ಉತ್ತಮ ಸಮಾಜಕ್ಕಾಗಿ

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಬಸವರಾಜ ಮೇಳೇದ

Basavaraj Mela from JDS withdraws from Congress

0

ಬೆಳಗಾವಿ- (news belagavi)ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಬಸವರಾಜ ಮೇಳೇದ ಅವರು ಇಂದು ತಮ್ಮ ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಆರ್. ಹೆಬ್ಬಾಳಕರ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಗುರುವಾರ ನೂರಾರು ಬೆಂಬಲಿಗರೊಂದಿಗೆ ಲಕ್ಷ್ಮೀ ಆರ್. ಹೆಬ್ಬಾಳಕರ ರವರನ್ನು ಭೇಟಿಯಾದ ಬಸವರಾಜ ಮೇಳೇದ ಮತ್ತು ಅವರ ಬೆಂಬಲಿಗರನ್ನು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ ರವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
News Belgaum-ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಬಸವರಾಜ ಮೇಳೇದ 1ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮಾದ್ಯಮಗಳ ಜೊತೆ ಮಾತನಾಡಿದ ಬಸವರಾಜ ಮೇಳೇದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜೆಡಿಎಸ್ ಪಕ್ಷದ ಆಕಾಂಕ್ಷಿ ಶಿವನಗೌಡ ಪಾಟೀಲರ ಜೊತೆ ಜೆಡಿಎಸ್ ಪಕ್ಷಕ್ಕೆ ಸೇರಿಕೊಂಡಿದ್ದೆ. ಜೆಡಿಎಸ್ ಸೇರಿಕೊಂಡ ಬಳಿಕ ಶಿವನಗೌಡ ಪಾಟೀಲರು ಚುನಾವಣೆ ಗೆಲ್ಲಲು ಜೆಡಿಎಸ್ ಸೇರಿಕೊಂಡಿಲ್ಲ ಲಕ್ಷ್ಮೀ ಆರ್. ಹೆಬ್ಬಾಳಕರ ರವರನ್ನು ಸೋಲಿಸುವ ದುರುದ್ಧೇಶದಿಂದ ಜೆಡಿಎಸ್ ಸೇರಿಕೊಂಡಿರುವ ವಿಷಯ ಗೊತ್ತಾದ ಬಳಿಕ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗುವ ನಿರ್ಧಾರ ತೆಗೆದುಕೊಂಡೆ ಎಂದು ಬಸವರಾಜ ಮೇಳೇದ ಸ್ಪಷ್ಟ ಪಡಿಸಿದರು.
ಜೆಡಿಎಸ್ ಪಕ್ಷದ ಪ್ರಚಾರಕ್ಕಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿಗಳಲ್ಲಿ News Belgaum-ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಬಸವರಾಜ ಮೇಳೇದ 2ಸಂಚರಿಸಿದಾಗ ಗ್ರಾಮದ ಹಿರಿಯರು ಜನಸಾಮಾನ್ಯರು ತಮ್ಮನ್ನು ಭೇಟಿಯಾಗಿ ಲಕ್ಷ್ಮೀ ಆರ್. ಹೆಬ್ಬಾಳಕರ ಕಳೆದ ಎಳು ವರ್ಷದಿಂದ ಬಡವರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ತೊಂದರೆ ಕೊಡಬೇಡಿ. ಕಾಂಗ್ರೆಸ್ ಮತಗಳನ್ನು ವಿಭಜಿಸುವ ಪ್ರಯತ್ನ ಮಾಡಬೇಡಿ ಎಂದು ಎಲ್ಲಿ ಹೋದಲ್ಲೆಲ್ಲ ಜನ ಸಾಮಾನ್ಯರು ತಮಗೆ ಮನವಿ ಮಾಡಿಕೊಂಡ ಪರಿಯನ್ನು ನೋಡಿ ಪ್ರಭಾವಿತನಾದೆ. ಜನಸಾಮಾನ್ಯರ ಆಶಯದಂತೆ ಕಾಂಗ್ರೆಸ್ ಪಕ್ಷ ಸೇರಿಕೊಂಡು ಲಕ್ಷ್ಮೀ ಆರ್. ಹೆಬ್ಬಾಳಕರ ರವರನ್ನು ಗೆಲ್ಲಿಸುವ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆಂದು ಬಸವರಾಜ ಮೇಳೇದ ಹೇಳಿದರು.

News Belgaum-ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಬಸವರಾಜ ಮೇಳೇದಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಆರ್. ಹೆಬ್ಬಾಳಕರ ಮಾತನಾಡಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪರವಾದ ಅಲೆಯಿದೆ. ಕಾಂಗ್ರೆಸ್ ಹೈ-ಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಸೇರಿಕೊಂಡ ನಾಯಕರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ. ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಿರೇಬಾಗೇವಾಡಿಯ ಮುಖಂಡ ನೀಲಕಂಠಗೌಡ ಪಾಟೀಲ ರವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ವಿನಯ ನಾವಲಗಟ್ಟಿ, ತಾ.ಪಂ. ಅಧ್ಯಕ್ಷ ಶಂಕರಗೌಡ ಪಾಟೀಲ, ಸಿ. ಸಿ. ಪಾಟೀಲ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ, ಅಡಿವೇಶ ಇಟಗಿ, ಗಂಗಣ್ಣ ಕೊಲ್ಲುರ, ಚನ್ನರಾಜ ಹಟ್ಟಿಹೋಳಿ, ಪ್ರಕಾಶ ಪಾಟೀಲ, ಅಶೋಕ ತೊರ್ಲಿ, ಬಸವರಾಜ ಮ್ಯಾಗೋಟಿ, ಶ್ರೀಕಾಂತ ಮಧುಬರಮನ್ನವರ, ರವೀಂದ್ರ ಮೇಳೇದ, ಬಾಳಯ್ಯ ಹಿರೇಮಠ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.Basavaraj Mela from JDS withdraws from Congress

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.