ಉತ್ತಮ ಸಮಾಜಕ್ಕಾಗಿ

ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ ಚಾಲನೆ

Be proud to drive the Mallamma festival to Belavadi

0

ಸುವ್ಯವಸ್ಥಿತ ಸೇನೆ ಕಟ್ಟಿದ ಪ್ರಥಮ ಮಹಿಳೆ ಬೆಳವಡಿ ಮಲ್ಲಮ್ಮ -ಸಂಸದ ಸುರೇಶ ಅಂಗಡಿ

ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವಕ್ಕೆ ಅದ್ಧೂರಿ ಚಾಲನೆ ಸುವ್ಯವಸ್ಥಿತ ಸೇನೆ ಕಟ್ಟಿದ ಪ್ರಥಮ ಮಹಿಳೆ ಬೆಳವಡಿ ಮಲ್ಲಮ್ಮ -ಸಂಸದ ಸುರೇಶ ಅಂಗಡಿ- Tarun kranti
ಬೆಳಗಾವಿ:(news belgaum) ಇತಿಹಾಸದಲ್ಲೇ ಮಹಿಳೆಯೊಬ್ಬರು ಪ್ರಪ್ರಥಮವಾಗಿ ಸುವ್ಯವಸ್ಥಿತ ಸೇನೆಯನ್ನು ಕಟ್ಟಿದ ಹೆಗ್ಗಳಿಕೆ ಬೆಳವಡಿ ಮಲ್ಲಮ್ಮಳಿಗೆ ಸಲ್ಲುತ್ತದೆ. ಬೆಳವಡಿ ಮಲ್ಲಮ್ಮಳ ಶೌರ್ಯ, ಸಾಹಸ ಜಗತ್ತಿಗೆ ಮಾದರಿಯಾಗಿದೆ ಎಂದು ಸಂಸದ ಸುರೇಶ ಅಂಗಡಿ ಅವರು ಹೇಳಿದರು.
ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಬುಧವಾರ (ಫೆ.28) ಹಮ್ಮಿಕೊಂಡಿದ್ದ ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೆಳವಡಿ ಮಲ್ಲಮ್ಮ ಕೇವಲ ಶೌರ್ಯದಿಂದಲ್ಲದೇ, ಉತ್ತಮ ಸಂಸ್ಕøತಿ, ಆಚಾರ, ವಿಚಾರಗಳಿಂದಲೂ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದರು.
ಬೈಲಹೊಂಗಲ ವೀರರು ಹಾಗೂ ಶೂರರ ನಾಡಾಗಿದೆ. ಯುವಕರು ಇತಿಹಾಸವನ್ನು ತಿಳಿದುಕೊಳ್ಳಬೇಕು. ಮಹಾನ ಪುರುಷರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳವಡಿ ಮಲ್ಲಮ್ಮ, ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ, ಸೇರಿದಂತೆ ಅನೇಕ ಮಹಾನ ಪುರುಷರು ಬೈಲಹೊಂಗಲ ಭಾಗದವರಾಗಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಹೇಳಿದರು.
ಶಿವಾಜಿ ಮಹಾರಾಜರು ಬೆಳವಡಿ ಮಲ್ಲಮ್ಮನ ಯುದ್ಧ ನಿಪುಣತೆಯನ್ನು ಕಂಡು ಬೆರಗಾಗಿದ್ದರು. ಶಿವಾಜಿ ಮಹಾರಾಜರು ಬೆಳವಡಿ ಮಲ್ಲಮ್ಮನನ್ನು ತನ್ನ ಸಹೋದರಿ ಎಂದು ಕರೆದು ಅದರಂತೆ ನಡೆದುಕೊಂಡರು ಎಂಬುದು ಇತಿಹಾಸದಿಂದ ನಮಗೆ ತಿಳಿದು ಬರುತ್ತದೆ ಎಂದು ತಿಳಿಸಿದರು.
ಪ್ರತಿಯೊಬ್ಬ ನಾಗರಿಕರು ತಮ್ಮ ಜೀವನದಲ್ಲಿ ಸನ್ಮಾರ್ಗವನ್ನು ಅಳವಡಿಸಿಕೊಳ್ಳಬೇಕು. ಮಹಾನ ಪುರುಷರ ಬಗ್ಗೆ ಯುವಜನರಿಗೆ ತಿಳಿಸಿಕೊಡಬೇಕೆಂಬುದು ಸರ್ಕಾರ ಉತ್ಸವಗಳನ್ನು ಹಮ್ಮಿಕೊಳ್ಳುವ ಉದ್ದೇಶವಾಗಿದೆ ಎಂದು ಹೇಳಿದರು.
ಹಿರಿಯ ಸಾಹಿತಿ ಯ.ರು. ಪಾಟೀಲ ಅವರು ಮಾತನಾಡಿ, ಬೆಳವಡಿ ಗ್ರಾಮ ಕನ್ನಡ ಹಾಗೂ ಮರಾಠಿ ಭಾಷೆಯ ಬಾಂಧವ್ಯದ ಸಂಕೇತವಾಗಿದೆ ಎಂದು ಹೇಳಿದರು.
ಬೆಳವಡಿ ಮಲ್ಲಮ್ಮ ಇತಿಹಾಸದ ಪುಟಗಳಲ್ಲಿ ಮರೆಯಾಗಿದ್ದು, ಮಲ್ಲಮ್ಮಳ ಇತಿಹಾಸವನ್ನು ಇನ್ನಷ್ಟು ಬೆಳಕಿಗೆ ತರಲು ಸರ್ಕಾರ ಪ್ರಯತ್ನಿಸಬೇಕು. ಬೆಳವಡಿ ಮಲ್ಲಮ್ಮಳ ಇತಿಹಾಸದ ಕುರಿತು ಹೆಚ್ಚಿನ ಸಂಶೋಧನೆ ನಡೆಯಬೇಕು ಎಂದು ಮನವಿ ಮಾಡಿದರು.
ಬೈಲಹೊಂಗಲ ಶಾಸಕ ವಿಶ್ವನಾಥ ಪಾಟೀಲ ಅವರು ಮಾತನಾಡಿ, ಬೆಳವಡಿ ಮಲ್ಲಮ್ಮ ಎಲ್ಲ ಮಹಿಳೆಯರಿಗೂ ಮಾದರಿಯಾಗಿದ್ದು, ಮಲ್ಲಮ್ಮಳ ಆದರ್ಶವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಎಲ್ಲ ಪಾಲಕರು ಬೆಳವಡಿ ಮಲ್ಲಮ್ಮ ಸೇರಿದಂತೆ ಮಹಾನ ಪುರುಷರ ಇತಿಹಾಸವನ್ನು ತಮ್ಮ ಮಕ್ಕಳಿಗೆ ತಿಳಿಸಿಕೊಟ್ಟು, ಮಕ್ಕಳಲ್ಲಿ ದೇಶಾಭಿಮಾನ, ಆತ್ಮಸ್ಥೈರ್ಯ ತುಂಬಬೇಕು ಎಂದು ಸಲಹೆ ನೀಡಿದರು.
ಉತ್ಸವದಲ್ಲಿ ಗುರುವಾರ ಬೆಳಿಗ್ಗೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಯುವ, ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪರಿಣಿತರೊಂದಿಗೆ ಚರ್ಚಿಸಬೇಕು. ತಮ್ಮ ವಿಚಾರಗಳನ್ನು ವ್ಯಕ್ತಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ರಾಮಚಂದ್ರನ್.ಆರ್, ತಾಲೂಕು ಪಂಚಾಯತ ಅಧ್ಯಕ್ಷರಾದ ಶ್ರೀಮತಿ ಶೈಲಾ ಸಿದ್ರಾಮನಿ, ಜಿಲ್ಲಾ ಪಂಚಾಯತ ಸದಸ್ಯರಾದ ಈರಣ್ಣ ಕರಿಕಟ್ಟಿ, ತಾಲೂಕು ಪಂಚಾಯತ ಸದಸ್ಯರಾದ ಅಮೃತಾ ಕಕ್ಕಯನವರ, ಗ್ರಾಮ ಪಂಚಾಯತ ಅಧ್ಯಕ್ಷರಾದ ಈರವ್ವಾ ತಳವಾರ, ಕಿತ್ತೂರು ತಹಶೀಲ್ದಾರ ಪ್ರವೀಣ ಹುಚ್ಚನ್ನವರ ಸೇರಿದಂತೆ ಅಧಿಕಾರಿಗಳು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಗ್ರಾಮದ ಶಾರದಾ ಸಂಗೀತ ಪಾಠಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಗೂ ರೈತಗೀತೆಯನ್ನು ಪ್ರಸ್ತುತ ಪಡಿಸಿದರು. ಬೈಲಹೊಂಗಲ ಉಪವಿಭಾಗಾಧಿಕಾರಿ ವಿಜಯಕುಮಾರ ಹೊನಕೆರೆ ಅವರು ಸ್ವಾಗತಿಸಿದರು. ಬೈಲಹೊಂಗಲ ತಹಶೀಲ್ದಾರ ಪ್ರಕಾಶ ಗಾಯಕವಾಡ ಅವರು ವಂದಿಸಿದರು.

ವಿವಿಧ ಸಾಂಸ್ಕøತಿಕ ಕಾರ್ಯಕ್ರಮ:
ಉದ್ಘಾಟನಾ ಸಮಾರಂಭದ ನಂತರ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. ಭಜನೆ, ಚೌಡಕಿ ಪದಗಳು, ಶಾಸ್ತ್ರೀಯ ಸಂಗೀತ, ಚಲನಚಿತ್ರ ಗೀತೆಗಳು, ಭರತನಾಟ್ಯ, ಗ್ರೂಫ್ ಡ್ಯಾನ್ಸ್, ತೊಗುಲುಗೊಂಬೆ ಆಟ, ಜಾನಪದ ನೃತ್ಯ, ಹಾಸ್ಯ ಸಂಜೆ, ಜಾದೂ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನರನ್ನು ರಂಜಿಸಿದವು.

ಧ್ವಜಾರೋಹಣ:
ಬೆಳಿಗ್ಗೆ 10 ಗಂಟೆಗೆ ಗ್ರಾಮದ ವೀರರಾಣಿ ಬೆಳವಡಿ ಮಲ್ಲಮ್ಮ ವೃತ್ತದಲ್ಲಿ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಹಾಗೂ ಶಾಸಕ ವಿಶ್ವನಾಥ ಪಾಟೀಲ ಅವರು ವೀರಜ್ಯೋತಿ ಯಾತ್ರೆಯನ್ನು ಬರಮಾಡಿಕೊಂಡು ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.
ಕಲಾತಂಡಗಳ ಮೆರವಣಿಗೆ:
ಧ್ವಜಾರೋಹಣದ ನಂತರ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು. ಕಲಾತಂಡಗಳ ಮೆರವಣಿಗೆಯಲ್ಲಿ ಡೊಳ್ಳು ಮಜಲು, ಗೆಜ್ಜೆ ಕುಣಿತ, ಜಗ್ಗಲಗಿ, ಬ್ಯಾಂಜೋ, ಗೊಂಬೆ ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಆರತಿ ಹಾಗೂ ಕುಂಭ ಹೊತ್ತ ಮಹಿಳೆಯರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ಜನರು ಪಾಲ್ಗೊಂಡಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.