೀಸ್ ಆಂಡ್ ಕೇರ, ಆಪರೇಶನ ರೆಡ್ ಅಲರ್ಟ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಕಾಲ್ನಡಿಗೆ ಜಾಥಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ದಿನಮಾನಗಳಲ್ಲಿ ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ಒದಗಿಸಲಾಗಿದೆ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ ಅವರು ಮಾತನಾಡಿ, ಮಹಿಳೆಯರಿಗೆ ರಾಜಕೀಯ, ಉದ್ಯೋಗ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಲವಾರು ರೀತಿಯ ಅವಕಾಶಗಳನ್ನು ಸರಕಾರ ಒದಗಿಸುತ್ತಿದೆ. ಹೆಣ್ಣು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಗಟ್ಟಲು ಸರಕಾರದೊಂದಿಗೆ ಶಾಲಾ, ಕಾಲೇಜುಗಳು ಹಾಗೂ ಸಂಘ, ಸಂಸ್ಥೆಗಳು ಕೈಜೋಡಿಸಬೇಕು ಎಂದು ಹೇಳಿದರು.

ಉಪ ಪೊಲೀಸ ಆಯುಕ್ತರಾದ ಸೀಮಾ ಲಾಟ್ಕರ ಅವರು ಮಾತನಾಡಿ, ಮಹಿಳೆಯರು ಆತ್ಮ ರಕ್ಷಣೆಗಾಗಿ ಹಲವಾರು ಸ್ವ ರಕ್ಷಣಾ ತಂತ್ರಗಳನ್ನು ಕಲಿಯಬೇಕು. ಸಮಸ್ಯೆಗಳು ಬಂದಾಗ ಹೆದರದೇ ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಿರಣ ಕಿಣೆ ಜಸ್ಟೀಸ್  ಆಂಡ ಕೇರ ಸಂಸ್ಥೆಯ ಚಂದನ ಎಂ.ಸಿ, ಲೋಕೇಶ ಗುಜಾರಪ್ಪ, ಸೀಮಾ, ಆಪರೇಶನ ರೆಡ್ ಅಲರ್ಟನ್ ರಾಜ್ಯ ಸಂಯೊಜಕರಾದ ಮುನಿಚೌಡಪ್ಪಾ, ಮಂಗಳೇಶ,  ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎನ್‍ಎನ್‍ಎಸ್ ವಿಭಾಗದ ಸಂಯೋಜನಾಧಿಕಾರಿ ಡಾ|| ಎಸ್.ಒ. ಹಲಸಗಿ, ಬೆಳಗಾವಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಫ್.ಬಿ. ನಧಾಪ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಸಿಸ್ಟರ್ ಲೂರ್ಧ, ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾದ ಜಾತಾ ಕಾಕತಿವೇಸ, ಗಣಪತಿ ಗಲ್ಲಿ, ಮಾರುತಿ ಗಲ್ಲಿ , ಬೋಗಾರ್ವೇಸ್ ಮೂಲಕ ಸರದಾರ ಮೈದಾನ ತಲುಪಿತು.

ಬೆಳಗಾವಿ ನಗರದ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಸರಕಾರಿ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳು, ಸಂಗಾತಿ ಕೌಟುಂಬಿಕ ಸಲಹಾ ಕೇಂದ್ರ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾವಿರಾರು ಜನರು ಜಾಥಾದಲ್ಲಿ ಪಾಲ್ಗೊಂಡಿದ್ದರು.A huge walkway on human trafficking barriers

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.