ಉತ್ತಮ ಸಮಾಜಕ್ಕಾಗಿ

ಗ್ರಾಮಗಳ ಸ್ವಚ್ಛತೆಗೆ ಶೌಚಾಲಯ ನಿರ್ಮಿಸಿಕೊಳ್ಳಿ: ಸಿಇಒ ರಾಮಚಂದ್ರನ್

Build a toilet for village cleanliness: CEO Ramachandran

0

ಬೆಳಗಾವಿ: news belgaum ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಮನೆÀಗೊಂದು ಶೌಚಾಲಯ ನಿರ್ಮಿಸಿಕೊಳ್ಳಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್. ಅವರು ಕರೆ ನೀಡಿದರು.
ರಾಮದುರ್ಗ ತಾಲೂಕಿನ ಓಬಳಾಪೂರ ಗ್ರಾಮಕ್ಕೆ ಶನಿವಾರ (ಆ.4) ಬೆಳಿಗ್ಗೆ 6.30 ಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.
ಒಬ್ಬ ವ್ಯಕ್ತಿ ಶುಚಿತ್ವ ಹಾಗೂ ಆರೋಗ್ಯವಾಗಿ ಬದುಕಲು ಶೌಚಾಲಯದ ಅವಶ್ಯಕತೆ ಇದೆ. ಬಯಲು ಶೌಚಕ್ಕೆ ಹೋಗುವುದರಿಂದ ವಯಸ್ಕ ಹೆಣ್ಣು ಮಕ್ಕಳು, ಮಹಿಳೆಯರ ಪರಿಸ್ಥಿತಿ ಚಿಂತಾಜನಕವಾಗಿದೆ. ಆದ್ದರಿಂದ ಮನೆಗೊಂದು ಶೌಚಾಲಯವನ್ನು ಕಟ್ಟಿಸಿಕೊಂಡು, ಬಳಕೆ ಮಾಡಲು ತಿಳಿಸಿದರು.
“ನಿಮ್ಮದೇ ಗ್ರಾಮ ನಿಮ್ಮದೇ ಸ್ವಚ್ಛತೆ” ಎಂಬ ಸಂದೇಶವನ್ನು ನೀಡುತ್ತಾ, ಗ್ರಾಮದಲ್ಲಿ ಈಗಾಗಲೇ ಶೌಚಾಲಯಗಳನ್ನು ಕಟ್ಟಿಸಿಕೊಂಡಿರುವ ಮಹಿಳೆಯರು ಬೇರೆಯವರಿಗೂ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ಪ್ರೇರೆಪಿಸಬೇಕೆಂದು ತಿಳಿಸಿದರು.
News Belgaum-ಗ್ರಾಮಗಳ ಸ್ವಚ್ಛತೆಗೆ ಶೌಚಾಲಯ ನಿರ್ಮಿಸಿಕೊಳ್ಳಿ: ಸಿಇಒ ರಾಮಚಂದ್ರನ್ 2ಸ್ವಚ್ಛ ಬಾರತ ಮಿಷನ್ ಯೋಜನೆಯು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೂ ಶೌಚಾಲಯ ನಿರ್ಮಾಣದ ಗುರಿಯನ್ನು ನೀಡಿದ್ದು, ಪ.ಜಾ ಮತ್ತು ಪರಿಶಿಷ್ಟ ಪಂಗಡದವರಿಗೆ ತಲಾ ರೂ.15 ಸಾವಿರ ಹಾಗೂ ಉಳಿದ ಫಲಾನುಭವಿಗಳಿಗೆ ರೂ.12 ಸಾವಿರ ಸಹಾಯಧನವನ್ನು ನೀಡಲಾಗುವುದು ಶೌಚಾಲಯ ನಿರ್ಮಾಣ ಮಾಡಲು ಕೇವಲ 4×4 ಪೂಟ್ ಜಾಗವಿದ್ದರೆ ಸಾಕು, ಅಷ್ಟರಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಬಹುದು ಎಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಮಕ್ಕಳೊಂದಿಗೆ ಸಮಾಲೋಚನೆ:
ಗ್ರಾಮದ ಶಾಲೆಗೆ ಭೇಟಿ ನೀಡಿದ ಸಿಇಒ ರಾಮಚಂದ್ರನ್ ಅವರು, ಸತ್ಯಾಗ್ರಹದ ಮೂಲಕ ತನ್ನ ಮನೆಯಲ್ಲಿ ಶೌಚಾಲಯವನ್ನು ಕಟ್ಟಿಸಿಕೊಂಡ ಕೊಪ್ಪಳ ಜಿಲ್ಲೆಯ ಮಲ್ಲಮ್ಮ ಎಂಬ ವಿದ್ಯಾರ್ಥಿನಿಯ ಬಗ್ಗೆ ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.
ಶೌಚಾಲಯದ ಮಹತ್ವ ಮತ್ತು ಬಯಲು ಶೌಚಕ್ಕೆ ಹೋಗುವುದರಿಂದ ಆರೋಗ್ಯದ ಮೇಲೆ ಆಗುವಂತಹ ತೊಂದರೆಗಳು ಬಗ್ಗೆ ಮಕ್ಕಳಿಗೆ ತಿಳಿಹೇಳಿದರು. ತಮ್ಮ ಮನೆಗಳಲ್ಲಿ ಶೌಚಾಲಯಗಳನ್ನು ಕಟ್ಟಿಸಿಕೊಳ್ಳಲು ಮತ್ತು ಶೌಚಾಲಯಗಳನ್ನು ಬಳಸುವಂತೆ ಪೋಷಕರಿಗೆ, ಹಿರಿಯರಿಗೆ ಮನವೊಲಿಸಲು ಹೇಳಿದರು.
ನಂತರ ಕರ್ನಾಟಕ ಕಸ್ತೂರಿಬಾ ಬಾಲಿಕಾ ವಸತಿ ನಿಲಯ ಮತ್ತು ಹಿಂದುಳಿದ ವರ್ಗಗಳ ವಸತಿ ನಿಲಯಗಳ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ರಾಮಚಂದ್ರನ್ ಅವರು, ಜೀವನದ ಸರ್ವತೋಮುಖ ಆಭಿವೃದ್ಧಿಗೆ ವಿದ್ಯೆ ಪ್ರಮುಖ ಅಸ್ತ್ರವಾಗಿದೆ. ಎಂದರು.
ಗ್ರಾಮಗಳ ಸ್ವಚ್ಛತೆಗೆ ಶೌಚಾಲಯ ನಿರ್ಮಿಸಿಕೊಳ್ಳಿ: ಸಿಇಒ ರಾಮಚಂದ್ರನ್- Tarun kranti 1ಬಾಲ್ಯ ವಿವಾಹ ಸಮಾಜಕ್ಕೆ ದೊಡ್ಡ ಪಿಡುಗಾಗಿದ್ದು, ಪೋಷಕರು ಒತ್ತಾಯದಿಂದ ಬಾಲ್ಯವಿವಾಹ ಮಾಡುತ್ತಿದ್ದರೆ ತಾವು ನಾನು ಶಿಕ್ಷಣವನ್ನು ಪೂರೈಸಿಯೇ ಮದುವೆಯಾಗುವುದಾಗಿ ತಿಳಿಸಬೇಕೆಂದು ಹೇಳಿದರು. ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಬಾಲ್ಯವಿವಾಹ ನಡೆಯುವುದು ಕಂಡುಬಂದರೆ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ಎಂದು ತಿಳಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಎ.ಎಂ. ಪಾಟೀಲ, ರಾಮದುರ್ಗ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರಾಜಶೇಖರ ನಿಡೋನಿ, ಸಹಾಯಕ ನಿರ್ದೇಶಕ (ಗ್ರಾಉ) ಸೋಮರಡ್ಡಿ ಹೊಂಗಲ,

ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ತಾಲೂಕು ಯೋಜನಾಧಿಕಾರಿಗಳು, ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳು, ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.Build a toilet for village cleanliness: CEO Ramachandran

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.