ಉತ್ತಮ ಸಮಾಜಕ್ಕಾಗಿ

ಪ್ರಕಟಣೆಗಳು

news

0

ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್‍ರಿಂದ ಅಹವಾಲು ಸ್ವೀಕಾರ
ಬೆಳಗಾವಿ:(news belgaum) ಬೆಳಗಾವಿಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಅಧಿಕಾರಿಗಳು ಆಗಸ್ಟ 16 ರಿಂದ 23 ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಮಾಹಿತಿ ನೀಡುವ ಹಾಗೂ ಸಾರ್ವಜನಿಕರ ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಗಸ್ಟ 16 ರಂದು ಬೆಳಿಗ್ಗೆ 11 ಗಂಟೆಯಿಂದ ಘಟಪ್ರಭಾ ಪಟ್ಟಣ ಪಂಚಾಯತಿ ಕಚೇರಿ, ಮಧ್ಯಾಹ್ನ 4 ಗಂಟೆಯಿಂದ ಕುಡಚಿ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಗಸ್ಟ 17 ರಂದು ಬೆಳಿಗ್ಗೆ 11 ಗಂಟೆಯಿಂದ ಚಿಕ್ಕೋಡಿ ಪಟ್ಟಣ ಪಂಚಾಯತಿ ಕಚೇರಿ, ಮಧ್ಯಾಹ್ನ 3 ಗಂಟೆಯಿಂದ ಸಂಕೇಶ್ವರ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಅಧಿಕಾರಿಗಳು ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಗಸ್ಟ 18 ರಂದು ಬೆಳಿಗ್ಗೆ 12 ಗಂಟೆಯಿಂದ ಅಥಣಿ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಅಧಿಕಾರಿಗಳು ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಗಸ್ಟ 20 ರಂದು ಬೆಳಿಗ್ಗೆ 11 ಗಂಟೆಯಿಂದ ಬೈಲಹೊಂಗಲ ಹಾಗೂ ಕಿತ್ತೂರು ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಗಸ್ಟ 21 ರಂದು ಬೆಳಿಗ್ಗೆ 11 ಗಂಟೆಯಿಂದ ರಾಮದುರ್ಗ ಪ್ರವಾಸಿ ಮಂದಿರದಲ್ಲಿ, ಮಧ್ಯಾಹ್ನ 3 ಗಂಟೆಯಿಂದ ಸವದತ್ತಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಗಸ್ಟ 23 ರಂದು ಬೆಳಿಗ್ಗೆ 11 ಗಂಟೆಯಿಂದ ಖಾನಾಪೂರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳು ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳ ಬಗ್ಗೆ ಅರ್ಜಿಗಳನ್ನು ಸ್ಥಳದಲ್ಲಿಯೇ ನೀಡಿ ಸದುಪಯೋಗ ಪಡೆಯಬೇಕು.
ಹೆಚ್ಚಿನ ಮಾಹಿತಿಗೆ ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ಬೆಳಗಾವಿ ಈ ವಿಳಾಸಕ್ಕೆ ಅಥವಾ ದೂ: 0831-2422999, 9480806235 ಗೆ ಸಂಪರ್ಕಿಸಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವ: ವಿಶೇಷ ಪೂಜೆ ಸಲ್ಲಿಸಲು ಸೂಚನೆ
ಬೆಳಗಾವಿ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ಯ ಆಗಸ್ಟ್ 15 ರಂದು ಬೆಳಿಗ್ಗೆ 6 ಗಂಟೆಯಿಂದ 7 ಗಂಟೆಯವರೆಗೆ ಜಿಲ್ಲೆಯ ಎಲ್ಲ ಸಾರ್ವಜನಿಕ ದೇವಾಲಯ, ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಬೌದ್ಧ ಮಂದಿರ

ಹಾಗೂ ಜೈನ್ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಸಾರ್ವಜನಿಕ ಸಂಸ್ಥೆಗಳ ಪದಾಧಿಕಾರಿಗಳಿಗೆ ಬೆಳಗಾವಿ ಮುಜರಾಯಿ ಸಹಾಯಕ ಆಯುಕ್ತರು ಸೂಚನೆ ನೀಡಿ, ಪ್ರಕಟಣೆ ಹೊರಡಿಸಿದ್ದಾರೆ.

ಬಿ.ಇಡಿ ಕೋರ್ಸ್: ಆನಲೈನ್ ಅರ್ಜಿ ಆಹ್ವಾನ
ಬೆಳಗಾವಿ:  2018-19ನೇ ಸಾಲಿನಲ್ಲಿ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಅನ್‍ಲೈನ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೆಬ್‍ಸೈಟ್: www.schooleducation.kar.nic.in  ನಲ್ಲಿ ಆಗಸ್ಟ್ 16 ರಿಂದ ಆಗಸ್ಟ್ 23 ರವರಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0831-2460197 ಗೆ ಸಂಪರ್ಕಿಸಲು ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋಕಾಕ: ಸ್ಥಿರಾಸ್ತಿ ಬೆಲೆ ಕರಡು ಪ್ರತಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಸೂಚನೆ
ಬೆಳಗಾವಿ:  ಗೋಕಾಕ ಹಿರಿಯ ಉಪನೋಂದಣಿ ಕಚೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮೌಲ್ಯಗಳನ್ನು ಸನ್ 2018-19ನೇ ಸಾಲಿಗೆ ಜಾರಿಗೆ ಬರುವಂತೆ ಅಧ್ಯಕ್ಷರು ಕೇಂದ್ರ ಮೌಲ್ಯ ಮಾಪನ ಸಮಿತಿ ಮತ್ತು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಇವರ ಆದೇಶದನ್ವಯ ಗೋಕಾಕ ತಾಲೂಕಿನ ಎಲ್ಲ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳನ್ನು ಈಗ ಚಾಲ್ತಿಯಲ್ಲಿರುವ ಬೆಲೆಗಳಿಗಿಂತ ಶೇ. 15 ರಿಂದ 20 ರಷ್ಟು ಕೃಷಿ ಜಮೀನುಗಳಿಗೆ ಮತ್ತು ನಿವೇಶನಗಳಿಗೆ ಪ್ರತಿಶತ 20 ರಿಂದ 25 ರವರೆಗೆ ಹೆಚ್ಚಿಗೆ ಮಾಡಿ ಈ ಕಚೇರಿಯ ಸೂಚನಾ ಫಲಕಕ್ಕೆ ಅಳವಡಿಸಲಾಗಿದೆ.
ಸದರಿ ಮಾರ್ಗಸೂಚಿ ಬೆಲೆಗಳ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಈ ಪ್ರಕಟಣೆ ಹೊರಡಿಸಿದ 15 (ಹದಿನೈದು) ದಿನಗಳ ಒಳಗಾಗಿ ಉಪನೋಂದಣಿ ಅಧಿಕಾರಿಗಳಿಗೆ ಲಿಖತವಾಗಿ ಸಲ್ಲಿಸಬೇಕೆಂದು ಗೋಕಾಕ ಹಿರಿಯ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಳಗಾವಿ: 2018ನೇ ಸಾಲಿನಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿ, ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರಪ್ರಶಸ್ತಿ ನೀಡುವ ಬಗ್ಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಪ್ರಸ್ತಾವನೆಗಳನ್ನು ಆನ್‍ಲೈನ್‍ನಲ್ಲಿ ಸಲ್ಲಿಸಲು ಸೂಚಿಸಲಾಗಿರುತ್ತದೆ.
ಭಾರತ ಸರ್ಕಾರದ ಅಧಿಕೃತ ವೆಬ್‍ಸೈಟ್: www.nca-wcd.nic.in ನಲ್ಲಿ ಅರ್ಜಿದಾರರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.