ಉತ್ತಮ ಸಮಾಜಕ್ಕಾಗಿ

ಸ್ವಾತಂತ್ರ್ಯೋತ್ಸವ ಅಂಗವಾಗಿ 50% ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

Book sales at 50% discount on Independence Day

0

ಸ್ವಾತಂತ್ರ್ಯೋತ್ಸವ ಅಂಗವಾಗಿ 50% ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ
ಬೆಳಗಾವಿ: (news belgaum) ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 2018ರ ಆಗಸ್ಟ್ ಮಾಹೆಯಲ್ಲಿ ಮಾತ್ರ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.50 ರ ರಿಯಾಯಿತಿಯಲ್ಲಿ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎಲ್ಲ ಜಿಲ್ಲೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲ ಜಿಲ್ಲಾವಾರು ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿ ಮಾರಾಟಕ್ಕೆ ಲಭ್ಯವಿದೆ.
ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ವೆಬ್‍ಸೈಟ್:www.kammadapustakapradhikara.com ನಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ ಶೇ.50 ರಿಯಾಯಿತಿಯಲ್ಲಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಅಂಚೆ ಮೂಲಕ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ದೂ: 080-22484516, 22107704 ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Book sales at 50% discount on Independence Day
ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೆಳಗಾವಿ:  ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಧಾನ ಮಾಡಿ ಗೌರವಿಸಲಾಗುವುದು.
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದವರು 2018-19 ನೇ ಸಾಲಿಗಾಗಿ ಆಸಕ್ತಿಯುಳ್ಳವರು ಆಗಸ್ಟ 20 ರಂದು ಸಾಯಂಕಾಲ 5-30 ಗಂಟೆಯೊಳಗಾಗಿ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಕಚೇರಿಯಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2407235 ನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಬೆಳಗಾವಿ: ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ (ಮುಸ್ಲಿಂ,ಜೈನ್,ಕ್ರಿಶ್ಚಿಯನ್,ಬೌದ್ಧ,ಸಿಖ,ಹಾಗೂ ಪಾರ್ಸಿ) ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮತ್ತು ಮೆರಿಟ್ ಕಮ್ ಮಿನ್ಸ್ ವಿದ್ಯಾರ್ಥಿವೇತನದ ನೀಡಲು ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಕನಿಷ್ಟ ಶೇ.50 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಪೋಷಕ/ತಂದೆ ಆದಾಯ 2.00 ಲಕ್ಷ ಮೀರಿರಬಾರದು. (ಮೆಟ್ರಿಕ ನಂತರದ ವಿದ್ಯಾರ್ಥಿ ವೇತನ), ವಿದ್ಯಾರ್ಥಿಯ ಪೋಷಕ/ತಂದೆ ಆದಾಯ 2.50 ಲಕ್ಷ ಮೀರಿರಬಾರದು.(ಮೆರಿಟ ಕಮ್ ಮಿನ್ಸ ವಿದ್ಯಾರ್ಥಿವೇತನ), ಕರ್ನಾಟಕ ವಿದ್ಯಾಥಿಯು ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಅರ್ಜಿ ಸಲ್ಲಿಸಬಹುದು. ಬೇರೆ ಯಾವುದೆ ರಾಜ್ಯದ ಅಭ್ಯರ್ಥಿಗಳು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಸ್ವೀಕರಿಸಿದ ಅರ್ಜಿಗಳನ್ನು ಕೂಲಕುಂಷವಾಗಿ ಪರಿಶೀಲಿಸಿ ನೈಜವಾಗಿರುವ ಅರ್ಹ ವಿದ್ಯಾರ್ಥಿಗಳ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಪ್ರತಿವಾರದ ಕೊನೆಯ ದಿನದಂದು ಸಾಪ್ಟ್‍ಕಾಪಿ ಹಾಗೂ ಹಾರ್ಡ್‍ಕಾಪಿಗಳನ್ನು ಸಂಬಂಧಪಟ್ಟ ಪ್ರಾಂಶುಪಾಲರು, ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ/ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಲ್ಲಿಸಲು ಸೂಚಿಸಲಾಗಿದೆ
ಆನ್‍ಲೈನ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಲು ಕೊರಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: https://scholarships.gov.in ಅಥವಾ ದೂ:0831-2451264ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರೇಗಾ ಓಂಬುಡ್ಸಮನ್‍ರಾದ ಡಾ. ಎ.ಜೆ. ಧುಮಾಳೆ ಅವರ ಪ್ರವಾಸ
ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತಿಯ ನರೇಗಾ ಓಂಬುಡ್ಸಮನ್‍ರಾದ ಡಾ. ಎ. ಜೆ. ಧುಮಾಳೆ ಅವರು ಆಯಾ ತಾಲೂಕಿನ ತಾಲೂಕ ಪಂಚಾಯತ ಕಾರ್ಯಾಲಯಗಳಲ್ಲಿ ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಕುರಿತು ಬಂದ ದೂರುಗಳ ವಿಚಾರಣೆ ನಡೆಸುವರು ಹಾಗೂ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವರು.
ಅವರು ಆಗಸ್ಟ್ 6 ರಂದು ಬೆಳಿಗ್ಗೆ 11 ಗಂಟೆಗೆ ಖಾನಾಪೂರ, ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕೋಡಿ, ಮಧ್ಯಾಹ್ನ 3 ಗಂಟೆಗೆ ಅಥಣಿ, ಆಗಸ್ಟ್ 17 ರಂದು ಬೆಳಿಗ್ಗೆ 11 ಗಂಟೆಗೆ ಹುಕ್ಕೇರಿ, ಮಧ್ಯಾಹ್ನ 3 ಗಂಟೆಗೆ ಗೋಕಾಕ, ಆಗಸ್ಟ್ 25 ರಂದು ಬೆಳಿಗ್ಗೆ 11 ಗಂಟೆಗೆ ಸವದತ್ತಿ, ಮಧ್ಯಾಹ್ನ 3 ಗಂಟೆಗೆ ರಾಮದುರ್ಗ, ಆಗಸ್ಟ್ 28 ರಂದು ಬೆಳಿಗ್ಗೆ 11 ಗಂಟೆಗೆ ಬೈಲಹೊಂಗಲ ತಾಲೂಕಿಗೆ ಭೇಟಿ ನೀಡುವರು.
ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಠಾನಗೊಂಡ ಹಾಗೂ ಅನುಷ್ಠಾನÀಗೊಳ್ಳುತ್ತಿರುವ ಕಾಮಗಾರಿಗಳಲ್ಲಿ ಯಾವರೀತಿ ಲೋಪದೋಷಗÀಳಾಗಿವೆ ಎಂಬ ಬಗ್ಗೆ ಸ್ಪಷ್ಟವಾಗಿ ನಮೂದಿಸಿ ಲಿಖಿತ ದೂರುಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಓಂಬುಡ್ಸಮನ್ ಕಚೇರಿ ಬೆಳಗಾವಿ ಅವರಿಗೆ ಸಲ್ಲಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.