ಉತ್ತಮ ಸಮಾಜಕ್ಕಾಗಿ

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Application invitation for subsidy

0

ಬೆಳಗಾವಿ: (news belagavi)  2018-19ನೇ ಸಾಲಿನಲ್ಲಿ ಮುಂಬರುವ ವರ್ಷಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯ
ಸಾಧನೆ ದಾಖಲಿಸುವ ಸಾಧ್ಯತೆ ಇರುವ ಕ್ರೀಡಾಪಟುಗಳಿಂದ ಕರ್ನಾಟಕ ಸ್ಪೋಟ್ರ್ಸ್ ಅಕಾಡೆಮಿ ಫಾರೆಕ್ಸ್‍ಲೆನ್ಸ್ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಕ್ರೀಡಾಪಟುಗಳ ವಯೋಮಿತಿ ಗರಿಷ್ಠ 25 ವರ್ಷದೊಳಗಿರಬೇಕು. ಕ್ರೀಡಾಪಟುಗಳ ಆಯ್ಕೆಯಲ್ಲಿ ಓಲಂಪಿಕ್ ಕ್ರೀಡೆಗಳಿಗೆ ಕನಿಷ್ಠ ಶೇ.75 ಏಪ್ಯನ್/ಕಾಮನ್‍ವೆಲ್ಸ್ ಕ್ರೀಡೆಗಳಿಗೆ ಗರಿಷ್ಠ ಶೇ.20 ಹಾಗೂ ಇತರೆ ರಾಷ್ಟ್ರೀಯ/ಅಂತರ ರಾಷ್ಟ್ರೀಯ ಮಟ್ಟದ ಕ್ರೀಡೆಗಳಿಗೆ ಗರಿಷ್ಠ ಶೇ.5 ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ. ಕ್ರೀಡಾಪಟುಗಳ ಆಯ್ಕೆಯಲ್ಲಿ ವಿವಿಧ ಕ್ರೀಡಾ ವಿಭಾಗಗಳಲ್ಲಿ ವೈಯಕ್ತಿಕ ಕ್ರೀಡೆಗಳ ಕ್ರೀಡಾಪಟುಗಳಿಗೆ ಕನಿಷ್ಠ ಶೇ.65 ರಷ್ಟು ಹಾಗೂ ಗುಂಪು ಕ್ರೀಡೆಗಳ ಕ್ರೀಡಾಪಟುಗಳಿಗೆ ಗರಿಷ್ಠ 35% ರಂತೆ ಮೀಸಲಾತಿ ಕಲ್ಪಿಸಲಾಗಿದೆ.
ಮೇಲ್ಕಂಡಂತೆ ಅರ್ಹತೆ ಇರುವ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ
ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಬೆಳಗಾವಿ ಕಚೇರಿಯಿಂದ ಜು.26 ರಿಂದ ಪಡೆದು, ಆಗಸ್ಟ್ 20 ರೊಳಗಾಗಿ ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಯುವ ಸಬಲೀಕರಣ ಮತ್ತು
ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.