ಉತ್ತಮ ಸಮಾಜಕ್ಕಾಗಿ

ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Applications are invited.

0

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಬೆಳಗಾವಿ: (news belgaum) ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತು ಪಡಿಸಿ) 2018-19 ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಶಿಷ್ಯವೇತನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಾಜಿ ಸೈನಿಕರ ಮಕ್ಕಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೋಮಾವರೆಗೆ ವ್ಯಾಸಾಂಗ ಮಾಡುತ್ತಿರಬೇಕು.
ಶಿಷ್ಯವೇತನಕ್ಕೆ ಭರ್ತಿ ಮಾಡಿದ ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಳಗಾವಿ ಇವರ ಕಛೇರಿಗೆ ಸೆಪ್ಟೆಂಬರ್ 30 ಹಾಗೂ ಫ್ರೋಫೇಶÀನಲ್ ಡಿಗ್ರಿ ಕೋರ್ಸುಗಳಲ್ಲಿ ಓದುತ್ತಿರುವ ವಿದ್ಯಾರ್ತಿಗಳಿಗೆ ನವೆಂಬರ್ 30 ರೊಳಗೆ ಅರ್ಜಿ ಸಲ್ಲಸಲು ಕೊರಲಾಗಿದೆ.
ಶಿಷ್ಯವೇತನದ ಅರ್ಜಿಗಳನ್ನು ಕಛೇರಿ ಸಮಯದಲ್ಲಿ ಕಛೇರಿಯಿಂದ ಪಡೆದುಕೊಳ್ಳಬಹುದಾಗಿದೆ ಅಥವಾ ಇಲಾಖೆಯ ಅಂತರ್ಜಾಲದ ವಿಳಾಸ www.karnatakasainikwelfare.comದಿಂದ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಸಮಯದಲ್ಲಿ ವೈಯಕ್ತಿಕವಾಗಿ ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸೈನಿಕರ ಗಮನಕ್ಕೆ
ಬೆಳಗಾವಿ:  ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಎಂದು ದೇಶ ಮತ್ತು ವಿದೇಶಗಳಲ್ಲಿ ಆಚರಿಸುತ್ತಿರುವರು ಹಿನ್ನೆಲೆಯಲ್ಲಿ ಸದರಿ ದಿನದಂದು ಜಿಲ್ಲಾಡಳಿತ ಪರವಾಗಿ ಹಾಗೂ ಇತರೆ ಸಂಘ ಸಂಸ್ಥೆಗಳಿಂದ ಆಯೋಜಿಸಲಾಗಿರುವ ಯೋಗಾಭ್ಯಾಸದಲ್ಲಿ ಎಲ್ಲ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯದ ಹಿತ ದೃಷ್ಠಿಯಿಂದ ಸದುಪಯೋಗ ಪಡಿಸಿಕೊಳ್ಳುವÀಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ
ಬೆಳಗಾವಿ: 2018-19ನೇ ಸಾಲಿನ ಗ್ರಾಮೀಣ ನಿರುದ್ಯೋಗ ಯುವಕ-ಯುವತಿಯರಿಗೆ ಮುಖ್ಯ ಮಂತ್ರಿಗಳ ಸ್ವಯಂ ಉದ್ಯೋಗ ಸೃಜನ (ಅಒಇಉP) ಯೋಜನೆಯಡಿ ಗ್ರಾಮೀಣ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿವುಳ್ಳ ಫಲಾನುಭವಿಗಳು ಆಧಾರ ಕಾರ್ಡ ಸಂಖ್ಯೆಯೊಂದಿಗೆ ಆನ್‍ಲೈನ್ ಮೂಲಕ http://cmegp.kar.nic.in sponsoring agency KVIB, Belagavi ಅವಶ್ಯಕ ಮಾಹಿತಿ ಭರ್ತಿ ಮಾಡಿ ಅರ್ಜಿಗಳನ್ನು ಜೂನ್ 30 ಕೊನೆಯ ದಿನಾಂಕವಾಗಿರುತ್ತದೆ. ಸಾಮಾನ್ಯ ವರ್ಗದವರು 18 ರಿಂದ 35 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ರಿಂದ 45 ವರ್ಷ, ಕನಿಷ್ಠ ವಿದ್ಯಾರ್ಹತೆ 8ನೇ ತರಗತಿ ಉತೀರ್ಣವಾಗಿರಬೇಕು, ಯೋಜನಾ ವೆಚ್ಚ ಗರಿಷ್ಠ 10.00 ಲಕ್ಷದೊಳಗೆ ಇರತಕ್ಕದ್ದು. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು, ಬೆಳಗಾವಿ ಇವರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, 5ನೇ ಅಡ್ಡ ರಸ್ತೆ, ಕುಶಲಕರ್ಮಿ ತರಬೇತಿ ಕೇಂದ್ರ ಆವರಣ, ಉದ್ಯಮಬಾಗ, ಬೆಳಗಾವಿ. ದೂರವಾಣಿ ಸಂಖ್ಯೆ 0831-2455067 ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 7 ರಂದು ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ
ಬೆಳಗಾವಿ:  ಬೆಳಗಾವಿ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಯನ್ನು ಗುರುವಾರ ಜೂನ್ 7 ರಂದು ಮುಂಜಾನೆ 11 ಗಂಟೆಗೆ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.5 ರಂದು ತಾರಸಿ ತೋಟ-ಮಳೆ ನೀರು ಕೊಯ್ಲು ಯೋಜನೆ ಉದ್ಘಾಟನೆ
ಬೆಳಗಾವಿ:  ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಬದ್ಧತೆಯನ್ನೂ ಸಮರ್ಥವಾಗಿ ತೋರುತ್ತಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು ಈ ವರ್ಷದ ಪರಿಸರ ದಿನಾಚರಣೆಯಲ್ಲಿ ತನ್ನನ್ನು ಅತ್ಯಂತ ವಿಶಿಷ್ಟವಾಗಿ ತೊಡಗಿಸಿಕೊಂಡಿದೆ.
ಈ ವರ್ಷ ತಾರಸಿ ತೋಟ ಮತ್ತು ಮಳೆ ನೀರು ಕೊಯ್ಲಿಗೆ ಸಾಲ ಯೋಜನೆಯನ್ನು ರೂಪಿಸಿ ಪರಿಸರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಲು ಬ್ಯಾಂಕ್ ಮುಂದಾಗಿದೆ. ಬ್ಯಾಂಕಿನ ಈ ಯೋಜನೆ ಅತ್ಯಂತ ಜನಪ್ರಿಯವಾಗುತ್ತಿದ್ದು, ಬೆಳಗಾವಿಯಲ್ಲಿ ಸಾಕಷ್ಟು ಜನ ತಾರಸಿ ತೋಟ ಮತ್ತು ಮಳೆ ನೀರು ಕೊಯ್ಲಿಗೆ ಮುಂದಾಗಿದ್ದಾರೆ.
ಈ ಯೋಜನೆಯಡಿ ಸಾಲ ಪಡೆದು ಮಳೆ ನೀರು ಕೊಯ್ಲು ಮತ್ತು ತಾರಸಿ ತೋಟ ಕೈಗೊಂಡ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರರಾದ ಎಸ್.ವಿ. ಪಾಟೀಲ ಅವರ ಮನೆಯಲ್ಲಿ ಯೋಜನೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಎಸ್. ರವೀಂದ್ರನ್ ಅವರು ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Applications are invited.

Leave A Reply

 Click this button or press Ctrl+G to toggle between Kannada and English

Your email address will not be published.