ಉತ್ತಮ ಸಮಾಜಕ್ಕಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ನಾರಾಯಣ ಗುರುಗಳ ತತ್ವಾದರ್ಶ ಅಳವಡಿಸಿಕೊಳ್ಳಿ

news belagavi

0

ಬೆಳಗಾವಿ:(news belagavi) ಸಮಾಜದಲ್ಲಿನ ಅಸ್ಪøಶ್ಯತೆ ಹಾಗೂ ಮೌಢ್ಯತೆಯನ್ನು ಹೋಗಲಾಡಿಸಲು ಹೋರಾಟ ನಡೆಸಿದವರಲ್ಲಿ ನಾರಾಯಣ ಗುರುಗಳು ಪ್ರಮುಖರು ಎಂದು ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸೋಮವಾರ (ಆ.27) ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾರಾಯಣ ಗುರುಗಳನ್ನು ಒಂದೇ ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು. ಮಹಾನ ಪುರುಷರ ಜೀವನ, ಹೋರಾಟಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದರು.
ನಾರಾಯಣ ಗುರುಗಳ ಕುರಿತು ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ನಡೆಯಬೇಕು. ಅವರ ಜೀವನ, ಸಂದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು. ಇಂದಿನ ಯುವ ಜನಾಂಗ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
News Belgaum-ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮ ನಾರಾಯಣ ಗುರುಗಳ ತತ್ವಾದರ್ಶ ಅಳವಡಿಸಿಕೊಳ್ಳಿಭದ್ರಾವತಿಯ ಹೆಬ್ಬೂರು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಆನಂದ ಪೂಜಾರಿ ಸೋಮೇಶ್ವರ ಅವರು ಉಪನ್ಯಾಸ ನೀಡಿ, ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು ಎಂದು ಸಾರಿ ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.
ನಾರಾಯಣ ಗುರುಗಳು ಶೋಷಿತರ ಬಾಳಿಗೆ ಬೆಳಕಾಗಿದ್ದರು. ಅನೇಕ ಗ್ರಂಥಗಳನ್ನು ರಚಿಸಿದ್ದರು. ಬಾಲ್ಯದಿಂದಲೂ ಅವರು ಆಧ್ಯಾತ್ಮದತ್ತ ಒಲವನ್ನು ಹೊಂದಿದ್ದರು. ಜನರ ಕಷ್ಟಗಳೊಂದಿಗೆ ಬೆರೆಯುತ್ತಿದ್ದರು. ಕರ್ನಾಟಕದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿ ಮಹಾನ ಪುರುಷರಾದಂತೆ ಕೇರಳದಲ್ಲಿ ನಾರಾಯಣ ಗುರುಗಳು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರ್ಥಿಕ ಸುಧಾರಣೆಗೆ ಶ್ರಮಿಸಿ ಮಹಾನ ಪುರುಷರಾಗಿದ್ದಾರೆ ಎಂದರು.
ಸ್ವಾಮಿ ವಿವೇಕಾನಂದರು, ರವಿಂದ್ರನಾಥ ಟ್ಯಾಗೋರ ಹಾಗೂ ಮಹಾತ್ಮಾ ಗಾಂಧೀಜಿ ಅವರಂಥ ಮಹಾನ ನಾಯಕರು ನಾರಾಯಣ ಗುರುಗಳಿಂದ ಪ್ರಭಾವಿತರಾಗಿದ್ದರು. ಕೇರಳದಲ್ಲಿ ನಾಗರಿಕ ಹಕ್ಕುಗಳನ್ನು ಪಡೆಯುವುದಕ್ಕಾಗಿ ನಾರಾಯಣ ಗುರುಗಳ ನೇತೃತ್ವದಲ್ಲಿ ನಡೆದ ವೈಕಿಮ್ ಚಳವಳಿಯಲ್ಲಿ ಮಹಾತ್ಮಾ ಗಾಂಧೀಜಿ ಅವರು ಕೂಡ ಸ್ವ ಆಸಕ್ತಿಯಿಂದ ಭಾಗವಹಿಸಿ ಚಳವಳಿಗೆ ಬೆಂಬಲ ನೀಡಿದ್ದರು ಎಂದು ತಿಳಿಸಿದರು.
ಜ್ಞಾನದಿಂದ ಸ್ವಾವಲಂಭಿ ಬದುಕು ನಡೆಸಬಹುದು, ಸಮಾಜದಲ್ಲಿ ಸಂಘಟನೆ ಅವಶ್ಯ, ದುಶ್ಚಟಗಳಿಂದ ದೂರವಿರಬೇಕೆಂದು ನಾರಾಯಣ ಗುರುಗಳು ಜನರಲ್ಲಿ ಅರಿವು ಮೂಡಿಸುತ್ತಿದ್ದರು, ಸರಳತೆಗೆ ಪ್ರೋತ್ಸಾಹಿಸುತ್ತಿದ್ದರು. ಸರ್ವಧರ್ಮಗಳಲ್ಲಿನ ಒಳ್ಳೆಯ ಅಂಶಗಳನ್ನು ಅವರು ಗೌರವಿಸುತ್ತಿದ್ದರು. ಅಹಿಂಸೆಯಿಂದ ಸಮಾಜ ಸುಧಾರಣೆ ಮಾಡಬೇಕೆಂಬುದು ಅವರ ಧ್ಯೇಯವಾಗಿತ್ತು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಅವರು ಯಾತ್ರೆ ಕೈಗೊಂಡಿದ್ದರು ಎಂದು ಹೇಳಿದರು.
ಇಂದಿನ ವಿದ್ಯಾರ್ಥಿಗಳಿಗೆ ನಾರಾಯಣ ಗುರುಗಳ ಬಗ್ಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಪಠ್ಯಪುಸ್ತಕಗಳಲ್ಲಿ ನಾರಾಯಣ ಗುರುಗಳ ಜೀವನ, ಸಂದೇಶ ಸಾರುವ ಪಾಠವನ್ನು ಅಳವಡಿಸಬೇಕೆಂದು ಮನವಿ ಮಾಡಿದರು.

ನಾರಾಯಣ ಗುರು ಜಯಂತಿಯ ಮೆರವಣಿಗೆಯನ್ನು ರದ್ದುಗೊಳಿಸಿ, ಆ ಹಣವನ್ನು ಜಿಲ್ಲಾಧಿಕಾರಿಗಳ ಮೂಲಕ ಕೊಡಗು ನೆರೆ ಸಂತ್ರಸ್ಥರಿಗೆ ಪರಿಹಾರವಾಗಿ ನೀಡಿರುವುದು ಶ್ಲಾಘನೀಯ ಎಂದು ಮುಖಂಡರನ್ನು ಹಾಗೂ ಅಧಿಕಾರಿಗಳನ್ನು ಅನಂದ ಪೂಜಾರಿ ಅವರು ಅಭಿನಂದಿಸಿದರು.
ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರು ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ, ತಹಶೀಲ್ದಾರ ಮಂಜುಳಾ ನಾಯಕ, ಸಮಾಜದ ಮುಖಂಡರಾದ ವಿಜಯ ಸಾಲಿಯಾನ, ಸುನೀಲ ಪೂಜಾರಿ, ಕರಿಯಣ್ಣ ಪೂಜಾರಿ, ಸುಧೀರಕುಮಾರ ಸಾಲಿಯಾನ, ಸುಜನ ಕುಮಾರ, ಚಂದ್ರಾವತಿ ಪೂಜಾರಿ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಗರದ ಸರ್ಧಾರ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ ಅವರು ಸ್ವಾಗತಿಸಿದರು. ಚಂದ್ರ ಪೂಜಾರಿ ಅವರು ನಿರೂಪಿಸಿದರು.

Leave A Reply

 Click this button or press Ctrl+G to toggle between Kannada and English

Your email address will not be published.