ಉತ್ತಮ ಸಮಾಜಕ್ಕಾಗಿ

ಬಕ್ರೀದ್ ಆಚರಣೆ: ಜಿಲ್ಲಾಧಿಕಾರಿ ಸ್ಪಷ್ಟನೆ

news belagavi

0

ಬಕ್ರೀದ್ ಆಚರಣೆ: ಜಿಲ್ಲಾಧಿಕಾರಿ ಸ್ಪಷ್ಟನೆ
ಬೆಳಗಾವಿ: (news belgaum)ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೋಮವಾರ(ಆ.20) ನಡೆದ ಶಾಂತಿಪಾಲನಾ ಸಭೆಯಲ್ಲಿ “ಬಕ್ರೀದ್ ಆಚರಣೆ ವೇಳೆ ಪ್ರಾಣಿ ಬಲಿ ಕೊಡಬಾರದು, ಪ್ರಾಣಿ ಬಲಿಕೊಟ್ಟರೆ ದೇವರು ಮೆಚ್ಚುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ. ಆದರೆ ತಾವು ಈ ರೀತಿಯಾಗಿ ಹೇಳಿಲ್ಲ” ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, “ಬಕ್ರೀದ್, ಪ್ರಾಣಿಬಲಿ ಇವುಗಳು ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಿಷಯಗಳಾಗಿವೆ. ಯಾವುದೇ ಧರ್ಮದ ಹಬ್ಬವಿರಲಿ ನೆರೆಹೊರೆಯವರಿಗೆ ತೊಂದರೆಯಾಗದಂತೆ ಕಾನೂನು ಚೌಕಟ್ಟಿನಲ್ಲಿ ಆಚರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿರುತ್ತೇನೆ ವಿನಃ ಪ್ರಾಣಿಬಲಿ ಕೊಡಬಾರದು; ಪ್ರಾಣಿಬಲಿ ಕೊಟ್ಟರೆ ದೇವರು ಮೆಚ್ಚುವುದಿಲ್ಲ ಎಂದು ತಾವು ಹೇಳಿರುವುದಿಲ್ಲ.’
“ಪ್ರತಿಯೊಂದು ಧರ್ಮದವರು ತಮ್ಮ ಧಾರ್ಮಿಕ ಹಬ್ಬಗಳ ಆಚರಣೆ ವೇಳೆ ಇತರರಿಗೆ ತೊಂದರೆಯಾಗದಂತೆ ಶಾಂತಿ-ಸೌಹಾರ್ದತೆಯಿಂದ ನಡೆದುಕೊಳ್ಳಬೇಕು. ಸ್ವಚ್ಛತೆ ಕಾಪಾಡಬೇಕು ಅಂದಾಗ ಮಾತ್ರ ದೇವರು ಮೆಚ್ಚುತ್ತಾನೆ” ಎಂದು ಸಭೆಯಲ್ಲಿ ತಾವು ತಿಳಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಸ್ಪಷ್ಟಪಡಿಸಿದ್ದಾರೆ.Bakrid celebration: Deputy Commissioner clarifies

ಮಹರ್ಷಿ ವಾಲ್ಮೀಕಿ ಪ್ರಶಸ್ತಿ: ಅರ್ಜಿ ಆಹ್ವಾನ
ಬೆಳಗಾವಿ:  ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದಲ್ಲಿ ಪ್ರತಿ ವರ್ಷ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್, ಡಾ|| ಬಾಬು ಜಗಜೀವನರಾಂ ಹಾಗೂ ಡಿ. ದೇವರಾಜ ಅರಸು ಅವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೂ ಸಹ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿರುತ್ತದೆ.
ಪ್ರಸಕ್ತ ಸಾಲಿನ ಅಕ್ಟೋಬರ್ 24 ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿರುತ್ತದೆ. ಆಸಕ್ತರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ, ಬೆಳಗಾವಿ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೈಲಹೊಂಗಲ: ಸ್ಥಿರಾಸ್ತಿ ಬೆಲೆ ಕರಡು ಪ್ರತಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಸೂಚನೆ
ಬೆಳಗಾವಿ: ಬೈಲಹೊಂಗಲ ಹಿರಿಯ ಉಪನೋಂದಣಿ ಕಚೇರಿಯ ವ್ಯಾಪ್ತಿಗೆ ಬರುವ ಸ್ಥಿರಾಸ್ತಿಗಳ ಮೌಲ್ಯಗಳನ್ನು ಸನ್ 2018-19ನೇ ಸಾಲಿಗೆ ಜಾರಿಗೆ ಬರುವಂತೆ ಅಧ್ಯಕ್ಷರು ಕೇಂದ್ರ ಮೌಲ್ಯ ಮಾಪನ ಸಮಿತಿ ಮತ್ತು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು, ಬೆಂಗಳೂರು ಇವರ ಆದೇಶದನ್ವಯ ಬೈಲಹೊಂಗಲ ತಾಲೂಕಿನ ಎಲ್ಲ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳನ್ನು ಈಗ ಚಾಲ್ತಿಯಲ್ಲಿರುವ ಬೆಲೆಗಳಿಗಿಂತ ಶೇ. 15 ರಿಂದ 20 ರಷ್ಟು ಕೃಷಿ ಜಮೀನುಗಳಿಗೆ ಮತ್ತು ನಿವೇಶನಗಳಿಗೆ ಪ್ರತಿಶತ 20 ರಿಂದ 25 ರವರೆಗೆ ಹೆಚ್ಚಿಗೆ ಮಾಡಿ ಈ ಕಚೇರಿಯ ಸೂಚನಾ ಫಲಕಕ್ಕೆ ಅಳವಡಿಸಲಾಗಿದೆ.

ಸದರಿ ಮಾರ್ಗಸೂಚಿ ಬೆಲೆಗಳ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಈ ಪ್ರಕಟಣೆ ಹೊರಡಿಸಿದ 15 (ಹದಿನೈದು) ದಿನಗಳ ಒಳಗಾಗಿ ಉಪನೋಂದಣಿ ಅಧಿಕಾರಿಗಳಿಗೆ ಲಿಖತವಾಗಿ ಸಲ್ಲಿಸಬೇಕೆಂದು ಬೈಲಹೊಂಗಲ ಹಿರಿಯ ಉಪನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.25 ರಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆ
ಬೆಳಗಾವಿ:  ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಗಸ್ಟ್ 25 ರಂದು ಸಂಜೆ 4 ಗಂಟೆಗೆ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ 2018-19ನೇ ಸಾಲಿನ 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುದಾನರಹಿತ ವ್ರದ್ಧಾಶ್ರಮಗಳ ನೋಂದಣಿಗೆ ಸೂಚನೆ
ಬೆಳಗಾವಿ:  ಬೆಳಗಾವಿ ನಗರ ಮತ್ತು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಯೋವೃದ್ಧರಿಗಾಗಿ ವೃದ್ಧಾಶ್ರಮಗಳನ್ನು ನಡೆಸುತ್ತಿರುವ ಇಲಾಖೆಯ ಅನುದಾನ ರಹಿತ ಸ್ವಯಂ-ಸೇವಾ ಸಂಸ್ಥೆಗಳವರು 2018-19 ನೇ ಸಾಲಿನಿಂದ ಅನ್ವಯವಾಗುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ತಮ್ಮ ಸಂಸ್ಥೆಯ ಹೆಸರು ನೊಂದಾಯಿಸಿಕೊಂಡು, ಇಲಾಖೆಯ ಮಾರ್ಗಸೂಚಿಯನ್ವಯ ವೃದ್ಧಾಶ್ರಮಗಳನ್ನು ನಡೆಸಲು ಕ್ರಮ ವಹಿಸಬೇಕೆಂದು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ: 0831-2276096/7 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಕ್ರೀದ್ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
ಬೆಳಗಾವಿ: ಅಗಸ್ಟ 22 ರಂದು ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬದ ನಿಮಿತ್ಯ ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆಯಾದ್ಯಂತ ಅಗಸ್ಟ 22ರ ಬೆಳಿಗ್ಗೆ 6 ಗಂಟೆಯಿಂದ ಅಗಸ್ಟ 23ರ ಬೆಳಿಗ್ಗೆ 10 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಮದ್ಯ/ಬಾರ್ ಅಂಗಡಿಗಳನ್ನು ಬಂದ್ ಇಡುವಂತೆ ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಎಸ್.ಜಿಯಾವುಲ್ಲಾ ಅವರು ಆದೇಶ ಹೊರಡಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಕರ್ನಾಟಕ ಅಬಕಾರಿ ಕಾಯಗದೆ 1965ರ ಕಲಂ 32 ರನ್ವಯ ಶಿಕ್ಷೆಗೆ ಒಳಪಡುವರು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ಪೊಲೀಸ್ ಆಯುಕ್ತರ ಆದೇಶ:
News Belgaum-ಬಕ್ರೀದ್ ಆಚರಣೆ: ಜಿಲ್ಲಾಧಿಕಾರಿ ಸ್ಪಷ್ಟನೆಬೆಳಗಾವಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಪ್ರಕಾರ ಪ್ರದತ್ತವಾದ ಅಧಿಕಾರದನ್ವಯ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ: ಡಿ.ಸಿ ರಾಜಪ್ಪ ಅವರು ಬೆಳಗಾವಿ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಗಸ್ಟ 21 ರಂದು ಸಂಜೆ 6 ಗಂಟೆಯಿಂದ ಅಗಸ್ಟ 22 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದ ಅಂಗಡಿಗಳಲ್ಲಿ, ವೈನಶಾಪ್, ಬಾರ್‍ಗಳಲ್ಲಿ, ಕ್ಲಬ್‍ಗಳಲ್ಲಿ ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ: ಡಿ.ಸಿ ರಾಜಪ್ಪ ಅವರು ಆದೇಶವನ್ನು ಹೊರಡಿಸಿದ್ದಾರೆ.Ban on liquor sale due to Bakrid festival

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸಲು ಮನವಿ
ಬೆಳಗಾವಿ:ಪ್ರಕೃತಿ ವಿಕೋಪ ಅತಿವೃಷ್ಟಿಯಲ್ಲಿ ನೊಂದ ಸಂತ್ರಸ್ಥರಿಗೆ ಸಹಾಯ ಮಾಡುವ ದಾನಿಗಳು ಈ ಕೆಳಕಂಡ ಮುಖ್ಯಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ-2018 ರ ಖಾತೆಗೆ ದೇಣಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾತೆಯ ಮಾಹಿತಿ:
ಖಾತೆಯ ಹೆಸರು: ಮುಖ್ಯಮಂತ್ರಿಗಳ ಪರಿಹಾರ ನಿಧಿ ಪ್ರಕೃತಿ ವಿಕೋಪ-2018, ಬ್ಯಾಂಕ್: ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ, ಶಾಖೆ: ವಿಧಾನಸೌಧ ಶಾಖೆ, ಖಾತೆ ಸಂಖ್ಯೆ: 37887098605, ಐ.ಎಫ್.ಎಸ್.ಸಿ ಕೋಡ್: SBIN0040277, ಎಂ.ಐ.ಸಿ.ಆರ್ ಸಂಖ್ಯೆ: 560002419 ಇವರ ಹೆಸರಿನಲ್ಲಿ ಚೆಕ್ ಅಥವಾ ಡಿಡಿಯನ್ನು ಮೇಲೆ ವಿವರಿಸಿದ ಸಿಬ್ಬಂದಿಗಳಿಗೆ ನೀಡಬಹುದಾಗಿದೆ ಎಂದು ಸಾರ್ವಜನಿಕರಲ್ಲಿ ಕೋರಲಾಗಿದೆ.Request to submit donations to chief minister’s relief fund

Leave A Reply

 Click this button or press Ctrl+G to toggle between Kannada and English

Your email address will not be published.