ಉತ್ತಮ ಸಮಾಜಕ್ಕಾಗಿ

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ, ನಂತರ ತುಮಕೂರಿಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದರು. ಡಾ.ಶ್ರೀ.ಶಿವಕುಮಾರ್ ಸ್ವಾಮೀಜಿಯವರ ಆಶೀರ್ವಾದ ಪಡೆದರು.

BJP's national president Amit Shah succeeds after AICC president Rahul Gandhi returns

0

ಬೆಂಗಳೂರು:(news belgaum):ರಾಜ್ಯ ವಿಧಾನ ಸಭಾ ಚುನಾವಣೆ ಹತ್ತಿರ ಆಗ್ತಾ ಇದ್ದಂತೆ ರಾಜಕೀಯ ನಾಯಕರ ಚುನಾವಣಾ ಪ್ರಚಾರ ಜೋರಾಗಿ ನಡಿತಾ ಇದೆ. ಚುನಾವಣಾ ಪ್ರಚಾರ ಮುಗಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಿಂದಿರುಗಿದ ಬೆನ್ನಲ್ಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ.

ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ, ನಂತರ ತುಮಕೂರಿಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದರು. ಅಮಿತ್ ಶಾ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ , ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಮತ್ತಿತರರು ಬರಮಾಡಿಕೊಂಡರು. ಮಠಕ್ಕೆ ತೆರಳಿದ ಅಮಿತ್ ಶಾ ಡಾ.ಶ್ರೀ.ಶಿವಕುಮಾರ್ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಶ್ರೀಗಳ ಜೊತೆ 20 ನಿಮಿಷ ರಹಸ್ಯ ಮಾತುಕತೆ ನಡೆಸಿದ ನಂತರ ಮಾತನಾಡಿದ ಅವರು, ಶ್ರೀಗಳ ಭೇಟಿಯಿಂದ ಸಂತಸವಾಗಿದೆ. ಶ್ರೀಗಳ ಆಶೀರ್ವಾದದಿಂದ ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಈ ಬಾರಿ ಚುನಾವಣೆಗೆ ಹೋಗುತ್ತಿದ್ದು, ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಅಮಿತ್ ಶಾ ಮಠಕ್ಕೆ ಬೇಟಿ ನೀಡುವ ಮುನ್ನ ಮಠದ ಆವರಣದಲ್ಲಿ ಸೊಗಡು ಶಿವಣ್ಣ ಬೆಂಬಲಿಗರು ಪ್ರತಿಭಟನೆ ನಡೆಸಿದರು. ತುಮಕೂರು ಬಿಜೆಪಿಯಲ್ಲಿರುವ ಭಿನ್ನಮತ ಮತ್ತೆ ಬಯಲಾಗಿದ್ದು, ಜಿಲ್ಲೆಯಲ್ಲಿ ಸೊಗಡು ಶಿವಣ್ಣನವರನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದು ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿತು. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಸೊಗಡು ಶಿವಣ್ಣ ಪ್ರತಿಭಟನಾಕಾರರ ಮನವೊಲಿಸಿದರು.BJP’s national president Amit Shah succeeds after AICC president Rahul Gandhi returns

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

BJP’s national president Amit Shah succeeds after AICC president Rahul Gandhi returns

Leave A Reply

 Click this button or press Ctrl+G to toggle between Kannada and English

Your email address will not be published.