ಉತ್ತಮ ಸಮಾಜಕ್ಕಾಗಿ

ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

newsbelagavi

0

ಬೆಳಗಾವಿ: (news belagavi)ರಾಜ್ಯದ 21 ಜಿಲ್ಲೆಗಳ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ಆಗಸ್ಟ್ 31 ರಂದು ಚುನಾವಣೆ ನಡೆಯಲಿರುತ್ತದೆ.
ಚುನಾವಣೆ ಜರುಗುವ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ, ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಆ.31 ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ.
ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು. ಈ ಆದೇಶವು ನೆಗೋಷಿಯಲ್ ಇನ್ಸ್ಟ್ರುಮೆಂಟ್ ಆ್ಯಕ್ಟ್ 1881 ರ ಪ್ರಕಾರವು ಕೂಡ ಸಾರ್ವಜನಿಕ ರಜೆಯೆಂದು ಘೋಷಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ನವೀನ ಜೋಸೆಫ್. ಎ ಅವರು ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.