ಉತ್ತಮ ಸಮಾಜಕ್ಕಾಗಿ

ಅಭ್ಯಾಸದ ಜೊತೆಗೆ ಸಾಮಾನ್ಯ ಜ್ಞಾನವನ್ನು ಸಹ ನೀಡುವುದು ಅವಶ್ಯಕತೆ ಇದೆ ಎಂದು ಬೆಳಗಾವಿ ಪೋಲಿಸ್ ಆಯುಕ್ತರಾದ ಡಾ.ಡಿ.ಸಿ ರಾಜಪ್ಪಾBelgaum Police Commissioner Dr. D.C. Rajappa

Belgaum Police Commissioner Dr. D.C. Rajappa

0

ಸದೃಡ ಭಾರತ ನಿರ್ಮಾಣಕ್ಕಾಗಿಎಲ್ಲ ಮಕ್ಕಳಿಗೆ ಜಂತು ನಿವಾರಣಾ ಮಾತ್ರೆ ನುಂಗಿಸಿ; ಡಾ. ಡಿ.ಸಿ ರಾಜಪ್ಪ

ಬೆಳಗಾವಿ: (tarun kranti)ಮಕ್ಕಳಿಗೆ ಮನೆಯ ಮೊದಲು ಪಾಠಶಾಲೆಯಾಗಿದ್ದು, ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿ ಮಹತ್ವದ್ದಾಗಿರುತ್ತದೆ. ತದ ನಂತರ ಮಕ್ಕಳು ಶಾಲೆಗೆ ಸೇರಿದ ನಂತರ ಅಲ್ಲಿ ಶಿಕ್ಕಕರ ಜವಾಬ್ದಾರಿ ಹೆಚ್ಚಾಗಿರುತ್ತದೆ. ಮಕ್ಕಳಿಗೆ ಅಭ್ಯಾಸದ ಜೊತೆಗೆ ಸಾಮಾನ್ಯ ಜ್ಞಾನವನ್ನು ಸಹ ನೀಡುವುದು ಅವಶ್ಯಕತೆ ಇದೆ ಎಂದು ಬೆಳಗಾವಿ ಪೋಲಿಸ್ ಆಯುಕ್ತರಾದ ಡಾ.ಡಿ.ಸಿ ರಾಜಪ್ಪಾ ಅವರು ಹೇಳಿದರು.
ಇಂದು ಕಾಕತಿಯ ಸÀರಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ,ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಸ್ವಯಂ ಸೇವಾ ಸಂಸ್ಥೆಗಳು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಹಾಗೂ ಗ್ರಾಮ ಪಂಚಾಯತ ಕಾಕತಿ ಇವರ ಸಹಯೋಗದಲ್ಲಿ ಆಯೋಜಿಸಿರುವ “ರಾಷ್ಟೀಯ ಜಂತು ಹುಳು ನಿವಾರಣಾ ದಿನ” ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
1-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಇಂದು ಜಂತು ನಿವಾರಣಾ ಮಾತ್ರೆಯನ್ನು ನೀಡಲಾಗುತ್ತದೆ. ಎಲ್ಲ ಮಕ್ಕಳು ತಪ್ಪದೆ ಸೇವಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ ಸದಸÀ್ಯ ಸಿದ್ದಗೌಡ ಸುಣಗಾರ ಅವರು ಮಾತನಾಡಿ ಪರಿಸರದಲ್ಲಿ ಜಂತು ಹುಳುಗಳನ್ನು ಕಡಿಮೆ ಮಾಡುವ ಮೂಲಕ ಸಮುದಾಯಕ್ಕೆ ಪ್ರಯೋಜನಕಾರಿಯಾಗಲು ಎಲ್ಲಾ ಮಕ್ಕಳನ್ನು ಜಂತು ನಿವಾರಣೆ ಮಾಡುವುದು ಅವಶ್ಯಕವಾಗಿರುವದರಿಂದ ಇಂದು 1-19 ವರ್ಷದೊಳಗಿನ ಮಕ್ಕಳಿಗೆ ಜಂತು ನಿವಾರಣಾ ಮಾತ್ರೆಯನ್ನು ನೀಡಲಾಗುತ್ತಿದ್ದು. ಯಾವೊಂದು ಮಗು ಕೂಡಾ ಉಳಿಯದಂತೆ ಎಲ್ಲರಿಗೂ ಇಂದೆ ಮಾತ್ರೆ ನುಂಗಿಸುವಂತೆ ತಿಳಿಸಿದರು.
ಇನ್ನೊರ್ವ ಅಥಿತಿಗಳಾದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಸಾಂಕೇತಿಕವಾಗಿ 5 ಮಕ್ಕಳಿಗೆ ಜಂತು ಮಾತ್ರೆಗಳನ್ನು ನುಂಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯಶಸ್ವಿಯಾಗಲೆಂದು ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕಾಕತಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಅನಿಲ ನಾರ್ವೇಕರ ಅವರು ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕಾ ಪಂಚಾಯತ ಸದಸ್ಯ ಯಲ್ಲಪ್ಪಾ ಕೋಳೆಕರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎ.ಬಿ ಪುಂಡಲಿಕ, ಬೆಳಗಾವಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರಿಮತಿ ಎಲ್ ಎಸ್ ಹಿರೇಮಠ, ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ ಎಮ್ ನಾಲತ್ವಾಡ, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ಚಂದ್ರಶೇಖರ ಸುಖಸಾಗರೆ, ಡಾ.ಸಂಜೀವ ನಾಂದ್ರೆ ತಾಲೂಕಾ ಆರೋಗ್ಯಾಧಿಕಾರಿಗಳು ಬೆಳಗಾವಿ ಡಾ.ಬಿ.ಬಿ ದಬಾಡೆ ವೈದ್ಯಾಧಿಕಾರಿಗಳು ಪ್ರಾ ಆ ಕೇಂದ್ರ ಹೊನಗಾ ಇವರು ಉಪಸ್ಥಿತರಿದ್ದರು.
ಸದೃಡ ಭಾರತ ನಿರ್ಮಾಣಕ್ಕಾಗಿ ಎಲ್ಲ ಮಕ್ಕಳಿಗೆ ಜಂತು ನಿವಾರಣಾ ಮಾತ್ರೆ ನುಂಗಿಸಿ; ಡಾ. ಡಿ.ಸಿ ರಾಜಪ್ಪ- Tarun krantiಪ್ರಾರಂಭದಲ್ಲಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ.ಅಪ್ಪಾಸಾಹೇಬ ನರಟ್ಟಿ ಅವರು ಸ್ವಾಗತಿಸಿದರು. ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ. ಐ.ಪಿ ಗಡಾದ ಪ್ರಾಸ್ತಾವಿಕವಾಗಿ ಮಾತನಾಡಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದ ಜಿಲ್ಲೆಯ ಕ್ರೀಯಾ ಯೋಜನೆ ಹಾಗೂ ಕಾರ್ಯಕ್ರಮದ ಉದ್ದೇಶ ಕುರಿತು ಸವಿಸ್ತಾರವಗಿ ಅಂಕಿ ಅಂಶಗಳೊಂದಿಗೆ ವಿವರಿಸಿದರು. ಶ್ರೀ.ಸಿ.ಜಿ.ಅಗ್ನಿಹೋತ್ರಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.Belgaum Police Commissioner Dr. D.C. Rajappa

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

Leave A Reply

 Click this button or press Ctrl+G to toggle between Kannada and English

Your email address will not be published.