ಉತ್ತಮ ಸಮಾಜಕ್ಕಾಗಿ

ಫೆ.28-ಮಾ.1 ರಂದು ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವ

Belavadi Malamman Festival of Veeravante on Feb.28-Ma 1

0

ಬೆಳಗಾವಿ: (news belgaum)ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಫೆಬ್ರವರಿ 28 ಹಾಗೂ ಮಾರ್ಚ್ 1 ರಂದು ಎರಡು ದಿನಗಳ ಕಾಲ ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವವನ್ನು ಆಯೋಜಿಸಲಾಗಿದೆ.
ಫೆಬ್ರವರಿ 28 ರಂದು ಸಂಜೆ 7 ಗಂಟೆಗೆ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯುವುದು. ಬೆಳವಡಿ ಸಂಸ್ಥಾನದ ರಾಜಗುರುಗಳಾದ ಹೂಲಿಯ ಹಿರೇಮಠದ ಶಿವಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸುವರು. ಸ್ಥಳೀಯ ಶಾಸಕ ವಿಶ್ವನಾಥ ಪಾಟೀಲ ಅವರು ಅಧ್ಯಕ್ಷತೆ ವಹಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ಶ್ರೀಮತಿ ಉಮಾಶ್ರೀ, ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಅವರು ಗೌರವ ಅತಿಥಿಗಳಾಗಿ ಭಾಗವಹಿಸುವರು.
ಸಂಸದರಾದ ಸುರೇಶ ಅಂಗಡಿ, ಪ್ರಕಾಶ ಹುಕ್ಕೇರಿ, ರಾಜ್ಯಸಭಾ ಸದಸ್ಯರಾದ ಡಾ. ಪ್ರಭಾಕರ ಕೋರೆ, ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳುವರು.
ಧ್ವಜಾರೋಹಣ:
ಫೆ.28-ಮಾ.1 ರಂದು ವೀರವನಿತೆ ಬೆಳವಡಿ ಮಲ್ಲಮ್ಮನ ಉತ್ಸವ- Tarun krantiಫೆ.28 ರಂದು ಬೆಳಿಗ್ಗೆ 10 ಗಂಟೆಗೆ ವೀರರಾಣಿ ಬೆಳವಡಿ ಮಲ್ಲಮ್ಮ ವೃತ್ತದಲ್ಲಿ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಗಳಾದ ಗಣೇಶ ಹುಕ್ಕೇರಿ ಅವರು ವೀರಜ್ಯೋತಿ ಯಾತ್ರೆಯನ್ನು ಬರಮಾಡಿಕೊಳ್ಳುವರು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸುವರು.
ಜಾನಪದ ಕಲಾವಾಹಿನಿ-ವಸ್ತು ಪ್ರದರ್ಶನ:
ಬೆಳಿಗ್ಗೆ 10:15 ಗಂಟೆಗೆ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ ಅವರು ಜಾನಪದ ಕಲಾವಾಹಿನಿಗೆ ಚಾಲನೆ ನೀಡುವರು. ಕಿತ್ತೂರು ಶಾಸಕರಾದ ಡಿ.ಬಿ. ಇನಾಮದಾರ ಅವರು ನೇತೃತ್ವ ವಹಿಸುವರು. ಬೆಳಿಗ್ಗೆ 10:30 ಗಂಟೆಗೆ ಸಂಸದ ಸುರೇಶ ಅಂಗಡಿ ಅವರು ವಸ್ತು ಪ್ರದರ್ಶನವನ್ನು ಉದ್ಘಾಟಿಸುವರು.
ಸಾಂಸ್ಕøತಿಕ ಕಾರ್ಯಕ್ರಮ:
ಸಾಯಂಕಾಲ ಉದ್ಘಾಟನಾ ಸಮಾರಂಭದ ನಂತರ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಭಜನೆ, ಚೌಡಕಿ ಪದಗಳು, ಶಾಸ್ತ್ರೀಯ ಸಂಗೀತ, ಚಲನಚಿತ್ರ ಗೀತೆಗಳು, ಭರತನಾಟ್ಯ, ಗ್ರೂಫ್ ಡ್ಯಾನ್ಸ್, ತೊಗುಲುಗೊಂಬೆ ಆಟ, ಜಾನಪದ ನೃತ್ಯ, ಹಾಸ್ಯ ಸಂಜೆ, ಜಾದೂ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.
ಸಮಾರೋಪ ಸಮಾರಂಭ:
ಮಾರ್ಚ್ 1 ರಂದು ಸಂಜೆ 7 ಗಂಟೆಗೆ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ಸಮಾರೋಪ ಸಮಾರಂಭ ಜರುಗುವುದು. ಕೂಲಸಂಗಮದ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಉಪಸ್ಥಿತರಿರುವರು. ಸ್ಥಳೀಯ ಶಾಸಕ ವಿಶ್ವನಾಥ ಪಾಟೀಲ ಅವರು ಅಧ್ಯಕ್ಷತೆ ವಹಿಸುವರು. ಕಿತ್ತೂರು ಶಾಸಕ ಡಿ.ಬಿ. ಇನಾಮದಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ರಾಣಿ ಮಲ್ಲಮ್ಮ ತವರು ಮನೆ ಉತ್ತರ ಕನ್ನಡ ಜಿಲ್ಲೆಯ ಸೊಂದಾದ ಮಧುಲಿಂಗನಾಗೇಶ ರಾಜೇಂದ್ರ ಒಡೆಯರ ಅವರನ್ನು ಸನ್ಮಾನಿಸಲಾಗುವುದು. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ|| ವಸುಂಧರಾ ಭೂಪತಿ ಅವರು ಸಮಾರೋಪ ನುಡಿಗಳನ್ನಾಡುವರು.
ಸಾಂಸ್ಕøತಿಕ ಕಾರ್ಯಕ್ರಮ:
ಸಮಾರೋಪ ಸಮಾರಂಭದ ನಂತರ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಜಾನಪದ ನೃತ್ಯ, ಭಜನೆ, ಮೂಗಿನಿಂದ ಕೊಳಲು ವಾದನ, ಡೊಳ್ಳು ಕುಣಿತ, ಸಮೂಹ ನೃತ್ಯ, ಭರತ ನಾಟ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ವಿಚಾರ ಸಂಕಿರಣ-ಯುವ ಜನೋತ್ಸವ:
ಮಾ.1 ರಂದು ಬೆಳಿಗ್ಗೆ 10 ಗಂಟೆಗೆ ವೀರರಾಣಿ ಬೆಳವಡಿ ಮಲ್ಲಮ್ಮನ ವೇದಿಕೆ ಹತ್ತಿರ ವಿಚಾರ ಸಂಕಿರಣ ಹಾಗೂ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಸ್ಕøತಿಯ ಚಿಂತಕರು ಹಾಗೂ ಹಿರಿಯ ಲೇಖಕಿಯಾದ ಡಾ|| ಬಿ.ಟಿ. ಲಲಿತಾನಾಯಕ ಅವರು ಉದ್ಘಾಟಿಸುವರು. ಪ್ರಾಧ್ಯಾಪಕರು ಹಾಗೂ ಲೇಖಕರಾದ ಡಾ|| ಸರಸ್ವತಿದೇವಿ ಭಗವತಿ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಾಹಿತಿ ಯ.ರು. ಪಾಟೀಲ ಅವರು ಆಶಯ ನುಡಿಗಳನ್ನಾಡುವರು.
ಕ್ರೀಡಾಕೂಟ:
ಮಾ.1 ರಂದು ಗ್ರಾಮದ ಈಶಪ್ರಭು ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ, 11 ಗಂಟೆಗೆ ಪುರುಷರ ಕಬಡ್ಡಿ, ಮಧ್ಯಾಹ್ನ 3 ಗಂಟೆಗೆ ಮಹಿಳಾ ಮತ್ತು ಪುರುಷ ಜಂಗೀ ಕುಸ್ತಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.