ಉತ್ತಮ ಸಮಾಜಕ್ಕಾಗಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ : ಹಾಗೂ : ರಾಯಭಾಗ: ಮಂಟೂರ ಗ್ರಾಮ ಪುನರ್ ವಿಂಗಡಣೆ ತಿದ್ದುಪಡಿ ಅಧಿಸೂಚನೆ

Application for Matriculation Student Reserves: &: Riot: Mantur Gram Reorganization Amendment Notification

0

ರಾಯಭಾಗ: ಮಂಟೂರ ಗ್ರಾಮ ಪುನರ್ ವಿಂಗಡಣೆ ತಿದ್ದುಪಡಿ ಅಧಿಸೂಚನೆ
ಬೆಳಗಾವಿ:(news belgaum) ನೂತನವಾಗಿ ರಚಿತವಾಗಿರುವ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ 42-ಮಂಟೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಚುನಾವಣಾ ಕ್ಷೇತ್ರಗಳನ್ನಾಗಿ ಹಾಗೂ ಸದರಿ ಕ್ಷೇತ್ರಗಳ ಮೀಸಲಾತಿಯನ್ನು ಮರುನಿಗದಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಸ್.ಜಿಯಾವುಲ್ಲಾ ಅವರು ಆದೇಶ ಹೊರಡಿಸಿದ್ದಾರೆ.
1993ರ ಪಂಚಾಯತ ರಾಜ್ ಅಧಿನಿಯಮದ (ಕರ್ನಾಟಕ ಅಧಿನಿಯಮ 14) 5ನೇ ಪ್ರಕಟಣ ಉಪ ಪ್ರಕರಣ (5)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಬೆಳಗಾವಿ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಚುನಾವಣಾ ಕ್ಷೇತ್ರಗಳನ್ನಾಗಿ ವಿಭಜಿಸಿ ಕಚೇರಿ ಸಮಸಂಖ್ಯೆ ಅಧಿಸೂಚನೆ 2015ರ ಮೇ 4ರ ಪ್ರಕಾರ ಅಧಿಸೂಚನೆ ಹೊರಡಿಸಿದ್ದರು. ಸದರಿ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ 42- ಮಂಟೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಧೀನಕ್ಕೆ ಒಳಪಡುವ ಪ್ರದೇಶಗಳನ್ನು ಚುನಾವಣಾ ಕ್ಷೇತ್ರಗಳಾಗಿ ವಿಭಜಿಸಲಾಗಿದ್ದು, 42- ಮಂಟೂರ ಗ್ರಾಮ ಪಂಚಾಯತಿಗೆ ಒಟ್ಟು 10 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ.
42- ಮಂಟೂರ ಗ್ರಾಮ ಪಂಚಾಯತಿ 10 ಸ್ಥಾನಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಹಿಂದುಳಿದ ವರ್ಗಗಳ ಅ ಮತ್ತು ಬ ವರ್ಗಗಳಿಗೆ ಮೀಸಲಿರಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಎಸ್. ಜಿಯಾವುಲ್ಲಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
ಬೆಳಗಾವಿ:(news belgaum) 2018-19ನೇ ಸಾಲಿಗಾಗಿ ಸವದತ್ತಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ 5 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸವದತ್ತಿ ತಾಲೂಕಿನ ಬಾಲಕರ ವಿದ್ಯಾರ್ಥಿನಿಲಯಗಳು ಉಪಾಸಗೇರಿ ಓಣಿ, ರಾಮಾಪೂರ ಸೈಟ್, ಮುನವಳ್ಳಿ ಗಾಂಧಿನಗರ, ಬೆನಕಟ್ಟಿ, ಹಿರೇಬುದನೂರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಉಪಾಸಗೇರಿ ಓಣಿ ಈ ನಿಲಯಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತವುಳ್ಳ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ www.sw.kar.nic.in  ನಲ್ಲಿ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಭರ್ತಿ ಮಾಡಿ ಪ್ರಿಂಟ್ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಜೂನ್ 30 ರೊಳಗಾಗಿ ಸವದತ್ತಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08330-222208 ನ್ನು ಸಂಪರ್ಕಿಸಬಹುದೆಂದು ಸವದತ್ತಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Application for Matriculation Student Reserves: &: Riot: Mantur Gram Reorganization Amendment Notification

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.