ಉತ್ತಮ ಸಮಾಜಕ್ಕಾಗಿ

ವಾರದೊಳಗೆ ವರದಿ ಸಲ್ಲಿಕೆ: ಕೇಂದ್ರ ತಂಡ

0

ಬೆಳಗಾವಿ: “ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಕಂಡುಬಂದಿದ್ದು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ತಂಡವು ತಿಳಿಸಿದೆ.
ಸೋಮನಟ್ಟಿ ಗ್ರಾಮದ ವ್ಯಾಪ್ತಿಯಲ್ಲಿರುವ ಜಮೀನುಗಳಲ್ಲಿ ಉಂಟಾಗಿರುವ ಬೆಳೆಹಾನಿ ಪರಿಶೀಲನೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಂಡದ ಸದಸ್ಯರು, ಬೆಳಗಾವಿ ಜಿಲ್ಲೆಯಲ್ಲಿ ಪರಿಸ್ಥಿತಿ ಭೀಕರವಾಗಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದರು.
ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ, ಬೆಳೆಹಾನಿ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಆದಷ್ಟು ಬೇಗನೇ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್.ಬಿ.ತಿವಾರಿ, ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ವಿಭಾಗದ ಸಲೀಂ ಹೈದರ್ ಹಾಗೂ ಕೇಂದ್ರ ವಿದ್ಯುಚ್ಛಕ್ತಿ ಪ್ರಾಧಿಕಾರದ ಉಪನಿರ್ದೇಶಕ ಕಮಲ್ ಚವಾಣ ಕೇಂದ್ರ ಬರ ಅಧ್ಯಯನ ತಂಡದಲ್ಲಿದ್ದರು.
ಜಿಲ್ಲಾಧಿಕಾರಿ ಎನ್.ಜಯರಾಮ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್., ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಜೆ.ಪಾಟೀಲ, ಉಪ ನಿರ್ದೇಶಕ ಎಚ್.ಡಿ.ಕೋಳೆಕರ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.