ಉತ್ತಮ ಸಮಾಜಕ್ಕಾಗಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Application invitation for Rural Rehabilitation Workers

0

ಬೆಳಗಾವಿ:(news belgaum) ಹುಕ್ಕೇರಿ ತಾಲೂಕಿನ ಐದು ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ.) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ಮೂರು ಸಾವಿರ ರೂ.ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಡಕುಂದ್ರಿ, ಬೆಣವಾಡ, ಮದೆಹಳ್ಳಿ, ಸುಲ್ತಾನಪುರ, ಕುರಣಿ ಸೇರಿದಂತೆ ಒಟ್ಟು 5 ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 5 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ವಿಕಲಚೇತನರಿದ್ದು ಕನಿಷ್ಟ ಶೇಕಡ 40 ರಷ್ಟು ವಿಕಲತೆ ಪ್ರಮಾಣ ಹೊಂದಿರಬೇಕು, ಅರ್ಜಿದಾರರು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು, ಅರ್ಜಿದಾರರು ಕನಿಷ್ಠ ಎಸ್.ಎಸ್.ಎಲ್.ಸಿ. ತೇರ್ಗಡೆಯಾಗಿರಬೇಕು ಮತ್ತು ಕಂಪ್ಯೂಟರ ಜ್ಞಾನ ಹೊಂದಿರಬೇಕು, ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2018 ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು, ವಿಕಲಚೇತನ ಮಹಿಳಾ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜೂನ್ 30 ರೊಳಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ, ಹುಕ್ಕೇರಿ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Application invitation for Rural Rehabilitation Workers  

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.