ಉತ್ತಮ ಸಮಾಜಕ್ಕಾಗಿ

ಯಾವುದೇ ಕ್ಷಣದಲ್ಲೂ ನಮ್ಮ ಮೇಲೆ ಸಿಬಿಐ ದಾಳಿ ನಡೆಸಬಹುದು: ಸಂಸದ ಡಿ.ಕೆ ಸುರೇಶ್

CBI can attack us at any moment: MP DK Suresh

0

ಬೆಂಗಳೂರು:(news belagavi) ಡಿ.ಕೆ ಶಿವಕುಮಾರ್ ಮತ್ತು ನನ್ನ ಕುಟುಂಬದ ವಿರುದ್ಧ ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ನಮ್ಮ ಬೆಂಬಲಿಗರು, ಸ್ನೇಹಿತರು 11 ಜನರ ವಿರುದ್ಧ ಸಿಬಿಐ ಸರ್ಚ್ ವಾರೆಂಟ್ ಜಾರಿ ಮಾಡುವ ಮಾಹಿತಿ ಸಿಕ್ಕಿದೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾನು ಮತ್ತು ಡಿ.ಕೆ ಶಿವಕುಮಾರ್ ನಮ್ಮ ಬೆಂಬಲಿಗರು ಸ್ನೇಹಿತರು ಕುಟುಂಬಸ್ಥರು ಸೇರಿ 11 ಜನರ ಮೇಲೆ ಸಿಬಿಐ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿದರು.
News Belgaum-Auto Draft 12ಯಾವುದೇ ಕ್ಷಣದಲ್ಲೂ ವಾರೆಂಟ್ ನೀಡಿ ದಾಳಿ ನಡೆಸಬಹುದು, ದಾಳಿ ನಡೆಸಿ ನಮ್ಮ ವಿರುದ್ಧ ಪ್ರಕರಣ ದಾಖಲಿಸಲು ಮೋದಿ ಮತ್ತು ಅಮಿತ್ ಶಾ ಸೂಚನೆ ನೀಡಿದ್ದಾರೆ. ಈ ಬಗ್ಗೆ ನಮಗೆ ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇದರ ವಿರುದ್ಧ ನಾವು ಕಾನೂನಿನ ಮಾರ್ಗದಲ್ಲೇ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಸಿಬಿಐ ದಾಳಿಯ ಮೂಲಕ ಮೋದಿ‌ ಮತ್ತು ಅಮಿತ್ ಶಾ ರಿಂದ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದ ಡಿ.ಕೆ ಸುರೇಶ್, ಮೋದಿ‌ ಮತ್ತು ಅಮಿತ್ ಶಾ ರಿಂದ ಸೇಡಿನ ರಾಜಕಾರಣಕ್ಕೆ ನಾವು ಎದರುವುದಿಲ್ಲ. ನಾವು ದೇಶದ ಕಾನೂನನ್ನು ಗೌರವಿಸುತ್ತೇವೆ‌. ಕಾನೂನಿನ ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದು, ಯಾವುದೇ ಬೆದರಿಕೆಗಳಿಗೆ ಎದರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ನಂತರ ಮಾತನಾಡಿದ ಡಿ.ಕೆ ಶಿವಕುಮಾರ್ ನಮಗೆ ಮೂರ್ನಾಲ್ಕು ತಿಂಗಳಿಂದ ಅನೇಕ ಮಾಹಿತಿಗಳು ಸಿಕ್ಕಿವೆ. ಎಲ್ಲೆಲ್ಲಿ, ಯಾರ್ಯಾರು ಸಭೆ ನಡೆಸಿ ಈ ತೀರ್ಮಾನ ಮಾಡಿದ್ದಾರೆ ಎಂಬ ಗೌಪ್ಯತೆ ನಮಗೆ ತಿಳಿದಿದೆ. ಅವರ ಹೆಸರುಗಳನ್ನು ಹೇಳುವುದು ಬೇಡ ಎಂದರು.
ನಮ್ಮ ಕುಟುಂಬದವರನ್ನು ಬಗ್ಗಿಸಬಹುದು ಎಂದುಕೊಂಡಿದ್ದರೆ ನಾವು ಜಗ್ಗುವವರಲ್ಲ. ನಾವು ಎಲ್ಲದಕ್ಕೂ ಸಿದ್ದರಿದ್ದೇವೆ. ನಾವು ಎಂದು ತಪ್ಪು ಮಾಡಿದವರಲ್ಲ ಕಾನೂನು ಮೀರಿ ರಾಜಕಾರಣ ಮಾಡಿದವರಲ್ಲ. ಅಕ್ರಮಗಳನ್ನು ಮಾಡಿದವರಲ್ಲ. ಸುಳ್ಳು ಕೇಸ್ ದಾಖಲಿಸಿ ನಮ್ಮ ಧ್ವನಿ‌ ಅಡಗಿಸಬಹುದು ಎಂದು ಕೊಂಡಿದ್ದರೆ ಅದು ನಿಮ್ಮ ಭ್ರಮೆ ಎಂದು ಹೇಳಿದರು.
ಪ್ರಜಾಪ್ರಭುತ್ವದ ಎಲ್ಲಾ ಸಂಸ್ಥೆಗಳ ಬಗ್ಗೆ ನಮಗೆ ಗೌರವವಿದೆ. ಆದರೆ ಅವುಗಳನ್ನು ಬಿಜೆಪಿ ದುರುಪಯೋಗ ಪಡಿಸಿ ಕೊಳ್ಳುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.