ಉತ್ತಮ ಸಮಾಜಕ್ಕಾಗಿ

ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Application invitation for various schemes by D. Devarajar Development Corporation

0

ಬೆಳಗಾವಿ: (news belagavi) ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2018-19ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಹೊಂದಿರಬೇಕಾದ ಸಾಮಾನ್ಯ ಅರ್ಹತೆಗಳು. ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.(ವಿಶ್ವಕರ್ಮ ಅದರ ಉಪ ಸಮುದಾಯಗಳು, ಉಪ್ಪಾರ ಅದರ ಉಪ ಸಮುದಾಯಗಳು, ಅಂಬಿಗ ಅದರ ಉಪ ಸಮುದಾಯಗಳು ಮತ್ತು ಮತಿಯ ಅಲ್ಪಸಂಖ್ಯಾತರನ್ನು ಹೊರತುಪಡಿಸಿ), ರಾಜ್ಯ ಸರ್ಕಾರದ ಯೋಜನೆಗಳಿಗೆ ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000/-ಗಳು ಪಟ್ಟಣ ಪ್ರದೇಶದವರಿಗೆ ರೂ.55,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಅರ್ಜಿದಾರರು ಕೆ.ವೈ.ಸಿ. ಬಗ್ಗೆ ಆಧಾರ್ ಕಾರ್ಡ್, ಚುನವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. (ಅರ್ಜಿದಾರರು ಐ.ಎಫ್.ಎಸ್.ಸಿ. ಕೋಡ್ ಹೊಂದಿರುವ ರಾಷ್ಟ್ರೀಕೃತ, ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾತೆ ಹೊಂದಿರಬೇಕು.
ರಾಜ್ಯ ಸರ್ಕಾರದ ಯೋಜನೆಗಳು:
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ  ಸಾಲ ಯೋಜನೆ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ,
ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಮತ್ತು ಸಹಾಯಧನ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ
ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ, ಗಂಗಾ-ಕಲ್ಯಾಣ ಯೋಜನೆಯಡಿಯಲ್ಲಿ (ಅ) ವೈಯಕ್ತಿಕ ಕೊಳವೆಬಾವಿ ಯೋಜನೆ, (ಆ) ಸಾಮೂಹಿಕ ನೀರಾವರಿ ಯೋಜನೆ ಈ ಎಲ್ಲ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಪಡೆಯಲು ನಿಗದಿಪಡಿಸಿದ ಕೊನೆಯ ಜುಲೈ 16 ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 31 ಕೊನೆಯ ದಿನವಾಗಿದೆ.
ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ
ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು
ತಿರಸ್ಕರಿಸಲಾಗುವುದು.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು, ಜಿಲ್ಲೆಯ ಡಿ.ದೇವರಾಜ
ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ
ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಛೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು. ಅಲ್ಲದೆ ನಿಗಮದ
ವೆಬ್ ಸೈಟ್ www.karnataka.gov.in/dbcdc ಇಲ್ಲಿ ಪಡೆಯಬಹುದಾಗಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ 31 ರೊಳಗೆ ಸಲ್ಲಿಸುವುದು. ನಂತರ ಬರುವ
ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ
ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: